Saturday, August 29, 2026
Saturday, August 29, 2026

ಅಜ್ಜರಕಾಡು ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

ಅಜ್ಜರಕಾಡು ಸರ್ಕಾರಿ ಮಹಿಳಾ ಕಾಲೇಜಿನಲ್ಲಿ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳಿಗೆ ಅರ್ಜಿ ಆಹ್ವಾನ

Date:

ಉಡುಪಿ, ಆ.6: ಉಡುಪಿ ಅಜ್ಜರಕಾಡಿನ ಡಾ. ಜಿ. ಶಂಕರ್ ಸರ್ಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಹಾಗೂ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಉನ್ನತ ಶಿಕ್ಷಣ ಮುಂದುವರಿಸಲು ಬಯಸುವ ವಿದ್ಯಾರ್ಥಿನಿಯರಿಗಾಗಿ ವಿವಿಧ ಸ್ನಾತಕೋತ್ತರ ಕೋರ್ಸ್‌ಗಳು ಲಭ್ಯವಿವೆ. ಕಾಲೇಜಿನಲ್ಲಿ ವಾಣಿಜ್ಯ ವಿಭಾಗದಲ್ಲಿ ಎಂ.ಕಾಂ (M. Com) ಕಲಾ ವಿಭಾಗದಲ್ಲಿ ಎಂ.ಎ. ರಾಜ್ಯಶಾಸ್ತ್ರ (M.A. Political Science), ವಿಜ್ಞಾನ ವಿಭಾಗದಲ್ಲಿ ಎಂ.ಎಸ್ಸಿ. ರಸಾಯನಶಾಸ್ತ್ರ (M.Sc. Chemistry) ಮತ್ತು ಎಂ.ಎಸ್ಸಿ. ಗಣಿತಶಾಸ್ತ್ರ (M.Sc. Mathematics) ಸ್ನಾತಕೋತ್ತರ ಕೋರ್ಸ್‌ಗಳುಲಭ್ಯವಿವೆ. ಸರ್ಕಾರಿ ಮಹಿಳಾ ಕಾಲೇಜಾಗಿರುವುದರಿಂದ ವಿದ್ಯಾರ್ಥಿನಿಯರಿಗೆ ಗುಣಮಟ್ಟದ ಉನ್ನತ ಶಿಕ್ಷಣದೊಂದಿಗೆ ಕೈಗೆಟುಕುವ ಶಿಕ್ಷಣದ ಅವಕಾಶ ದೊರೆಯಲಿದೆ. ವಿವಿಧ ಪದವಿ ಕೋರ್ಸ್‌ಗಳನ್ನು ಪೂರ್ಣಗೊಳಿಸಿರುವ ಅರ್ಹ ವಿದ್ಯಾರ್ಥಿನಿಯರುತಮ್ಮ ಆಸಕ್ತಿಯ ವಿಷಯದಲ್ಲಿ ಸ್ನಾತಕೋತ್ತರ ಶಿಕ್ಷಣ ಪಡೆಯಲು ಈ ಅವಕಾಶವನ್ನು ಬಳಸಿಕೊಳ್ಳಬಹುದು.

ಕಾಲೇಜಿನಲ್ಲಿ ಸುಸಜ್ಜಿತ ಗ್ರಂಥಾಲಯ, ಶೈಕ್ಷಣಿಕ ಸೌಲಭ್ಯಗಳು ಹಾಗೂ ವಿವಿಧ ಸಹಪಠ್ಯ ಚಟುವಟಿಕೆಗಳ ಮೂಲಕ ವಿದ್ಯಾರ್ಥಿನಿಯರ ಸಮಗ್ರ ಅಭಿವೃದ್ಧಿಗೆ ಆದ್ಯತೆ ನೀಡಲಾಗುತ್ತಿದೆ. ಸ್ನಾತಕೋತ್ತರ ಕೋರ್ಸ್‌ಗಳಿಗೆ ಪ್ರವೇಶ ಪಡೆಯಲು ಆಸಕ್ತಿ ಹೊಂದಿರುವ ವಿದ್ಯಾರ್ಥಿನಿಯರು ಮೊಬೈಲ್ ಸಂಖ್ಯೆ +91 94803 47167 ಸಂಪರ್ಕಿಸಿ ಕೋರ್ಸ್‌ಗಳ ಅರ್ಹತೆ, ಪ್ರವೇಶ ಪ್ರಕ್ರಿಯೆ ಹಾಗೂ ಇತರ ವಿವರಗಳನ್ನು ಪಡೆದುಕೊಳ್ಳುವಂತೆ ಕಾಲೇಜಿನ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ವರ್ತಮಾನದ ಸಂಕಟಗಳನ್ನು ಮೀರುವ ಶಕ್ತಿ ಸಾಹಿತ್ಯಕ್ಕಿದೆ: ಡಾ. ಸಂತೋಷ್ ಆಳ್ವ

ವಾಮದಪದವು. ಆ.28: ಇಲ್ಲಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ...

ಗಂಗೊಳ್ಳಿ: ಶ್ರೀ ನಾರಾಯಣ ಗುರುಗಳ ಜಯಂತಿ ಆಚರಣೆ

ಗಂಗೊಳ್ಳಿ, ಆ.28: ಶ್ರೀ ನಾರಾಯಣ ಗುರು ಜನ ಸೇವಾ ಬಳಗ ಗಂಗೊಳ್ಳಿ...

ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ

ಉಡುಪಿ, ಆ.28: ಯಕ್ಷಶಿಕ್ಷಣ ಟ್ರಸ್ಟಿನ ವಿಶ್ವಸ್ತರ ಸಭೆ ಶುಕ್ರವಾರ ಟ್ರಸ್ಟಿನ ಗೌರವಾಧ್ಯಕ್ಷರು,...

ಕಾರ್ಕಳ: ಮಾಳ ಕೋಟೆ ಬಸದಿಯಲ್ಲಿ 5 ಅಪರೂಪದ ಜಿನ ಶಾಸನಗಳ ಪತ್ತೆ; ಸಂಶೋಧಕ ಶ್ರುತೇಶ್ ಆಚಾರ್ಯರಿಂದ ಅಧ್ಯಯನ

ಕಾರ್ಕಳ, ಆ.27: ಉಡುಪಿ ಜಿಲ್ಲೆ ಕಾರ್ಕಳ ತಾಲ್ಲೂಕಿನ ಸ್ವಸ್ತಿ ಶ್ರೀ ಲಲಿತಕೀರ್ತಿ...
error: Content is protected !!