Sunday, October 18, 2026
Sunday, October 18, 2026

ಪಲಿಮಾರು: ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ

ಪಲಿಮಾರು: ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ

Date:

ಶಿರ್ವ, ಜು.27: ಪಲಿಮಾರು ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ ವಿವಿಧ ಸವಲತ್ತುಗಳ ವಿತರಣಾ ಕಾರ್ಯಕ್ರಮ ಸೋಮವಾರ ಪಲಿಮಾರು ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕರಾದ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ಶೇಖಡಾ 25 ನಿಧಿಯಿಂದ 2 ಫಲಾನುಭವಿಗಳಿಗೆ ಮನೆ ರಿಪೇರಿ ಸಹಾಯಧನ, 2 ಫಲಾನುಭವಿಗಳಿಗೆ ವೈದ್ಯಕೀಯ ಸಹಾಯಧನ ಹಾಗೂ 5 ಶೇಖಡ ನಿಧಿಯಿಂದ 2 ಫಲಾನುಭವಿಗಳಿಗೆ ವೈದ್ಯಕೀಯ ಸಹಾಯಧನ ಚಕ್ ವಿತರಣೆ ಮಾಡಲಾಯಿತು. ಪಲಿಮಾರು ದೇವಸ್ಥಾನ ರಥಬೀದಿ ರಸ್ತೆಗೆ ಶಾಸಕರಾದ ಶಿಫಾರಸ್ಸಿನ ಮೇರೆಗೆ 21 ಲಕ್ಷ ರೂಪಾಯಿ ಅನುದಾನದ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ನೆರವೇರಿಸಿದರು.

ಕಾಪು ತಹಶೀಲ್ದಾರರಾದ ಅಂನತ ಶಂಕರ್, ಪ್ರಭಾರ ಸಹಾಯಕ ನಿರ್ದೇಶಕರಾದ ಶಶಿಧರ್, ಪಲಿಮಾರು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ಸುನಿಲ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಚಂದ್ರಕಲಾ, ಪಲಿಮಾರು ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!