ಉಡುಪಿ, ಜು.31: ರಾಹುಲ್ ಗಾಂಧಿ ವಿರುದ್ದ ಉಡುಪಿ ಶಾಸಕ ಯಶ್ಪಾಲ್ ಸುವರ್ಣ ಅವರ ಹೇಳಿಕೆಯನ್ನು ಖಂಡಿಸಿ ಉಡುಪಿ ಜಿಲ್ಲಾ ಕಾಂಗ್ರೆಸ್ ಸಮಿತಿ ವತಿಯಿಂದ ಉಡುಪಿ ಬಸ್ ನಿಲ್ದಾಣದ ಜಟ್ಕಾ ಸ್ಟ್ಯಾಂಡ್ ಬಳಿ ಶುಕ್ರವಾರ ಬೃಹತ್ ಪ್ರತಿಭಟನೆ ನಡೆಯಿತು.

ಕೆಪಿಸಿಸಿ ಪ್ರಚಾರ ಸಮಿತಿಯ ಸುಧೀರ್ ಕುಮಾರ್ ಮುರೊಳ್ಳಿ ಹಾಗೂ ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ರಾಜ್ಯಾಧ್ಯಕ್ಷರಾದ ನಿಖಿತ್ ರಾಜ್ ಮೌರ್ಯ ಪ್ರತಿಭಟನೆಯನ್ನು ಉದ್ದೇಶಿಸಿ ಮಾತನಾಡಿದರು.
ಬಿಜೆಪಿಯ ದ್ವೇಷದ ರಾಜಕಾರಣಕ್ಕೆ ಜನತೆಯೇ ತಕ್ಕ ಉತ್ತರ ನೀಡಲಿದ್ದಾರೆ. ಶಾಸಕರ ಹೇಳಿಕೆ ಅವರ ಸಂಸ್ಕೃತಿಯನ್ನು ಎತ್ತಿ ತೋರಿಸುತ್ತದೆ. ಕಾಂಗ್ರೆಸ್ ಪಕ್ಷ ಗಾಂಧೀಯವರ ಹಾದಿಯಲ್ಲಿ ನಡೆದರೆ ಬಿಜೆಪಿಯದ್ದು ಗೋಡ್ಸೆಯ ಹಾದಿ ಎಂದು ನಿಕೇತ್ ರಾಜ್ ಮೌರ್ಯ ಹೇಳಿದರು.
ಮಾಜಿ ಶಾಸಕರಾದ ವಿನಯ್ ಕುಮಾರ್ ಸೊರಕೆ, ಗೋಪಾಲ ಪೂಜಾರಿ, ಮುಖಂಡರುಗಳಾದ ಅಶೋಕ್ ಕುಮಾರ್ ಕೊಡವೂರು, ಪ್ರಸಾದರಾಜ್ ಕಾಂಚನ್, ರಮೇಶ್ ಕಾಂಚನ್, ಮುನಿಯಾಲು ಉದಯಕುಮಾರ್ ಶೆಟ್ಟಿ, ಅಮೃತ್ ಶೆಣೈ, ಪ್ರಖ್ಯಾತ್ ಶೆಟ್ಟಿ, ಜಿಲ್ಲೆಯ ಕಾಂಗ್ರೆಸ್ ಮುಖಂಡರು, ಪದಾಧಿಕಾರಿಗಳು, ಕಾಂಗ್ರೆಸ್ ಕಾರ್ಯಕರ್ತರು ಉಪಸ್ಥಿತರಿದ್ದರು.




By
ForthFocus™