Saturday, October 24, 2026
Saturday, October 24, 2026

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ನೀಟ್ ಸಾಧಕರಿಗೆ ಸನ್ಮಾನ

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ನೀಟ್ ಸಾಧಕರಿಗೆ ಸನ್ಮಾನ

Date:

ಕಾರ್ಕಳ, ಆ.4: ದೇಶದಲ್ಲಿ ವೈದ್ಯಕೀಯ ಕ್ಷೇತ್ರಕ್ಕೆ ಸೇರ ಬಯಸುವ ವಿದ್ಯಾರ್ಥಿಗಳಿಗೆ ನಡೆಸುವ ಅರ್ಹತಾ ಪರೀಕ್ಷೆಯಾದ ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದು ದೇಶದ ಪ್ರತಿಷ್ಠಿತ ಮೆಡಿಕಲ್ ಕಾಲೇಜುಗಳಿಗೆ ಸೇರಿಕೊಳ್ಳಲಿರುವ ಕ್ರಿಯೇಟಿವ್ ಸಂಸ್ಥೆಯ ವಿದ್ಯಾರ್ಥಿಗಳಿಗೆ ಸನ್ಮಾನ ಕಾರ್ಯಕ್ರಮ ಕ್ರಿಯೇಟಿವ್ ನ ಸಪ್ತಸ್ವರ ವೇದಿಕೆಯಲ್ಲಿ ಜರುಗಿತು. ಸಹ ಸಂಸ್ಥಾಪಕರಾದ ಅಶ್ವತ್ ಎಸ್ ಎಲ್ ರವರು ಪ್ರಾಸ್ತಾವಿಕವಾಗಿ ಮಾತನಾಡುತ್ತಾ, ನೀಟ್ ಪರೀಕ್ಷೆಯಲ್ಲಿ ಕಠಿಣ ಪ್ರಯತ್ನಪಟ್ಟು ಸಾಧನೆಗೈದಿರುವ ವಿದ್ಯಾರ್ಥಿಗಳನ್ನು ಮತ್ತು ಅವರ ಹೆತ್ತವರನ್ನು ಗೌರವಿಸಿಕೊಳ್ಳಬೇಕೆಂಬ ಸದುದ್ದೇಶದಿಂದ ಕ್ರಿಯೇಟಿವ್ ಪ್ರತಿಭಾ ಪರ್ವ ಎಂಬ ವಿನೂತನ ಕಾರ್ಯಕ್ರಮವನ್ನು ಹಮ್ಮಿಕೊಂಡಿದ್ದೇವೆ. ಈ ಬಾರಿಯ ನೀಟ್ ಪರೀಕ್ಷೆಯಲ್ಲಿ ಅನೇಕ ಗೊಂದಲಗಳ ನಡುವೆಯೂ ಸಂಕಟಗಳನ್ನು, ಒತ್ತಡಗಳನ್ನು ದಾಟಿ ಗೆದ್ದು ವಿಶಿಷ್ಟ ಸಾಧನೆ ಗೈದಿರುವ ವಿದ್ಯಾರ್ಥಿಗಳನ್ನು ವಿಶೇಷವಾಗಿ ಗುರುತಿಸಲು ಅತೀವ ಸಂತೋಷವಾಗುತ್ತದೆ. ಕೇವಲ ವಿದ್ಯಾರ್ಥಿಗಳಿಗೆ ಅಂಕ ಗಳಿಕೆ ಮಾತ್ರವಲ್ಲದೆ ಭವಿಷ್ಯತ್ತಿನಲ್ಲಿ ಉತ್ತಮ ನಾಗರಿಕರನ್ನಾಗಿ ಮಾಡುವಲ್ಲಿ ಕ್ರಿಯೇಟಿವ್ ಸಂಸ್ಥೆ ಸದಾ ಶ್ರಮಿಸುತ್ತಿದೆ ಎಂದು ನುಡಿದರು.

ಸಹ ಸಂಸ್ಥಾಪಕರಾದ ಗಣಪತಿ ಭಟ್ ಕೆ.ಎಸ್. ರವರು, ಕಾರ್ಯಕ್ರಮದ ಕುರಿತು ಇದು ಕೇವಲ ಬಹುಮಾನ ಕೊಡುವ ಕಾರ್ಯಕ್ರಮವಲ್ಲ ವಿದ್ಯಾರ್ಥಿಗಳ ಪರಿಶ್ರಮವನ್ನು, ಪ್ರತಿಭೆಯನ್ನು ಗುರುತಿಸಿ ಗೌರವನ್ನು ಸೂಚಿಸುವ ಕಾರ್ಯಕ್ರಮ ಮತ್ತು ಮುಂದಿನ ವರ್ಷದ ವಿದ್ಯಾರ್ಥಿಗಳಿಗೆ ಸ್ಪೂರ್ತಿ ಕೊಡುವ ಅರ್ಥಪೂರ್ಣ ಕಾರ್ಯಕ್ರಮವಿದು. ವಿದ್ಯಾರ್ಥಿಗಳ ಈ ಸಾಧನೆಯಲ್ಲಿ ಕೇವಲ ಉಪನ್ಯಾಸಕರು ಮಾತ್ರವಲ್ಲದೆ ನಿಲಯ ಪಾಲಕರ ತ್ಯಾಗ, ಪರಿಶ್ರಮ ವಿದ್ಯಾರ್ಥಿಗಳ ಯಶಸ್ಸಿನ ಹಿಂದೆ ಅಡಗಿದೆ ಎನ್ನುತ್ತಾ ಶಿಕ್ಷಣ ಕಲಿಸಿದ ಶಿಕ್ಷಕರನ್ನು ಹೆತ್ತವರನ್ನು ಶಿಕ್ಷಣ ನೀಡಿದ ಸಂಸ್ಥೆಯನ್ನು ಮರೆಯಬಾರದು ಎಂದು ಕಿವಿಮಾತುಗಳನ್ನಾಡಿದರು.

ಸಹ ಸಂಸ್ಥಾಪಕರಾದ ಡಾ. ಗಣನಾಥ ಶೆಟ್ಟಿ ಬಿ.ಯವರು, ರಾಷ್ಟ್ರೀಯ ಮಟ್ಟದಲ್ಲಿ ನಡೆಯುವ ನೀಟ್ ನಂತಹ ಅನೇಕ ಪರೀಕ್ಷೆಗಳು ಹಲವಾರು ಕಾರಣಗಳಿಂದ ರದ್ದಾದರೂ ಕೂಡ ವಿದ್ಯಾರ್ಥಿಗಳು ಅದರ ಬಗ್ಗೆ ಚಿಂತಾಗ್ರಸ್ತರಾಗದೆ ತಮ್ಮ ಗುರಿಯನ್ನು ಈಡೇರಿಸುವ ನಿಟ್ಟಿನಲ್ಲಿ ನಮಗೆ ಸಿಕ್ಕಿರುವ ಹೆಚ್ಚುವರಿ ಅವಕಾಶವೆಂದು ಭಾವಿಸಿಕೊಂಡು ಮತ್ತಷ್ಟು ಓದಿನ ಕಡೆಗೆ ಗಮನ ಕೊಟ್ಟಾಗ ಇಂತಹ ಯಶಸ್ಸನ್ನು ಸಾಧಿಸಲು ಸಾಧ್ಯ ಎಂದು ತಿಳಿಸಿದರು. ಸಂಸ್ಥೆಯ ಪ್ರಾಂಶುಪಾಲರು ಹಾಗೂ ಸಹ ಸಂಸ್ಥಾಪಕರಾದ ವಿದ್ವಾನ್ ಗಣಪತಿ ಭಟ್ ರವರು, ಕ್ರಿಯೇಟಿವ್ ಸಂಸ್ಥೆ ವಿದ್ಯಾರ್ಥಿಗಳಿಗೆ ಒಂದು ಉತ್ತಮವಾದ ಕಲಿಕಾ ವಾತಾವರಣವನ್ನು ಕಲ್ಪಿಸಿಕೊಟ್ಟು ಕಾಲಕಾಲಕ್ಕೆ ತಕ್ಕಂತೆ ಸೂಕ್ತ ಮಾರ್ಗದರ್ಶನ ನೀಡುತ್ತಾ ಬಂದಿದೆ. ವಿದ್ಯಾರ್ಥಿಗಳು ತಮ್ಮ ಮೇಲೆ ವಿಶ್ವಾಸವನ್ನು ಇಟ್ಟುಕೊಂಡು ನಿರಂತರವಾಗಿ ಪ್ರಯತ್ನಪಟ್ಟಲ್ಲಿ ಖಂಡಿತ ಯಶಸ್ಸನ್ನು ಗಳಿಸಲು ಸಾಧ್ಯ ಎಂದು ತಿಳಿಸಿದರು. ವೇದಿಕೆಯಲ್ಲಿ ಸಹ ಸಂಸ್ಥಾಪಕರಾದ ಆದರ್ಶ ಎಂ. ಕೆ. ಉಪಸ್ಥಿತರಿದ್ದರು.

ನೀಟ್ ಪರೀಕ್ಷೆಯಲ್ಲಿ ಅತ್ಯುನ್ನತ ಸಾಧನೆಗೈದ ತೇಜಸ್ ಹೆಗಡೆ ಹೆಚ್. ಡಿ., ತೇಜಸ್ ಆರ್ ಬಿ, ಧ್ರುವ ವಿ.ಬಿ., ಲೇಖನ್ ಕಾರ್ಯಪ್ಪ, ಮೋಕ್ಷ ಬಿ.ಎಂ., ಹಿತಾರ್ಥ ವಿ. ಎಸ್. ನಂದನ್ ಜಿ ಇವರುಗಳನ್ನು ನಗದು ಬಹುಮಾನದೊಂದಿಗೆ ಸಂಮಾನಿಸಿ ಗೌರವಿಸಲಾಯಿತು. ಸಾಧಕ ವಿದ್ಯಾರ್ಥಿಗಳು ಹಾಗೂ ಹೆತ್ತವರು ತಮ್ಮ ಅನಿಸಿಕೆಗಳನ್ನು ವ್ಯಕ್ತಪಡಿಸಿ ಸಂಸ್ಥೆಯ ಬಗ್ಗೆ ಮೆಚ್ಚುಗೆಯ ಮಾತುಗಳನ್ನಾಡಿದರು. ಉಪನ್ಯಾಸಕರಾದ ಲೋಹಿತ್ ಎಸ್. ಕೆ. ನಿರೂಪಿಸಿದರು. ವಿದ್ಯಾರ್ಥಿಗಳು, ಬೋಧಕ ಬೋಧಕೇತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯುರೋಪ್‌ಗೆ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡುವ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ: ರಕ್ಷಣಾ ಕಾರ್ಯದರ್ಶಿ

ನವದೆಹಲಿ, ಅ.24: ಯುರೋಪಿಯನ್ ಒಕ್ಕೂಟದ 'ರೀ-ಆರ್ಮ್ ಯುರೋಪ್' ಉಪಕ್ರಮದ ಅಡಿಯಲ್ಲಿ ರಕ್ಷಣಾ...

ನನ್ನ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ವೀಡಿಯೋ ಸಂಪೂರ್ಣ ಸುಳ್ಳು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಅ.24: ನನ್ನ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ವೀಡಿಯೋ ಸಂಪೂರ್ಣ...

ಡಿಸೆಂಬರ್ ಅಂತ್ಯದೊಳಗೆ ಶಿವಪುರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ಅ.24: ಬಹಳ ದಿನಗಳಿಂದ ನೆನೆಗುದಿಗೆಗೆ ಬಿದ್ದಿರುವ ಶಿವಪುರ ಪಂಚಾಯತ್ ಕಡೆಯಿಂದ...

ಹೊಸ ಕೈಗಾರಿಕೋದ್ಯಮಗಳ ಸ್ಥಾಪನೆಗೆ ಮುಂದೆ ಬರುವ ಉದ್ಯಮಿಗಳಿಗೆ ಮೂಲಸೌಕರ್ಯ ಒದಗಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಅ.24: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಉದ್ಯಮಗಳನ್ನು ಸ್ಥಾಪಿಸಲು ಉದ್ಯಮಿಗಳು ಮುಂದೆ...
error: Content is protected !!