Saturday, October 17, 2026
Saturday, October 17, 2026

ಸಂಸ್ಕೃತ ಪ್ರತಿಭಾ ಪುರಸ್ಕಾರ

ಸಂಸ್ಕೃತ ಪ್ರತಿಭಾ ಪುರಸ್ಕಾರ

Date:

ಉಡುಪಿ, ಜು.27: ಉಡುಪಿ ಶ್ರೀ ಕೃಷ್ಣಮಠದ ರಾಜಾಂಗಣದಲ್ಲಿ ಪರ್ಯಾಯ ಶ್ರೀ ಶೀರೂರು ಮಠ ಶ್ರೀಕೃಷ್ಣಮಠ ಉಡುಪಿ, ಕರ್ನಾಟಕ ರಾಜ್ಯ ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕ ಸಂಘ(ರಿ) ಮತ್ತು ಪ್ರೌಢಶಾಲಾ ಸಂಸ್ಕೃತ ಅಧ್ಯಾಪಕರ ಸಂಘ ಉಡುಪಿ ಜಿಲ್ಲೆ ಇವರ ಸಹಯೋಗದಲ್ಲಿ ‘ಸಂಸ್ಕೃತ ಪ್ರತಿಭಾ ಪುರಸ್ಕಾರ’ವನ್ನು ಪರ್ಯಾಯ ಶ್ರೀ ಶೀರೂರು ಮಠಾಧೀಶರಾದ ಶ್ರೀವೇದವರ್ಧನತೀರ್ಥ ಶ್ರೀಪಾದರು ನಡೆಸಿ, ಅನುಗ್ರಹ ಸಂದೇಶವನ್ನು ನೀಡಿದರು.

ಮುಖ್ಯ ಅತಿಥಿಗಳಾಗಿ ಶೀರೂರು ಮಠದ ದಿವಾನರಾದ ಡಾ. ಉದಯಕುಮಾರ್ ಸರಳತ್ತಾಯ,ಉಡುಪಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯ ಉಪನಿರ್ದೇಶಕರಾದ ಲೋಕೇಶ್ ಸಿ., ಉಡುಪಿ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಎಲ್ಲಮ್ಮ, ಕಾರ್ಕಳದ ಲೆಕ್ಕಪರಿಶೋಧಕರಾದ ಕೆ ಕಮಲಾಕ್ಷ ಕಾಮತ್, ಗುರುವಾಯೂರು ಸಂಸ್ಕೃತ ವಿಶ್ವವಿದ್ಯಾಲಯದ ಉಪನ್ಯಾಸಕರಾದ ಪ್ರೊ. ಹರಿಪ್ರಸಾದ್ ಕೆ ಉಪಸ್ಥಿತರಿದ್ದರು. ಉಡುಪಿ ಪೂರ್ಣಪ್ರಜ್ಞ ಕಾಲೇಜಿನ ಡಾ. ರಮೇಶ ಟಿ ಎಸ್ ಇವರು ವಿಶೇಷ ಉಪನ್ಯಾಸವನ್ನು ನೀಡಿದರು. ವಿದ್ವಾನ್ ಪ್ರಭಾಕರ ಭಟ್ ಸ್ವಾಗತಿಸಿ, ವಿದ್ವಾನ್ ಅಶೋಕ ಹೆಗಡೆ ವಂದಿಸಿದರು. ವಿದ್ವಾನ್ ವೇದವ್ಯಾಸ ತಂತ್ರಿ ಮಡಾಮಕ್ಕಿ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯುವ ಸಂಸತ್ತಿನಿಂದ ಯುವಕರಿಗೆ ಸಂವಿಧಾನ ಹಾಗೂ ಸಂಸತ್ ನ ಪರಿಚಯ: ಯಶ್ಪಾಲ್ ಸುವರ್ಣ

ಉಡುಪಿ, ಅ.17: ಯುವಕರಿಗೆ ವಿದ್ಯಾರ್ಥಿ ದೆಸೆಯಲ್ಲಿಯೇ ದೇಶದ ಸಂವಿಧಾನ ಹಾಗೂ ಸಂಸತ್ತಿನ...

2030 ರ ವೇಳೆಗೆ ಭಾರತ ಮತ್ತು ರಷ್ಯಾ 100 ಬಿಲಿಯನ್ ಡಾಲರ್ ದ್ವಿಪಕ್ಷೀಯ ವ್ಯಾಪಾರ ಗುರಿ

ನವದೆಹಲಿ, ಅ.16: ರಷ್ಯಾ ಮತ್ತು ಇತರ ಸದಸ್ಯ ರಾಷ್ಟ್ರಗಳಿಗೆ ರಫ್ತುಗಳನ್ನು ಹೆಚ್ಚಿಸಲು...

ಕ್ರಿಯೇಟಿವ್ ಪಿಯು ಕಾಲೇಜಿನಲ್ಲಿ ಶಿಕ್ಷಕ- ಪೋಷಕರ ಸಭೆ

ಕಾರ್ಕಳ, ಅ.16: ವಿದ್ಯಾರ್ಥಿಗಳ ಕನಸುಗಳಿಗೆ ದಿಕ್ಕು ತೋರಿಸಿ, ಭವಿಷ್ಯದ ಸಾಧನೆಗೆ ಭದ್ರ...

ಉಡುಪಿಯಲ್ಲಿ ತಂಪೆರೆದ ಮುಂಜಾನೆ ಮಳೆ

ಉಡುಪಿ, ಅ.16: ಉಡುಪಿ ಜಿಲ್ಲೆಯ ಹಲವೆಡೆ ಶುಕ್ರವಾರ ಮುಂಜಾನೆ ಗುಡುಗು ಸಹಿತ...
error: Content is protected !!