Sunday, October 18, 2026
Sunday, October 18, 2026

ಆತ್ರಾಡಿ ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ

ಆತ್ರಾಡಿ ಗ್ರಾಮಸ್ಥರ ಅಹವಾಲು ಸ್ವೀಕಾರ; ವಿವಿಧ ಸವಲತ್ತು ವಿತರಣೆ

Date:

ಹಿರಿಯಡಕ, ಜು.27: ಆತ್ರಾಡಿ ಗ್ರಾಮ ಪಂಚಾಯತ್ ವ್ಯಾಪ್ತಿಯ ಗ್ರಾಮಸ್ಥರ ಅಹವಾಲು ಸ್ವೀಕಾರ ವಿವಿಧ ಸವಲತ್ತು ವಿತರಣೆ ವಿತರಣೆ ಕಾರ್ಯಕ್ರಮ ಸೋಮವಾರ ಆತ್ರಾಡಿ ಗ್ರಾಮ ಪಂಚಾಯತ್ ಸಭಾಂಗಣದಲ್ಲಿ ಶಾಸಕ ಗುರ್ಮೆ ಸುರೇಶ್ ಶೆಟ್ಟಿ ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಪಂಚಾಯತ್ ನ 25 ಶೇಖಡಾ ಅನುದಾನದಲ್ಲಿ 14 ಫಲಾನುಭವಿಗಳಿಗೆ ವೈದ್ಯಕೀಯ ಸಹಾಯಧನ ಹಾಗೂ 4 ಫಲಾನುಭವಿಗಳಿಗೆ ಕೌಶಲ್ಯಾಭಿವೃದ್ಧಿ ಸಾಹಯಧನ 2 ಫಲಾನುಭವಿಗಳಿಗೆ ಶವಸಂಸ್ಕಾರ ಸಹಾಧನ 5 ಶೇಖಡಾ ಅನುದಾನದಲ್ಲಿ 20 ಜನ ಫಲಾನುಭವಿಗಳಿಗೆ ವಿಕಲಚೇತನರಿಗೆ ಸಹಾಧನ ವಿತರಣೆ ಮಾಡಲಾಯಿತು.

ಶಾಸಕರ ಶಿಫಾರಸ್ಸಿನ ಮೇರೆಗೆ ವಿವಿಧ ರಸ್ತೆಗಳ ಅಭಿವೃದ್ಧಿಗೆ ಅನುದಾನ ಮಂಜೂರಾಗಿ ಕಾಮಗಾರಿ ಪೂರ್ಣಗೊಂಡಿದ್ದು ಇದರ ಉದ್ಘಾಟನೆಯನ್ನು ನೆರವೇರಿಸಲಾಯಿತು.

ಉಡುಪಿ ತಹಶೀಲ್ದಾರರಾದ ಗುರುರಾಜ್, ಉಡುಪಿ ತಾಲೂಕು ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ಆತ್ರಾಡಿ ಗ್ರಾಮ ಪಂಚಾಯತ್ ಆಡಳಿತಾಧಿಕಾರಿಗಳಾದ ಸಂದೀಪ್ ಶೆಟ್ಟಿ, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಸಿದ್ದೇಶ್, ಗ್ರಾಮ ಆಡಳಿತಾಧಿಕಾರಿಗಳಾದ ಸುಮಿತ್ರಾ, ಗ್ರಾಮ ಪಂಚಾಯತ್ ಮಾಜಿ ಸದಸ್ಯರು, ತಾಲೂಕು ಮಟ್ಟದ ಅಧಿಕಾರಿಗಳು, ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!