Thursday, September 24, 2026
Thursday, September 24, 2026

ಐರೋಡಿ ಪರಿಸರದಲ್ಲಿ ಪಂಚವರ್ಣದ ಹಸಿರು ಹೆಜ್ಜೆಯ 311ನೇ ಅಭಿಯಾನ

ಐರೋಡಿ ಪರಿಸರದಲ್ಲಿ ಪಂಚವರ್ಣದ ಹಸಿರು ಹೆಜ್ಜೆಯ 311ನೇ ಅಭಿಯಾನ

Date:

ಕೋಟ, ಜು.26: ಪ್ರಕೃತಿಗಾಗಿ ಸಮಯ ಮೀಸಲಿರಿಸಿ, ಅದಕ್ಕಾಗಿ ಯಾವುದೇ ವೇದಿಕೆಗಳು ಬೇಕಿಲ್ಲ ಅದೊಂದು ದೈವಿಕ ಕಾರ್ಯ ಎಂದು ಭಾವಿಸಿ ಭಾಗಿಯಾಗಿ ಎಂದು ಪರಿಸರ ಪ್ರೇಮಿ ಅವಿನಾಶ್ ಕಾಮತ್ ಹೇಳಿದರು. ಭಾನುವಾರ ಕೋಟದ ಪಂಚವರ್ಣ ಯುವಕ ಮಂಡಲ ಪ್ರವರ್ತಿತ ಸಂಸ್ಥೆ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ 311 ನೇ ಪರಿಸರ ಸ್ನೇಹಿ ಅಭಿಯಾನದ ಪ್ರಯುಕ್ತ ಗೀತಾನಂದ ಫೌಂಡೇಶನ್ ಮಣೂರು ಪೇತ್ರಿ ಅನ್ನಪೂರ್ಣ ನರ್ಸರಿ, ಬ್ರಹ್ಮಾವರ ಕಾರ್ಯನಿರತ ಪತ್ರಕರ್ತರ ಸಂಘ ಇವರ ಸಹಯೋಗದೊಂದಿಗೆ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ, ಗೋಳಿಬೆಟ್ಟು ಸರಕಾರಿ ಕಿರಿಯ ಪ್ರಾಥಮಿಕ ಶಾಲೆ ಸಂಯೋಜನೆಯೊಂದಿಗೆ ಹಸಿರು ಹೆಜ್ಜೆ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದರು. ಪಂಚವರ್ಣದ ನಿರಂತರ ಪಕೃತಿ ಸೇವೆಯನ್ನು ಶ್ಲಾಘಿಸಿದರು.

ಪಾರಿಜಾತ, ಲಕ್ಷ್ಮಣ ಫಲವನ್ನು ನೆಡಲಾಯಿತು ಹಾಗೂ ಭಾಗಿಯಾದ ಪರಿಸರಾಸಕ್ತರಿಗೆ ಪರಿಸರ ಜಾಗೃತಿ ಪ್ರತಿಜ್ಞಾವಿಧಿಯನ್ನು ಪಂಚವರ್ಣದ ಸದಸ್ಯ ಮಹೇಶ್ ಬೆಳಗಾವಿ ಬೋಧಿಸಿದರು. ಅಧ್ಯಕ್ಷತೆಯನ್ನು ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ವಹಿಸಿದ್ದರು. ಮುಖ್ಯ ಅಥಿತಿಗಳಾಗಿ ರೋಟರಿ ಕ್ಲಬ್ ಹಂಗಾರಕಟ್ಟೆ ಸಾಸ್ತಾನ ಅಧ್ಯಕ್ಷೆ ಕುಸುಮಾ ಮನೋಜ್, ಕಾರ್ಯದರ್ಶಿ ಕೆ.ರಾಜಾರಾಮ್ ಐತಾಳ್, ಗೋಳಿಬೆಟ್ಟು ಶಾಲಾ ಎಸ್ ಡಿಎಂಸಿ ಮಾಜಿ ಉಪಾಧ್ಯಕ್ಷ ವಿಜಯ ಪೂಜಾರಿ, ಮಾಜಿ ತಾ.ಪಂ ಅಧ್ಯಕ್ಷೆ ಜ್ಯೋತಿ ಉದಯ್ ಕುಮಾರ್, ಗೊಳಿಬೆಟ್ಟು ಬೊಬ್ಬರ್ಯ ಸಂಘಟನೆಯ ಕಾರ್ಯದರ್ಶಿ ರಾಜೇಶ್ ಪೂಜಾರಿ, ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ, ನಿವೃತ್ತ ಪೋಲಿಸ್ ಅಧಿಕಾರಿ ಲಕ್ಷ್ಮೀನಾರಾಯಣ ಉಪಸ್ಥಿತರಿದ್ದರು. ಸದಸ್ಯ ಪ್ರಭಾಕರ್ ಮಣೂರು ಸ್ವಾಗತಿಸಿದರು. ಮಹಿಳಾ ಮಂಡಲದ ಕಾರ್ಯಾಧ್ಯಕ್ಷೆ ಕಲಾವತಿ ಅಶೋಕ್ ನಿರೂಪಿಸಿದರು. ಗೋಳಿಬೆಟ್ಟು ಶಾಲಾ ಮುಖ್ಯ ಶಿಕ್ಷಕ ಮಹೇಶ್ ಮೊಗವೀರ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!