Saturday, October 24, 2026
Saturday, October 24, 2026

ಕನ್ನಡ ಪುಸ್ತಕ ಪ್ರಾಧಿಕಾರ- ಮನೆಗೊಂದು ಗ್ರಂಥಾಲಯ; 10 ಗ್ರಂಥಾಲಯಗಳ ಅನುಷ್ಠಾನ ಕಾರ್ಯಕ್ರಮ

ಕನ್ನಡ ಪುಸ್ತಕ ಪ್ರಾಧಿಕಾರ- ಮನೆಗೊಂದು ಗ್ರಂಥಾಲಯ; 10 ಗ್ರಂಥಾಲಯಗಳ ಅನುಷ್ಠಾನ ಕಾರ್ಯಕ್ರಮ

Date:

ಉಡುಪಿ, ಆ.4: ಉಡುಪಿ ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಇದರ ವತಿಯಿಂದ ನಡೆಯುತ್ತಿರುವ ಮನೆಗೊಂದು ಗ್ರಂಥಾಲಯ ಅಭಿಯಾನ ಉಡುಪಿ ಜಿಲ್ಲೆಯಲ್ಲಿ ಕನ್ನಡ ಸಾಹಿತ್ಯ ಪರಿಷತ್ ಉಡುಪಿ ತಾಲೂಕು ಘಟಕದ ಸಹಯೋಗದೊಂದಿಗೆ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ. ಒಂದೇ ದಿನ 10 ಗ್ರಂಥಾಲಯ ಅನುಷ್ಠಾನವನ್ನು ಉಡುಪಿಯ ಉದ್ಯಮಿಗಳಾದ ಪ್ರೀತಿ ನಾಯಕ್ ಮತ್ತು ಜನಾರ್ದನ್ ನಾಯಕ್ ದಂಪತಿಗಳ ಮನೆಯಲ್ಲಿ ಚಾಲನೆ ನೀಡಲಾಯಿತು.

ಕಾರ್ಯಕ್ರಮವನ್ನು ಅನುಷ್ಠಾನ ಸಮಿತಿ ಜಿಲ್ಲಾ ಸಹ ಸಂಚಾಲಕ ಮತ್ತು ಕಸಾಪ ಉಡುಪಿ ತಾಲೂಕು ಅಧ್ಯಕ್ಷ ರವಿರಾಜ್ ಹೆಚ್‍.ಪಿ ಸಂಘಟಿಸಿ ಮಾತನಾಡಿ, ಈಗಾಗಲೇ ಉಡುಪಿ ತಾಲೂಕಿನಲ್ಲಿ ಮನೆಯೇ ಗ್ರಂಥಾಲಯ ಅಭಿಯಾನ ಅತ್ಯಂತ ಯಶಸ್ವಿಯಾಗಿ ನಡೆಯುತ್ತಿದೆ, ಇತ್ತೀಚಿಗೆ ನಮ್ಮ ಕಾರ್ಯಕ್ರಮಗಳನ್ನು ಮೆಚ್ಚಿ ಕನ್ನಡ ಪುಸ್ತಕ ಪ್ರಾಧಿಕಾರ ಅಧ್ಯಕ್ಷ ಮಾನಸ ಇವರು ಮನೆಗೊಂದು ಗ್ರಂಥಾಲಯ ಅಭಿಯಾನವನ್ನು ಜಿಲ್ಲೆಯಲ್ಲಿ ಅನುಷ್ಠಾನಿಸಲು ನಮಗೆ ಅವಕಾಶ ನೀಡಿದ್ದಾರೆ.

ಇದನ್ನು ಕೂಡ ಪರಿಣಾಮಕಾರಿಯಾಗಿ ಅನುಷ್ಠಾನ ಮಾಡುವಲ್ಲಿ ನಾವೆಲ್ಲರೂ ನಿರತರಾಗಿದ್ದೇವೆ ಎಂದರು.
ಅನುಷ್ಠಾನ ಸಮಿತಿಯ ಸದಸ್ಯರಾದ ಜನಾದ೯ನ್ ಕೊಡವೂರು, ರಂಜನಿ ವಸಂತ್, ದೀಪಾ ಚಂದ್ರಕಾಂತ್, ಸಿದ್ದಬಸಯ್ಯಸ್ವಾಮಿ ಚಿಕ್ಕಮಠ, ಡಾ. ರಶ್ಮಿ ಅಮ್ಮೆಂಬಳ, ರಾಘವೇಂದ್ರ ಪ್ರಭು ಕರ್ವಾಲು, ಕಸಾಪ ಜಿಲ್ಲಾ ಪ್ರತಿನಿಧಿ ಪೂರ್ಣಿಮಾ ಜನಾರ್ದನ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯುರೋಪ್‌ಗೆ ಶಸ್ತ್ರಾಸ್ತ್ರಗಳನ್ನು ರಫ್ತು ಮಾಡುವ ಮೂರನೇ ಅತಿದೊಡ್ಡ ರಾಷ್ಟ್ರವಾಗಿ ಭಾರತ ಹೊರಹೊಮ್ಮಿದೆ: ರಕ್ಷಣಾ ಕಾರ್ಯದರ್ಶಿ

ನವದೆಹಲಿ, ಅ.24: ಯುರೋಪಿಯನ್ ಒಕ್ಕೂಟದ 'ರೀ-ಆರ್ಮ್ ಯುರೋಪ್' ಉಪಕ್ರಮದ ಅಡಿಯಲ್ಲಿ ರಕ್ಷಣಾ...

ನನ್ನ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ವೀಡಿಯೋ ಸಂಪೂರ್ಣ ಸುಳ್ಳು: ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ

ಮೈಸೂರು, ಅ.24: ನನ್ನ ವಿರುದ್ಧದ ನಕಲಿ ಸ್ಟಿಂಗ್‌ ಆಪರೇಷನ್‌ ವೀಡಿಯೋ ಸಂಪೂರ್ಣ...

ಡಿಸೆಂಬರ್ ಅಂತ್ಯದೊಳಗೆ ಶಿವಪುರ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ಮುಗಿಸಲು ಅಧಿಕಾರಿಗಳಿಗೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಸೂಚನೆ

ಉಡುಪಿ, ಅ.24: ಬಹಳ ದಿನಗಳಿಂದ ನೆನೆಗುದಿಗೆಗೆ ಬಿದ್ದಿರುವ ಶಿವಪುರ ಪಂಚಾಯತ್ ಕಡೆಯಿಂದ...

ಹೊಸ ಕೈಗಾರಿಕೋದ್ಯಮಗಳ ಸ್ಥಾಪನೆಗೆ ಮುಂದೆ ಬರುವ ಉದ್ಯಮಿಗಳಿಗೆ ಮೂಲಸೌಕರ್ಯ ಒದಗಿಸಿ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ಅ.24: ಜಿಲ್ಲೆಯಲ್ಲಿ ಹೊಸ ಕೈಗಾರಿಕಾ ಉದ್ಯಮಗಳನ್ನು ಸ್ಥಾಪಿಸಲು ಉದ್ಯಮಿಗಳು ಮುಂದೆ...
error: Content is protected !!