ಕಾಪು, ಆ.5: ಸರಕಾರಿ ಪ್ರಥಮ ದರ್ಜೆ ಕಾಲೇಜು, ಇಲ್ಲಿಯ ಮಾದಕ ವ್ಯಸನ ಮುಕ್ತ ಜಾಗೃತಿ ಸಮಿತಿ, ಐಕ್ಯೂಎಸಿ ಇದರ ಜಂಟಿ ಆಶ್ರಯದಲ್ಲಿ ಡಾ. ಮಹಾಂತ ಶಿವಯೋಗಿಗಳ ಜನ್ಮದಿನದ ಪ್ರಯುಕ್ತ ವ್ಯಸನ ಮುಕ್ತ ದಿನಾಚರಣೆ ಮಾದಕ ವ್ಯಸನ ಮುಕ್ತ ಜಾಗೃತಿ ಕಾರ್ಯಕ್ರಮ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಡಾ. ಗೋಪಾಲಕೃಷ್ಣಎಂ. ಗಾಂವ್ಕರ್ ವಹಿಸಿದ್ದರು. ರಜನಿ, ಸಹಾಯಕ ಕಾನೂನು ನೆರವು ರಕ್ಷಣಾ ಸಲಹೆಗಾರರು ಡಿಎಲ್‌ಎಸ್‌ಎ ಉಡುಪಿ ಇವರು ವಿದ್ಯಾರ್ಥಿಗಳಿಗೆ ಮಾದಕ ವ್ಯಸನದಿಂದ ಆಗುವ ದುಷ್ಪಾರಿಣಾಮ ಮತ್ತು ಕಾನೂನಿನ ಅಡಿಯಲ್ಲಿ ಆಗುವ ಶಿಕ್ಷೆಯ ಬಗ್ಗೆ ಮಾಹಿತಿಯನ್ನು ನೀಡಿದರು. ವಿದ್ಯಾರ್ಥಿಗಳಿಗೆ ಪೋಕ್ಸೋ ಕಾಯಿದೆಯ ಬಗ್ಗೆ ವಿವರಿಸಿದರು. ಮಾದಕ ದ್ರವ್ಯ ಜಾಗೃತ ಸಮಿತಿಯ ಸಂಯೋಜಕರಾದ ಸವಿತಾ, ಸದಸ್ಯರಾದ ಡಾ. ರಾಘವ ನಾಯ್ಕ, ಐಕ್ಯೂಎಸಿ ಸಂಚಾಲಕರಾದ ಡಾ. ರೋಶ್ನಿ ಯಶವಂತ್, ಬೋಧಕ ಮತ್ತು ಬೋಧಕೇತರ ವೃಂದವರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.




By
ForthFocus™