Saturday, August 29, 2026
Saturday, August 29, 2026

ತ್ರಿಶಾ ವಿದ್ಯಾ ಪಿಯು ಕಾಲೇಜು: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

ತ್ರಿಶಾ ವಿದ್ಯಾ ಪಿಯು ಕಾಲೇಜು: ವಿಜ್ಞಾನ ವಿಭಾಗದ ವಿದ್ಯಾರ್ಥಿಗಳಿಗೆ ಓರಿಯಂಟೇಶನ್ ಕಾರ್ಯಕ್ರಮ

Date:

ಕಟಪಾಡಿ, ಆ.2: ತ್ರಿಶಾ ವಿದ್ಯಾ ಪಿ. ಯು ಕಾಲೇಜಿನಲ್ಲಿ ಕೆ.ಸಿ.ಇ.ಟಿ, ನೀಟ್ ಮತ್ತು ಜೆಇಇ ಪ್ರವೇಶ ಪರೀಕ್ಷೆಗಳ ಕುರಿತು ಪ್ರಥಮ ಮತ್ತು ದ್ದಿತೀಯ ಪಿ. ಯು ವಿದ್ಯಾರ್ಥಿಗಳಿಗೆ ಒರಿಯಂಟೇಶನ್‌ ಕಾರ್ಯಕ್ರಮ ನಡೆಯಿತು. ಅಧ್ಯಕ್ಷೆತೆಯನ್ನು ವಹಿಸಿದ್ದ ತ್ರಿಶಾ ಸಮೂಹ ಸಂಸ್ಥೆಗಳ ಸಂಸ್ಥಾಪಕರಾದ ಸಿ. ಎ. ಗೋಪಾಲಕೃಷ್ಣ ಭಟ್‌ ವಿದ್ಯಾರ್ಥಿಗಳ ಉಜ್ವಲ ಭವಿಷ್ಯದ ಬಗ್ಗೆ ವಿಚಾರಗಳನ್ನು ಹಂಚಿಕೊಂಡರು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿರುವ ರಾಷ್ಟ್ರೋತ್ಥಾನ ಪಿ. ಯು. ಕಾಲೇಜಿನ ಪ್ರಾಂಶುಪಾಲರಾದ ಭ್ಯಾಗ್ಯಶ್ರಿ ಐತಾಳ್‌ ವಿದ್ಯಾರ್ಥಿಗಳ ಭವಿಷ್ಯದ ಕುರಿತು ಮಾರ್ಗದರ್ಶನ ನೀಡಿ, ಪರೀಕ್ಷಾ ಸಿದ್ದತೆಯ ಕುರಿತು ಮಾಹಿತಿಯನ್ನು ನೀಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಹರಿಪ್ರಸಾದ್ ಇವರು ವಿದ್ಯಾರ್ಥಿಗಳಿಗೆ ಅಗತ್ಯವಾದ ಮಾಹಿತಿಗಳನ್ನು ನೀಡಿದರು. ಜೀವಶಾಸ್ತ್ರ ವಿಭಾಗದ ಉಪನ್ಯಾಸಕಿ ಸಂಧ್ಯಾ ಕಾರ್ಯಕ್ರಮ ನಿರೂಪಿಸಿದರು. ಭೌತಶಾಸ್ತ್ರ ವಿಭಾಗದ ಉಪನ್ಯಾಸಕರಾದ ನವೀನ್‌ ಸ್ವಾಗತಿಸಿ, ಕನ್ನಡ ವಿಭಾಗದ ಉಪನ್ಯಾಸಕಿ ಸರಿತ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!