Friday, July 31, 2026
Friday, July 31, 2026

ಬಾರ್ಕೂರು: ‘ಸಾಹಿತ್ಯ ಮತ್ತು ಜೀವನ ದರ್ಶನ’ ವಿಶೇಷ ಉಪನ್ಯಾಸ

ಬಾರ್ಕೂರು: ‘ಸಾಹಿತ್ಯ ಮತ್ತು ಜೀವನ ದರ್ಶನ’ ವಿಶೇಷ ಉಪನ್ಯಾಸ

Date:

ಬಾರ್ಕೂರು, ಜು.30: ಶ್ರೀಮತಿ ರುಕ್ಮಿಣಿ ಶೆಟ್ಟಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗ ಐ.ಕ್ಯೂ.ಎ.ಸಿ. ಸಹಯೋಗದಲ್ಲಿ ಗುರುವಾರ ಕಾಲೇಜಿನ ಎ. ವಿ. ಸಭಾಂಗಣದಲ್ಲಿ ‘ಸಾಹಿತ್ಯ ಮತ್ತು ಜೀವನ ದರ್ಶನ’ ಎಂಬ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಭಾಸ್ಕರ್ ಶೆಟ್ಟಿ ಎಸ್. ಅವರು, ವಿದ್ಯಾರ್ಥಿಗಳಲ್ಲಿ ಸಾಹಿತ್ಯಾಭಿರುಚಿ ಹಾಗೂ ಜೀವನ ಮೌಲ್ಯಗಳನ್ನು ಬೆಳೆಸಿಕೊಳ್ಳುವ ಅಗತ್ಯತೆಯನ್ನು ಪ್ರತಿಪಾದಿಸಿದರು. ಮುಖ್ಯ ಉಪನ್ಯಾಸಕರಾಗಿ ಆಗಮಿಸಿದ್ದ ಕಾಪು ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಪ್ರಾಧ್ಯಾಪಕರಾದ ಡಾ. ರವಿರಾಜ್ ಶೆಟ್ಟಿ ಅವರು ವಿಷಯದ ಕುರಿತು ಉಪನ್ಯಾಸ ನೀಡುತ್ತಾ, ಸಾಹಿತ್ಯವು ಕೇವಲ ಪುಸ್ತಕಗಳಿಗೆ ಸೀಮಿತವಾಗಿರದೆ, ನಮ್ಮ ದೈನಂದಿನ ಜೀವನದ ದರ್ಶನ ಹಾಗೂ ಮೌಲ್ಯಗಳನ್ನು ತಿದ್ದುವ ಕೈಗನ್ನಡಿಯಾಗಿದೆ ಎಂದು ಅಭಿಪ್ರಾಯಪಟ್ಟರು.

ಐ.ಕ್ಯೂ.ಎ.ಸಿ. ಸಂಚಾಲಕರಾದ ಶೋಭಾ ಆರ್., ಕನ್ನಡ ವಿಭಾಗದ ಮುಖ್ಯಸ್ಥರಾದ ಶೈಲಜಾ, ಸಹಾಯಕ ಪ್ರಾಧ್ಯಾಪಕರಾದ ಡಾ. ಪಲ್ಲವಿ ಎನ್ ಸೇರಿದಂತೆ ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕ್ರೀಡಾ ಇಲಾಖೆ ವಿವಿಧ ಯೋಜನೆ: ಅರ್ಜಿ ಅವಧಿ ವಿಸ್ತರಣೆ

ಉಡುಪಿ, ಜು.30: 2025ನೇ ಸಾಲಿಗೆ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯಿಂದ...

ವಿಪ್ರ ಸ್ವ-ಉದ್ಯಮ ನೇರ ಸಾಲ ಯೋಜನೆ: ಅರ್ಜಿ ಆಹ್ವಾನ

ಉಡುಪಿ, ಜು.30: ಕರ್ನಾಟಕ ರಾಜ್ಯ ಬ್ರಾಹ್ಮಣ ಅಭಿವೃದ್ಧಿ ಮಂಡಳಿಯು ವಿಪ್ರ ಸ್ವ-ಉದ್ಯಮ...

ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆ

ಕೋಟ, ಜು.30: ಕೋಟತಟ್ಟು ಪಡುಕರೆ ಹಾಲು ಉತ್ಪಾದಕರ ವಾರ್ಷಿಕ ಮಹಾಸಭೆಯು ಮಂಗಳವಾರ...

ಬಿ. ಬಿ. ಹೆಗ್ಡೆ ಕಾಲೇಜು: ರೋಟರಾಕ್ಟ್ ಕ್ಲಬ್ ಪದಗ್ರಹಣ

ಕುಂದಾಪುರ, ಜು.30: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ರೋಟರಾಕ್ಟ್ ಕ್ಲಬ್‌ನ...
error: Content is protected !!