Monday, October 26, 2026
Monday, October 26, 2026

ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್: ವಿದ್ಯಾರ್ಥಿ ಪರಿಷತ್ತು ಉದ್ಘಾಟನೆ

ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್: ವಿದ್ಯಾರ್ಥಿ ಪರಿಷತ್ತು ಉದ್ಘಾಟನೆ

Date:

ಕಾರ್ಕಳ, ಆ.2: ಕಾರ್ಕಳದ ಕ್ರಿಯೆಟಿವ್ ಗ್ಲೋಬಲ್ ಸ್ಕೂಲ್ ನ 2026 -27 ನೇ ಸಾಲಿನ ನೂತನ ವಿದ್ಯಾರ್ಥಿ ಪರಿಷತ್ತು ಉದ್ಘಾಟನಾ ಸಮಾರಂಭವು ಸಂಸ್ಥೆಯ ಸಪ್ತಸ್ವರ ವೇದಿಕೆಯಲ್ಲಿ ಜುಲೈ 31 ರಂದು ಜರುಗಿತು. ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಸಂಸ್ಥೆಯ ಸಂಸ್ಥಾಪಕರುಗಳಾದ ಅಶ್ವಥ್ ಎಸ್ ಎಲ್., ಆದರ್ಶ ಎಂಕೆ, ಡಾ. ಗಣನಾಥ್ ಶೆಟ್ಟಿ, ಗಣಪತಿ ಭಟ್ ಕೆ ಎಸ್, ವಿಮಲ್ ರಾಜ್, ಹಾಗೂ ಅಮೃತ ರೈ ಇವರು ಜ್ಯೋತಿ ಬೆಳಗಿಸುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿ, ನೂತನವಾಗಿ ಆಯ್ಕೆಯಾದ ವಿದ್ಯಾರ್ಥಿ ನಾಯಕರಿಗೆ ಗೌರವದ ಬ್ಯಾಡ್ಜ್ ಗಳನ್ನು ತೊಡಿಸಿದರು.

ಸಂಸ್ಥಾಪಕರಾದ ವಿಮಲ್ ರಾಜ್ ಇವರು ವಿದ್ಯಾರ್ಥಿಗಳನ್ನು ಉದ್ದೇಶಿಸಿ ಶಿಕ್ಷಣದ ಜೊತೆಗೆ ನಾಯಕತ್ವ, ಸಾಮಾಜಿಕ ಕಳಕಳಿಯನ್ನು ಬೆಳೆಸಿಕೊಳ್ಳಬೇಕು.ನಾಯಕತ್ವ ಕೇವಲ ಅಧಿಕಾರವಲ್ಲ. ಅದು ಜವಾಬ್ದಾರಿ ಶಿಸ್ತು, . ಶಾಲೆಯ ಗೌರವವನ್ನು ಹೆಚ್ಚಿಸುವಂತೆ ಪ್ರಾಮಾಣಿಕವಾಗಿ ಕರ್ತವ್ಯ ನಿರ್ವಹಿಸುವಂತೆ ವಿದ್ಯಾರ್ಥಿಗಳಿಗೆ ಕರೆ ನೀಡಿದರು ಹಾಗೂ ಸಂಸ್ಥಾಪಕರಾದ ಅಶ್ವತ್ ಎಸ್ ಎಲ್ ಇವರು ಮಾತನಾಡಿ ವಿದ್ಯಾರ್ಥಿ ದೆಸೆಯಲ್ಲಿಯೇ ದೊಡ್ಡ ಕನಸುಗಳನ್ನು ಕಾಣುವುದು, ಸಮಾಜದ ಒಳಿತಿಗಾಗಿ ನಾಯಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಅಗತ್ಯ ಎಂದರು. ನಂತರ ಶಾಲಾ ಪ್ರಾಂಶುಪಾಲರಾದ ಅಕ್ಷತಾ ಶೆಣೈ ಇವರು ನೂತನವಾಗಿ ಆಯ್ಕೆಯಾದ ಶಾಲಾ ನಾಯಕ ಪ್ರತ್ಯಕ್ಷ ನಾಯಕ್ ಹಾಗೂ ನಾಯಕಿ ಪ್ರಾಪ್ತಿ ನೆಲ್ಲಿ, ವಿವಿಧ ಸದನಗಳ ನಾಯಕರು ಮತ್ತು ಕ್ರೀಡೆ, ಶಿಸ್ತು ಮತ್ತು ಸಾಂಸ್ಕೃತಿಕ ವಿಭಾಗಗಳ ಪ್ರತಿನಿಧಿಗಳಿಗೆ ಅಧಿಕಾರದ ಪ್ರತಿಜ್ಞಾವಿಧಿ ಬೋಧಿಸಿದರು. ಸಮಾರಂಭದಲ್ಲಿ ಶಾಲೆಯ ಶಿಕ್ಷಕರವೃಂದ,ಪೋಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆತ್ಮವಿಶ್ವಾಸದಿಂದ ಇಂಗ್ಲೀಷ್ ಸಂವಹನ

ಬಸ್ರೂರು, ಅ.26: ಬಸ್ರೂರು ಶ್ರೀ ಶಾರದಾ ಕಾಲೇಜಿನ ಇಂಗ್ಲೀಷ್ ವಿಭಾಗದ ವತಿಯಿಂದ...

ಏಷ್ಯನ್ ಪ್ಯಾರಾ ಕ್ರೀಡಾಕೂಟ: 114 ಪದಕಗಳೊಂದಿಗೆ ಭಾರತದ ಭರ್ಜರಿ ಪ್ರದರ್ಶನ

ಜಪಾನ್‌ನ ನಗೋಯಾದಲ್ಲಿರುವ ಮಿಜುಹೋ ಪಾರ್ಕ್ ಅಥ್ಲೆಟಿಕ್ಸ್ ಕ್ರೀಡಾಂಗಣದಲ್ಲಿ ನಡೆದ 2026 ಏಷ್ಯನ್...

ಫ್ರೆಂಚ್ ಓಪನ್: ಪಿ.ವಿ. ಸಿಂಧು ರನ್ನರ್-ಅಪ್

ಫ್ರಾನ್ಸ್‌ನ ಪ್ಯಾರಿಸ್‌ನಲ್ಲಿ ನಡೆಯುತ್ತಿರುವ ಫ್ರೆಂಚ್ ಓಪನ್ ಬ್ಯಾಡ್ಮಿಂಟನ್ ಚಾಂಪಿಯನ್‌ಶಿಪ್‌ನಲ್ಲಿ, ಭಾರತದ ಎರಡು...

ಆರ್‌ಬಿಐ ಡೇಟಾ ಸೆಂಟರ್ ಮತ್ತು ಸೈಬರ್‌ ಭದ್ರತಾ ತರಬೇತಿ ಸಂಸ್ಥೆ ಉದ್ಘಾಟಿಸಿದ ಪ್ರಧಾನಿ ಮೋದಿ

ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರು ಇಂದು (ಭಾನುವಾರ) ಒಡಿಶಾದ ಭುವನೇಶ್ವರದ...
error: Content is protected !!