Friday, August 28, 2026
Friday, August 28, 2026

ಭಾರತೀಯ ಸೇನೆಯ ಶೌರ್ಯ ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ: ಯೋಧ ಯೋಗೀಶ್ ಕಾಂಚನ್

ಭಾರತೀಯ ಸೇನೆಯ ಶೌರ್ಯ ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ: ಯೋಧ ಯೋಗೀಶ್ ಕಾಂಚನ್

Date:

ಕುಂದಾಪುರ, ಜು.26: ವೀರ ಸೈನಿಕರ ತ್ಯಾಗ ಮತ್ತು ಬಲಿದಾನವನ್ನು ನೆನಪಿಸುವುದರ ಜೊತೆಗೆ ದೇಶದ ಐತಿಹಾಸಿಕ ಗೆಲುವಿಗೆ ಅಭಿನಂದನೆ ಸಲ್ಲಿಸಲು ಡಾ| ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಎನ್.ಸಿ.ಸಿ. ಘಟಕದ ಆಶ್ರಯದಲ್ಲಿ ಕಾರ್ಗಿಲ್ ವಿಜಯ ದಿವಸವನ್ನು ಆಚರಿಸಲಾಯಿತು. ಭಾರತೀಯ ಸೈನ್ಯದಲ್ಲಿ ಸೇವೆ ಸಲ್ಲಿಸಿದ ಯೋಧ ಯೋಗೀಶ್ ಕಾಂಚನ್ ಅವರು ಕಾರ್ಗಿಲ್ ಯುದ್ಧದಲ್ಲಿ ಪಾಕಿಸ್ತಾನದ ವಿರುದ್ಧ ಭಾರತೀಯ ಸೈನಿಕರು ವಿಜಯ ಪತಾಕೆ ಹಾರಿಸಿದ ದಿನವನ್ನು ನೆನಪಿಸಿಕೊಳ್ಳುವುದು, ಸಂಭ್ರಮಿಸುವುದು ಮತ್ತ ಭಾರತೀಯ ಸೈನ್ಯದ ಶೌರ್ಯ ಸಾಹಸವನ್ನು ಇಂದಿನ ಯುವ ಪೀಳಿಗೆಗೆ ತಿಳಿಸುವುದು ನಮ್ಮ ಕರ್ತವ್ಯ ಎಂದರು. ಇದೇ ಸಂದರ್ಭ ವಿದ್ಯಾರ್ಥಿಗಳು ದೇಶ ಪ್ರೇಮದ ಭಾವನೆಯನ್ನು ಎಲ್ಲಾ ನೆಲೆಯಲ್ಲಿಯೂ ಬೆಳೆಸಿಕೊಳ್ಳಬೇಕಾಗಿರುವುದು ವರ್ತಮಾನದ ತುರ್ತು ಎಂದರು.

ADVERTISEMENT

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ವಹಿಸಿದ್ದರು. ಎನ್.ಸಿ.ಸಿ. ಕೇರ್ ಟೇಕರ್ ಶ್ರೀ ತಿಮ್ಮಪ್ಪ ಡಿ.ಎಸ್. ಉಪಸ್ಥಿತರಿದ್ದರು. ಕಾರ್ಯಕ್ರಮ ಸಂಯೋಜಕರಾದ ಎ.ಎನ್.ಓ.ಲೆ. ಹರೀಶ್ ಬಿ. ಸ್ವಾಗತಿಸಿ, ಎನ್.ಸಿ.ಸಿ. ಕೆಡೆಟ್‌ಗಳಾದ ಸಿಂಚನಾ, ಚೈತ್ರ ಪ್ರಾರ್ಥಿಸಿ, ರೇಷ್ಮಾ ಒ ವಂದಿಸಿ, ಮಹೇಶ್ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!