Saturday, October 24, 2026
Saturday, October 24, 2026

ಆ.14-16: ದೊಡ್ಡಣಗುಡ್ಡೆ ರೈತ ಸೇವಾ ಕೇಂದ್ರದಲ್ಲಿ ‘ಸಸ್ಯಸಂತೆ’ 

ಆ.14-16: ದೊಡ್ಡಣಗುಡ್ಡೆ ರೈತ ಸೇವಾ ಕೇಂದ್ರದಲ್ಲಿ ‘ಸಸ್ಯಸಂತೆ’ 

Date:

ಉಡುಪಿ, ಜು.31: ತೋಟಗಾರಿಕೆ ಇಲಾಖೆಯ ವತಿಯಿಂದ ಸಾರ್ವಜನಿಕರಿಗಾಗಿ ‘ಸಸ್ಯಸಂತೆ’ ಕಾರ್ಯಕ್ರಮವನ್ನು ಆಗಸ್ಟ್ 14 ರಿಂದ 18 ರ ವರೆಗೆ ಉಡುಪಿಯ ದೊಡ್ಡಣಗುಡ್ಡೆ ತೋಟಗಾರಿಕೆ ಇಲಾಖೆಯ ರೈತ ಸೇವಾ ಕೇಂದ್ರದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ. ಸಸ್ಯಸಂತೆಯಲ್ಲಿ ಅಲಂಕಾರಿಕ ಗಿಡಗಳು, ಹಣ್ಣಿನ, ಹೂವಿನ ಗಿಡಗಳು ಖರೀದಿಗೆ ಲಭ್ಯವಿರುತ್ತದೆ ಹಾಗೂ ಸಾವಯವ ಗೊಬ್ಬರ, ಕುಂಡಗಳು ಮತ್ತು ತೋಟಗಾರಿಕೆ ಉಪಕರಣಗಳು ಒಂದೇ ಸೂರಿನಡಿ ಲಭ್ಯವಿರುತ್ತದೆ. ಕಾರ್ಯಕ್ರಮದಲ್ಲಿ ಮಳಿಗೆಗಳನ್ನು ಹಾಕಲು ಇಚ್ಛಿಸುವ ನರ್ಸರಿ ಮಾಲಿಕರು ಹಾಗೂ ಸ್ವಸಹಾಯ ಸಂಘಗಳು ಆಗಸ್ಟ್ 10 ರ ಒಳಗಾಗಿ ತೋಟಗಾರಿಕೆ ಇಲಾಖೆಯ ಕಚೇರಿಯನ್ನು ಸಂಪರ್ಕಿಸಿ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಬಹುದಾಗಿದೆ. ಜೇಷ್ಠತೆ ಆಧಾರದ ಮೇಲೆ ಮಳಿಗೆಗಳನ್ನು ಹಂಚಿಕೆ ಮಾಡಲಾಗುವುದು ಹಾಗೂ ಗರಿಷ್ಟ 20 ಮಳಿಗೆಗಳಿಗೆ ಮಾತ್ರ ಅವಕಾಶ ಕಲ್ಪಿಸಲಾಗುವುದು. ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ: 9741255168 ಅನ್ನು ಸಂಪರ್ಕಿಸಬಹುದಾಗಿದೆ ಎಂದು ತೋಟಗಾರಿಕೆ ಇಲಾಖೆಯ ಜಂಟಿ ನಿರ್ದೇಶಕರ ಕಛೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯುರೋಪ್‌ಗೆ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡುವ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ: ರಕ್ಷಣಾ ಕಾರ್ಯದರ್ಶಿ

ನವದೆಹಲಿ, ಅ.24: ಯುರೋಪಿಯನ್ ಒಕ್ಕೂಟದ 'ರೀ-ಆರ್ಮ್ ಯುರೋಪ್' ಉಪಕ್ರಮದ ಅಡಿಯಲ್ಲಿ ರಕ್ಷಣಾ...

ನನ್ನ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ವೀಡಿಯೋ ಸಂಪೂರ್ಣ ಸುಳ್ಳು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಅ.24: ನನ್ನ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ವೀಡಿಯೋ ಸಂಪೂರ್ಣ...

ಡಿಸೆಂಬರ್ ಅಂತ್ಯದೊಳಗೆ ಶಿವಪುರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ಅ.24: ಬಹಳ ದಿನಗಳಿಂದ ನೆನೆಗುದಿಗೆಗೆ ಬಿದ್ದಿರುವ ಶಿವಪುರ ಪಂಚಾಯತ್ ಕಡೆಯಿಂದ...

ಹೊಸ ಕೈಗಾರಿಕೋದ್ಯಮಗಳ ಸ್ಥಾಪನೆಗೆ ಮುಂದೆ ಬರುವ ಉದ್ಯಮಿಗಳಿಗೆ ಮೂಲಸೌಕರ್ಯ ಒದಗಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಅ.24: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಉದ್ಯಮಗಳನ್ನು ಸ್ಥಾಪಿಸಲು ಉದ್ಯಮಿಗಳು ಮುಂದೆ...
error: Content is protected !!