Wednesday, October 28, 2026
Wednesday, October 28, 2026

ಮಣಿಪಾಲ ಜ್ಞಾನಸುಧಾ: ಗುರುಪೂರ್ಣಿಮೆ

ಮಣಿಪಾಲ ಜ್ಞಾನಸುಧಾ: ಗುರುಪೂರ್ಣಿಮೆ

Date:

ಮಣಿಪಾಲ, ಜು.30: ಮಣಿಪಾಲ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆ ವಿದ್ಯಾನಗರದಲ್ಲಿ ಗುರು ಪೂರ್ಣಿಮೆ ಆಚರಿಸಲಾಯಿತು. ಹಿರಿಯಡ್ಕದ ನಿವೃತ್ತ ಉಪನ್ಯಾಸಕಿ ನಳಿನಾದೇವಿ ಎಮ್‌ ಆರ್‌ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದ ಇವರು, ಪುರಾಣದ ಕಾಲದಿಂದಲೂ ಗುರುವಿಗೆ ಉನ್ನತ ಸ್ಥಾನವನ್ನು ನೀಡಿ ಗೌರವಿಸಲಾಗುತ್ತಿದೆ. ವಿದ್ಯಾರ್ಥಿಗಳ ಬದುಕು ಬೆಳಗಿಸುವ ಕಾರ್ಯದಲ್ಲಿ ನಿರಂತರವಾಗಿ ಶ್ರಮಿಸುತ್ತಿರುವ ಗುರುಗಳನ್ನು ನಾವು ಗೌರವಿಸಬೇಕು ಎಂದು ಮೌಲ್ಯಯುತ ಮಾತುಗಳನ್ನಾಡಿದರು.ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳು ಮುಖ್ಯ ಅತಿಥಿಯವರಿಗೆ ಪಾದಪೂಜೆಯನ್ನು ನೆರವೇರಿಸಿ ಗುರು ವಂದನೆಯನ್ನು ಸಲ್ಲಿಸಲಾಯಿತು. ಮಣಿಪಾಲ ಜ್ಞಾನಸುಧಾ ಆಂಗ್ಲ ಮಾಧ್ಯಮ ಪ್ರೌಢಶಾಲೆಯ ಉಪಪ್ರಾಂಶುಪಾಲರಾದ ನವೀನ್, ಜೆ.ಇ.ಇ/ನೀಟ್‌ ಫೌಂಡೇಶನ್‌ ಸ್ಟ್ಯೂಡೆಂಟ್‌ ಕೊರ್ಡಿನೇಡರ್‌ ಶಮಿತ ಉಪಸ್ಥಿತರಿದ್ದರು. ಕನ್ನಡ ಉಪನ್ಯಾಸಕಿ ಮಂಜುಳ ಕಾರ್ಯಕ್ರಮ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

‘ಅರ್ನಾಬ್’ ಚಂಡಮಾರುತ: ಆಂಧ್ರಪ್ರದೇಶ, ಒಡಿಶಾದ ಹಲವು ಭಾಗಗಳಲ್ಲಿ ಭಾರಿ ಮಳೆ; ವಿಮಾನ ಮತ್ತು ರೈಲು ಸೇವೆಗಳಲ್ಲಿ ವ್ಯತ್ಯಯ

ಯು.ಬಿ.ಎನ್.ಡಿ., ಅ.28: ಅರ್ನಾಬ್' ಎಂಬ ತೀವ್ರ ಸ್ವರೂಪದ ಚಂಡಮಾರುತವು ಆಂಧ್ರಪ್ರದೇಶದ ಕರಾವಳಿಯನ್ನು...

ಅ.29: ಉಡುಪಿ ಬ್ಲಾಕ್ ಕಾಂಗ್ರೆಸ್ ವತಿಯಿಂದ ಬೃಹತ್ ರಕ್ತದಾನ ಶಿಬಿರ

ಉಡುಪಿ, ಅ.28: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ವತಿಯಿಂದ ಬ್ಲಾಕ್ ಅಧ್ಯಕ್ಷ...

ಸಾಂವಿಧಾನಿಕ ಮೌಲ್ಯಗಳು ಮತ್ತು ಮತದಾರರ ಜಾಗೃತಿ ಕಾರ್ಯಕ್ರಮ

ಕೋಟೇಶ್ವರ, ಅ.28: ಎಸ್.ಕೆ.ವಿ.ಎಂ.ಎಸ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರದ ಚುನಾವಣಾ...
error: Content is protected !!