Friday, October 16, 2026
Friday, October 16, 2026

ರೂ.1.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಕಲ್ಯಾಣಪುರ ನಿಡಂಬಳ್ಳಿ ರಸ್ತೆ ಕಾಮಗಾರಿ ಉದ್ಘಾಟನೆ

ರೂ.1.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಕಲ್ಯಾಣಪುರ ನಿಡಂಬಳ್ಳಿ ರಸ್ತೆ ಕಾಮಗಾರಿ ಉದ್ಘಾಟನೆ

Date:

ಉಡುಪಿ, ಜು.28: ಕಲ್ಯಾಣಪುರ ಗ್ರಾಮ ಪಂಚಾಯತ್ ವ್ಯಾಪ್ತಿಯ ವಾಲ್ಟರ್ ನಜರೆತ್ ಮನೆಯಿಂದ ನಿಡಂಬಳ್ಳಿ ನಾಗೇಶ್ ಸಾಲ್ಯಾನ್ ಮನೆವರೆಗೆ ಸುಮಾರು 1.40 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ರಸ್ತೆ ಕಾಮಗಾರಿಯ ಉದ್ಘಾಟನೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ನೆರವೇರಿಸಿದರು.

ಬಳಿಕ ಮಾತನಾಡಿದ ಅವರು, ಕಲ್ಯಾಣಪುರ ನಿಡಂಬಳ್ಳಿ ಭಾಗದ ಜನತೆಯ ಬಹುದಿನದ ಬೇಡಿಕೆಯಂತೆ ಬಹಳ ವರ್ಷಗಳಿಂದ ರಸ್ತೆ ತೀರಾ ಹದಗೆಟ್ಟು ವಾಹನ ಸಂಚಾರಕ್ಕೆ ಸಮಸ್ಯೆ ಉಂಟಾಗುತ್ತಿದ್ದ ಹಿನ್ನೆಲೆಯಲ್ಲಿ ಸುಮಾರು 1.40 ಕೋಟಿ ಅನುದಾನ ಒದಗಿಸಿ ರಸ್ತೆಯನ್ನು ಅಭಿವೃದ್ಧಿಪಡಿಸಲಾಗಿದೆ. ಸರ್ಕಾರದ ಸೀಮಿತ ಅನುದಾನದ ನಡುವೆಯೂ ಕಲ್ಯಾಣಪುರ ಗ್ರಾಮದ ರಸ್ತೆಗಳ ಅಭಿವೃದ್ಧಿಗೆ ಗರಿಷ್ಠ ಮೊತ್ತವನ್ನು ಒದಗಿಸಿದ್ದು, ಮುಂದಿನ ದಿನಗಳಲ್ಲಿಯೂ ಕಲ್ಯಾಣಪುರ ಗ್ರಾಮದ ಅಭಿವೃದ್ಧಿಗೆ ವಿಶೇಷ ಆದ್ಯತೆ ನೀಡುವುದಾಗಿ ಹೇಳಿದರು.

ಕಲ್ಯಾಣಪುರ ಗ್ರಾಮ ಪಂಚಾಯತ್ ಮಾಜಿ ಅಧ್ಯಕ್ಷರಾದ ನಾಗರಾಜ ಕುಂದರ್, ಕೃಷ್ಣ ದೇವಾಡಿಗ, ಸತೀಶ್ ನಾಯ್ಕ್, ಸುನೀತಾ ಪೂಜಾರಿ, ಗ್ರಾಮ ಪಂಚಾಯತ್ ಸದಸ್ಯರಾದ ಪ್ರೇಮಲತಾ ಕಿಶೋರ್, ಉದಯ ಕುಮಾರ್, ನವೀನ್ ಕಾಂಚನ್, ವಿಶು ಕುಮಾರ್, ಅನಿತಾ ನಾಯ್ಕ್, ರತ್ನ ಉಚ್ಚಿಲ್, ಕವಿತಾ ಮೇಸ್ತ, ಬೆನೆಡಿಕ್ಟ್ ಮೆನೇಜಸ್, ಜಯಂತಿ ಕಾವೇರಿಜಿಡ್ಡ, ಬಿಲ್ಲವ ಒಕ್ಕೂಟದ ಅಧ್ಯಕ್ಷರಾದ ಹರೀಶ್ ಕುಮಾರ್ ,ತೋನ್ಸೆ ಗರಡಿಯ ಜೀರ್ಣೋದ್ಧಾರ ಸಮಿತಿ ಅಧ್ಯಕ್ಷರಾದ ದಿನೇಶ್ ಜತ್ತನ್, ಹಿಂದೂ ಯುವಸೇನೆ ಜಿಲ್ಲಾಧ್ಯಕ್ಷರಾದ ಅಜಿತ್ ಕೊಡವೂರು, ನಗರ ಅಧ್ಯಕ್ಷರಾದ ಸುನೀಲ್ ನೇಜಾರ್, ಸ್ಥಳೀಯ ಪ್ರಮುಖರಾದ ಅಪ್ಪು ಜತ್ತನ್, ಕಿಶೋರ್, ದಿನಕರ ಶೆಟ್ಟಿ, ಶರತ್ ಕುಮಾರ್, ದಿನಕರ್ ಮಾಸ್ಟರ್, ಶರತ್ ಕಲ್ಯಾಣಪುರ್, ರವಿ ಕರ್ಕೇರ, ಕೇಶವ್ ಉಚ್ಚಿಲ್, ಸುಧೀರ್ ಪೂಜಾರಿ ಮೊದಲಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಹಣಕಾಸು ಸಾಕ್ಷರತೆ ಮತ್ತು ಹೂಡಿಕೆದಾರರ ಶಿಕ್ಷಣ’ ಅರಿವು ಕಾರ್ಯಕ್ರಮ

ಬಸ್ರೂರು, ಅ.15: ಶ್ರೀ ಶಾರದಾ ಕಾಲೇಜು ಬಸ್ರೂರು ಐಕ್ಯೂಎಸಿ ಮತ್ತು ವಾಣಿಜ್ಯ...

ನಿಟ್ಟೂರು ಶಾಲೆಯ 125ನೇ ವರ್ಷಾಚರಣೆ: ವಿಶೇಷ ಸಮಿತಿ ಕಚೇರಿ ಉದ್ಘಾಟನೆ

ಉಡುಪಿ, ಅ.15: ಕಲಿತ ವಿದ್ಯಾಸಂಸ್ಥೆಯ ಏಳಿಗೆಗೆ ಸೇವೆ ಮಾಡುವುದು ಅತ್ಯಂತ ಪುಣ್ಯದ...

ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 20ನೇ ವರ್ಷದ ಅಬ್ಬನಡ್ಕ ಗಣೇಶೋತ್ಸವ ಸಮಾರಂಭದ ಕೃತಜ್ಞತಾ ಸಭೆ

ಅಬ್ಬನಡ್ಕ, ಅ.15: ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಪುರಸ್ಕೃತ ಸಂಸ್ಥೆ...
error: Content is protected !!