Monday, August 3, 2026
Monday, August 3, 2026

ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್ಪಾಲ್ ಸುವರ್ಣ

ಪುಷ್ಪಾನಂದ ಫೌಂಡೇಶನ್ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ: ಯಶ್ಪಾಲ್ ಸುವರ್ಣ

Date:

ಉಡುಪಿ, ಆ.3: ಪುಷ್ಪಾನಂದ ಫೌಂಡೇಶನ್ ವತಿಯಿಂದ 2025-2026ನೇ ಶೈಕ್ಷಣಿಕ ಸಾಲಿನ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಶೇ. 85% ಕ್ಕಿಂತ ಹೆಚ್ಚು ಅಂಕ ಗಳಿಸಿದ ಉಡುಪಿ ವಿಧಾನಸಭಾ ಕ್ಷೇತ್ರದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಲು ಅರ್ಜಿಗಳನ್ನು ಆಹ್ವಾನಿಸಲಾಗಿದೆ ಎಂದು ಫೌಂಡೇಶನ್‌ನ ಪ್ರವರ್ತಕರಾದ ಉಡುಪಿ ಶಾಸಕ ಯಶ್‌ಪಾಲ್ ಎ. ಸುವರ್ಣ ತಿಳಿಸಿದ್ದಾರೆ.

ಉಡುಪಿ ವಿಧಾನಸಭಾ ಕ್ಷೇತ್ರದ ಉಡುಪಿ ನಗರಸಭೆ ಹಾಗೂ ಗ್ರಾಮ ಪಂಚಾಯತ್ ವ್ಯಾಪ್ತಿಯ ವಿದ್ಯಾರ್ಥಿಗಳು ಈ ಪುರಸ್ಕಾರಕ್ಕೆ ಅರ್ಜಿ ಸಲ್ಲಿಸಬಹುದು. ಅರ್ಜಿ ಪ್ರತಿಗಳು ಉಡುಪಿಯ ‘ಸ್ವರಾಷ್ಟ್ರ ಸೇವಾ’ ಶಾಸಕರ ಕಚೇರಿ ಹಾಗೂ ಬ್ರಹ್ಮಾವರ ತಾಲೂಕು ಕಚೇರಿಯ ಶಾಸಕರ ಕಾರ್ಯಾಲಯದಲ್ಲಿ ಲಭ್ಯವಿವೆ.

ಅರ್ಜಿ ಸಲ್ಲಿಕೆಗೆ ಆಗಸ್ಟ್ 31 2026 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗಾಗಿ 9901190402, 9611817725, ಮತ್ತು 9019566366 ಸಂಖ್ಯೆಗಳನ್ನು ಸಂಪರ್ಕಿಸಬಹುದು ಎಂದು ಯಶ್‌ಪಾಲ್ ಸುವರ್ಣ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯಕ್ಷಗಾನ ಕಲಾರಂಗ: ಕಾರ್ಯಕರ್ತರ ಶ್ರೇಯೋಭಿವೃದ್ಧಿಗೆ ಪ್ರಾರ್ಥನೆ

ಉಡುಪಿ, ಆ.೩: ಉಡುಪಿಯ ಯಕ್ಷಗಾನ ಕಲಾರಂಗದ ಐವೈಸಿ ಸಭಾಭವನದಲ್ಲಿ ಧಾರ್ಮಿಕ ಕಾರ್ಯಕ್ರಮ...

ಆ.6: ಮಣಿಪಾಲದ ಕಂಟ್ರಿ ಇನ್ ಹೊಟೇಲ್ ನಲ್ಲಿ ನೇರ ಸಂದರ್ಶನ

ಉಡುಪಿ, ಆ.3: ನಗರದ ಮಣಿಪಾಲ ರಜತಾದ್ರಿ ರಸ್ತೆಯ ವಿದ್ಯಾರತ್ನ ನಗರದ ಡಿ.ಸಿ...

ಮಾನವ ಕಳ್ಳಸಾಗಾಣಿಕೆ ನಿರ್ಮೂಲನೆ ಬಗ್ಗೆ ಅರಿವು ಮೂಡಿಸಿ: ನ್ಯಾ. ನಿತಿನ್ ವೈ.ರಾವ್

ಉಡುಪಿ, ಆ.3: ಮಾನವ ಕಳ್ಳ ಸಾಗಾಣಿಕೆ ಮಾನವೀಯತೆಯ ಮೇಲಾಗುವ ಅತಿ ದೊಡ್ಡ...
error: Content is protected !!