Monday, October 26, 2026
Monday, October 26, 2026

ಉಡುಪಿ ನಗರಸಭಾ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ನಿಧನ

ಉಡುಪಿ ನಗರಸಭಾ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ನಿಧನ

Date:

ಉಡುಪಿ, ಆ.1: ಉಡುಪಿ ಹಳೆ ತಾಲೂಕು ಕಛೇರಿ ಬಳಿಯ ಲಯನ್ಸ್ ಸರ್ಕಲ್ ಬಳಿ ರಸ್ತೆ ದಾಟುತ್ತಿದ್ದ ವೇಳೆ ಸಿಟಿ ಬಸ್ ಡಿಕ್ಕಿಯಾಗಿ ಉಡುಪಿ ನಗರಸಭೆಯ ಮಾಜಿ ಉಪಾಧ್ಯಕ್ಷೆ ಲಕ್ಷ್ಮೀ ಮಂಜುನಾಥ್ ಕೊಳ ಮೃತಪಟ್ಟ ಘಟನೆ ಶನಿವಾರ ಮಧ್ಯಾಹ್ನ ಸಂಭವಿಸಿದೆ. ಸಂಚಾರಿ ಠಾಣೆಯ ಪೊಲೀಸರು ಸ್ಥಳಕ್ಕೆ ಆಗಮಿಸಿ ಪ್ರಕರಣ ದಾಖಲಿಸಿದ್ದಾರೆ.

ವಿಷಯ ತಿಳಿದು ಆಘಾತವಾಗಿದೆ; ಎಲ್ಲರೊಂದಿಗೆ ಬಹಳ ಆತ್ಮೀಯರಾಗಿದ್ದ ಅವರು ಸರಳತೆಯಿಂದ ಜನಸೇವೆ ಮಾಡುತ್ತಿದ್ದರು ಎಂದು ಶಾಸಕ ಯಶ್ಪಾಲ್ ಸುವರ್ಣ ಸಂತಾಪ ಸೂಚಿದ್ದಾರೆ. ಪ್ರಾಮಾಣಿಕತೆ, ಜನಪರ ಕಾಳಜಿ ಮತ್ತು ನಿಸ್ವಾರ್ಥ ಸೇವೆಯ ಮೂಲಕ ಜನರ ವಿಶ್ವಾಸ ಹಾಗೂ ಪ್ರೀತಿಯನ್ನು ಗಳಿಸಿದ್ದರು. ಅವರ ಸರಳ ವ್ಯಕ್ತಿತ್ವ, ಸೇವಾ ಮನೋಭಾವ, ಜನಪರ ಕಾಳಜಿ ಮತ್ತು ಅವರು ಸಮಾಜದ ಅಭಿವೃದ್ಧಿಗೆ ನೀಡಿದ ಕೊಡುಗೆ ಸದಾ ಸ್ಮರಣೀಯವಾಗಿರುತ್ತದೆ ಎಂದು ಮಾಜಿ ಶಾಸಕ ಕೆ. ರಘುಪತಿ ಭಟ್ ಸಂತಾಪ ಸೂಚಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಜಾಗತಿಕ ತೈಲ ಬೆಲೆ: ಗರಿಷ್ಠ ಏರಿಕೆ ನಂತರ ಸುಮಾರು 2% ರಷ್ಟು ಕುಸಿತ

ನವದೆಹಲಿ, ಅ.26: ಸುಮಾರು ಆರು ತಿಂಗಳಲ್ಲೇ ಗರಿಷ್ಠ ಮಟ್ಟಕ್ಕೆ ಏರಿದ ನಂತರ...

ಬ್ರೆಜಿಲ್‌ನಲ್ಲಿ ನಾಲ್ಕನೇ ಬಾರಿಗೆ ಅಧಿಕಾರಕ್ಕೆ ಬಂದ ಲುಲಾ; ಲ್ಯಾಟಿನ್ ಅಮೆರಿಕದಲ್ಲಿ ಟ್ರಂಪ್ ಪ್ರಭಾವಕ್ಕೆ ಹಿನ್ನಡೆ

ಯು.ಬಿ.ಎನ್.ಡಿ., ಅ.26: ಭಾನುವಾರ ನಡೆದ ಬ್ರೆಜಿಲ್‌ನ ನಿರ್ಣಾಯಕ ಮತದಾನದಲ್ಲಿ ಸೆನೆಟರ್ ಫ್ಲಾವಿಯೊ...

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

ಬಸ್ರೂರು, ಅ.26: ಬಸ್ರೂರು ಶ್ರೀ ಶಾರದಾ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ...

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...
error: Content is protected !!