Saturday, November 14, 2026
Saturday, November 14, 2026

ಉಡುಪಿ ಮಲಬಾರ್ ಗೋಲ್ಡ್‌: ರಕ್ತದಾನಿಗಳಿಗೆ ಸನ್ಮಾನ

ಉಡುಪಿ ಮಲಬಾರ್ ಗೋಲ್ಡ್‌: ರಕ್ತದಾನಿಗಳಿಗೆ ಸನ್ಮಾನ

Date:

ಉಡುಪಿ, ಆ.3: ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಇದರ ೧೩ನೇ ವಾರ್ಷಿಕೋತ್ಸವದ ಪ್ರಯುಕ್ತ ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಸಹಯೋಗದೊಂದಿಗೆ ರಕ್ತದಾನ ಶಿಬಿರ ಹಾಗೂ ರಕ್ತದಾನಿಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಶನಿವಾರ ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖೆಯಲ್ಲಿ ಆಯೋಜಿಸಲಾಗಿತ್ತು. ಕಾರ್ಯಕ್ರಮವನ್ನು ಕೇಕ್ ಕತ್ತರಿಸುವ ಮೂಲಕ ಉದ್ಘಾಟಿಸಿದ ಉಡುಪಿ ಅಭಯ ಹಸ್ತ ಚಾರಿಟೇಬಲ್ ಟ್ರಸ್ಟ್‌ನ ಅಧ್ಯಕ್ಷ, ರಕ್ತದ ಆಪತ್ಭಾಂಧವ ಸತೀಶ್ ಸಾಲ್ಯಾನ್ ಮಾತನಾಡಿ, ಉಡುಪಿ ಜಿಲ್ಲೆಯಲ್ಲಿ ಪ್ರಸ್ತುತ ೪೦೦೦೦ ಯುನಿಟ್ ರಕ್ತದ ಕೊರತೆ ಇದೆ. ಕೆಲವೊಂದು ಕಾಯಿಲೆಗಳಿಗೆ ಪ್ರತಿ ತಿಂಗಳಿಗೆ ರಕ್ತ ಬೇಕಾಗುತ್ತದೆ. ಈ ನಿಟ್ಟಿನಲ್ಲಿ ರಕ್ತದಾನ ಶಿಬಿರ ಹಮ್ಮಿಕೊಳ್ಳುವುದರ ಜೊತೆಗೆ ಅದರ ಬಗ್ಗೆ ಅರಿವು ಮೂಡಿಸುವ ಕಾರ್ಯ ಕೂಡ ಮಾಡಬೇಕು ಎಂದರು. ರಕ್ತದಾನ ಎಂಬುದು ಬಹಳಷ್ಟು ಪವಿತ್ರವಾದ ಕಾರ್ಯ. ಹುಟ್ಟು ಹಬ್ಬಗಳನ್ನು ರಕ್ತದಾನ ಮಾಡುವ ಮೂಲಕ ಆಚರಿಸುವುದರಿಂದ ರಕ್ತದ ಕೊರತೆಯನ್ನು ನಿಗೀಸಬಹುದು. ಹಣ ಇರುವವರು ಶ್ರೇಷ್ಠ ಅಲ್ಲ. ಬದಲು ರಕ್ತದಾನ ಮಾಡುವವರೇ ನಿಜವಾದ ಶ್ರೇಷ್ಠ ವ್ಯಕ್ತಿಗಳು ಎಂದು ಅವರು ಅಭಿಪ್ರಾಯಪಟ್ಟರು.

ಮುಖ್ಯ ಅತಿಥಿಯಾಗಿ ನ್ಯಾಯವಾದಿ ಹಬೀಬ್ ಅಲಿ ಖಾದರ್ ಮಾತನಾಡಿ, ರಕ್ತದಾನ ಎಂಬುದು ಶ್ರೇಷ್ಠ ಮಾನವೀಯ ಸೇವೆಯಾಗಿದೆ. ರಕ್ತವನ್ನು ಯಾವುದೇ ಫ್ಯಾಕ್ಟರಿಯಿಂದ ತಯಾರಿಸಲು ಸಾಧ್ಯವಿಲ್ಲ. ಆದುದರಿಂದ ಮನುಷ್ಯರೇ ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮುಂದಾಬೇಕು. ಇದರಿಂದ ರಕ್ತದ ಕೊರತೆಯನ್ನು ನಿಗೀಸಬಹುದು ಎಂದು ಹೇಳಿದರು.

ಉಡುಪಿ ಜಿಲ್ಲಾಸ್ಪತ್ರೆಯ ರಕ್ತನಿಧಿ ಕೇಂದ್ರದ ಡಾ.ನಿಕೇತಾ ರಕ್ತದಾನದ ಮಹತ್ವದ ಕುರಿತು ಮಾಹಿತಿ ನೀಡಿ, ರಕ್ತದಾನ ಮಾಡುವುದರಿಂದ ಒಬ್ಬರ ಜೀವ ಅಲ್ಲ, ಒಟ್ಟು ಮೂವರ ಜೀವವನ್ನು ಉಳಿಸಬಹುದಾಗಿದೆ. ೧೮ವರ್ಷ ಮೇಲ್ಪಟ್ಟವರು ೬೦ವರ್ಷ ಪ್ರಾಯದವರೆಗೂ ರಕ್ತದಾನ ಮಾಡಬಹುದು. ಆರು ತಿಂಗಳಿಗೊಮ್ಮೆ ರಕ್ತದಾನ ಮಾಡುವವರು ೬೫ವರ್ಷಗಳವರೆಗೂ ರಕ್ತದಾನ ಮಾಡಬಹುದಾಗಿದೆ ಎಂದು ತಿಳಿಸಿದರು.

ರಕ್ತದಾನಿಗಳಾದ ರಾಕೇಶ್ ಬಂಗೇರ ಪಲಿಮಾರು, ರೋಯ್ಸ್ ಉದ್ಯಾವರ, ಬದ್ರುದ್ದೀನ್ ಎಚ್.ಹೆಜಮಾಡಿ, ರಫೀಕ್ ಕಲ್ಯಾಣಪುರ ಹಾಗೂ ಉದಯ ಕರ್ಕೇರ ಪಿತ್ರೋಡಿ ಅವರನ್ನು ಸನ್ಮಾನಿಸಲಾಯಿತು. ಅಧ್ಯಕ್ಷತೆಯನ್ನು ಮಲಬಾರ್ ಗೋಲ್ಡ್ ಅಂಡ್ ಡೈಮಂಡ್ಸ್ ಉಡುಪಿ ಶಾಖಾ ಮುಖ್ಯಸ್ಥ ವಿಜಯ ಕುಮಾರ್ ವಹಿಸಿದ್ದರು. ಸಾಮಾಜಿಕ ಕಾರ್ಯಕರ್ತೆ ವಿನುತಾ ಕಿರಣ್, ಮಂಗಳೂರು ಶಾಖಾ ಮುಖ್ಯಸ್ಥ ಹಫೀಝ್ ರೆಹಮಾನ್, ವ್ಯವಸ್ಥಾಪಕರಾದ ಪುರಂದರ ತಿಂಗಳಾಯ, ಮುಸ್ತಪಾ ಎ.ಕೆ., ಮಾರುಕಟ್ಟೆ ವ್ಯವಸ್ಥಾಪಕ ತಂಝೀಮ್ ಶಿರ್ವ ಉಪಸ್ಥಿತರಿದ್ದರು.

ಸಿಬ್ಬಂದಿ ದಿವ್ಯಾ ಪ್ರಾಸ್ತಾವಿಕವಾಗಿ ಮಾತನಾಡಿದರು. ವಿಘ್ನೇಶ್ ಸ್ವಾಗತಿಸಿ ಕಾರ್ಯಕ್ರಮ ನಿರೂಪಿಸಿದರು. ಶಿಬಿರದಲ್ಲಿ ಹಲವು ಮಂದಿ ಪಾಲ್ಗೊಂಡು ರಕ್ತದಾನ ಮಾಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವಿಶ್ವ ಮಧುಮೇಹ ದಿನಾಚರಣೆ ಪ್ರಯುಕ್ತ ಆದರ್ಶ ಆಸ್ಪತ್ರೆಯಲ್ಲಿ ಉಚಿತ ಮಧುಮೇಹ ತಪಾಸಣಾ ಶಿಬಿರ

ಉಡುಪಿ, ನ.14: ವಿಶ್ವ ಮಧುಮೇಹ ದಿನಾಚರಣೆಯ ಅಂಗವಾಗಿ ಆದರ್ಶ ಆಸ್ಪತ್ರೆ, ಉಡುಪಿ...

ಮಕ್ಕಳ ದಿನಾಚರಣೆ ಅಂಗವಾಗಿ ಉಡುಪಿ ವಿಧಾನಸಭಾ ಕ್ಷೇತ್ರದ ವಿವಿಧ ಶಾಲೆಗಳ 20 ಸಾವಿರ ವಿದ್ಯಾರ್ಥಿಗಳಿಗೆ ಪೆನ್ ವಿತರಣೆ: ಯಶ್ಪಾಲ್ ಸುವರ್ಣ

ಉಡುಪಿ, ನ.14: ಭಾರತ ದೇಶದ ಮುಂದಿನ ಭವಿಷ್ಯವನ್ನು ರೂಪಿಸಲಿರುವ ವಿದ್ಯಾರ್ಥಿಗಳಿಗೆ ಮಕ್ಕಳ...

ಬಾಹ್ಯಾಕಾಶ ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ್ದರಿಂದ ಮತ್ತಷ್ಟು ಉಪಗ್ರಹ ಕಕ್ಷೆಗೆ: ಮೈಸೂರಿನಲ್ಲಿ ಪ್ರಧಾನಿ ಮೋದಿ

ಮೈಸೂರು, ನ.14: ಕೇಂದ್ರ ಸರ್ಕಾರವು ಬಾಹ್ಯಾಕಾಶ ವಲಯವನ್ನು ಖಾಸಗಿ ವಲಯಕ್ಕೆ ಮುಕ್ತಗೊಳಿಸಿದ್ದು,...

ಕೇಂದ್ರ ಸಚಿವರಿಂದ ಅಜ್ಜರಕಾಡಿನ ಆಕಾಶವಾಣಿ ಕೇಂದ್ರದಲ್ಲಿ ಎಫ್‌ಎಂ ಪ್ರೇಷಕದ ಉದ್ಘಾಟನೆ

ಉಡುಪಿ, ನ.13: ಉಡುಪಿ ಎಫ್‌ಎಂ ಸೇವೆಯ ಕಾರ್ಯಾರಂಭದಿಂದಾಗಿ ಕರಾವಳಿ ಪ್ರದೇಶದಲ್ಲಿ ಸಾರ್ವಜನಿಕ...
error: Content is protected !!