Sunday, August 30, 2026
Sunday, August 30, 2026

ಕಾಳಾವರ ಕಾಲೇಜು: ಗ್ರಂಥಪಾಲಕ ರವಿಚಂದ್ರರಿಗೆ ಬೀಳ್ಕೊಡುಗೆ

ಕಾಳಾವರ ಕಾಲೇಜು: ಗ್ರಂಥಪಾಲಕ ರವಿಚಂದ್ರರಿಗೆ ಬೀಳ್ಕೊಡುಗೆ

Date:

ಕೋಟೇಶ್ವರ, ಆ.5: ಶ್ರೀ ಕಾಳಾವರ ವರದರಾಜ ಎಂ. ಶೆಟ್ಟಿ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಕುಂದಾಪುರ ಇಲ್ಲಿ ಕಳೆದ ಹದಿನೈದು ವರ್ಷಗಳಿಂದ ಗ್ರಂಥಪಾಲಕರಾಗಿ ಸೇವೆಗೈದು ವಯೋನಿವೃತ್ತರಾದ ರವಿಚಂದ್ರ ಹೆಚ್.ಎಸ್. ರವರಿಗೆ ಕಾಲೇಜಿನ ವತಿಯಿಂದ ಬೀಳ್ಕೊಡುಗೆ ಸಮಾರಂಭ ಜರಗಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ಧ ಕಾಲೇಜಿನ ಪ್ರಾಂಶುಪಾಲ ನಾಗರಾಜ ವೈದ್ಯ ಎಂ. ಅವರ ಪ್ರಾಮಾಣಿಕ ಸೇವೆಯನ್ನು ಸ್ಮರಿಸಿದರು. ಹಿಂದೆ ಇದೇ ಸಂಸ್ಥೆಯಲ್ಲಿ ಪ್ರಾಂಶುಪಾಲರಾಗಿದ್ದ ಡಾ. ರಾಜೇಂದ್ರ ಎಸ್. ನಾಯಕ, ಪ್ರೊ. ರಾಮರಾಯ ಆಚಾರ್ಯ, ಪ್ರಾಧ್ಯಾಪಕರು ಹಾಗೂ ವಿದ್ಯಾರ್ಥಿಗಳು ತಮ್ಮ ಅನಿಸಿಕೆ ಹಂಚಿಕೊಂಡರು. ಸಿಂಚನಾ ಮತ್ತು ತಂಡದವರು ಪ್ರಾರ್ಥಿಸಿದರು. ಶೃತಿ ಆಚಾರ್ಯ ಎನ್. ಕಾರ್ಯಕ್ರಮ ನಿರೂಪಿಸಿದರು. ನಿರಂಜನ ಶರ್ಮ ಗ್ರಂಥಪಾಲಕರ ಸೇವೆಯನ್ನು ಸಭೆಗೆ ಪರಿಚಯಿಸಿದರು. ಅಧ್ಯಾಪಕ ಕಾರ್ಯದರ್ಶಿ ಡಾ. ಉದಯ ಶೆಟ್ಟಿ ಕೆ. ಸಂಘಟಿಸಿದ ಈ ಸಮಾರಂಭದಲ್ಲಿ ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ಸುಬ್ರಹ್ಮಣ್ಯ ಎ. ಸ್ವಾಗತಿಸಿ, ಡಾ. ಭಾಗೀರಥಿ ನಾಯ್ಕ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!