Saturday, August 8, 2026
Saturday, August 8, 2026

ಆಗಸ್ಟ್ -ಸೆಪ್ಟಂಬರ್ ಮಾಹೆಯ ಪಡಿತರ ಒಂದೇ ಬಾರಿಗೆ ವಿತರಣೆ : ಪ್ರತ್ಯೇಕ ಬಯೋಮೆಟ್ರಿಕ್ ಕಡ್ಡಾಯ

ಆಗಸ್ಟ್ -ಸೆಪ್ಟಂಬರ್ ಮಾಹೆಯ ಪಡಿತರ ಒಂದೇ ಬಾರಿಗೆ ವಿತರಣೆ : ಪ್ರತ್ಯೇಕ ಬಯೋಮೆಟ್ರಿಕ್ ಕಡ್ಡಾಯ

Date:

ಉಡುಪಿ, ಆ.6: ಸರ್ಕಾರದ ಆದೇಶದಂತೆ ಜಿಲ್ಲೆಯ ಎಲ್ಲಾ ತಾಲೂಕುಗಳ ಅಂತ್ಯೋದಯ ಮತ್ತು ಆದ್ಯತಾ (ಬಿ.ಪಿ.ಎಲ್.) ಪಡಿತರ ಚೀಟಿದಾರರಿಗೆ ರಾಷ್ಟ್ರೀಯ ಆಹಾರ ಭದ್ರತಾ ಕಾಯಿದೆಯಡಿ ಪ್ರಸ್ತುತ ಆಗಸ್ಟ್ – 2026 ರ ಮಾಹೆಯಲ್ಲಿ ಆಗಸ್ಟ್ ಮತ್ತು ಸೆಪ್ಟೆಂಬರ್ ತಿಂಗಳ ಪಡಿತರವನ್ನು ಒಂದೇ ಬಾರಿಗೆ ನ್ಯಾಯಬೆಲೆ ಅಂಗಡಿಗಳ ಮೂಲಕ ವಿತರಿಸಲಾಗುವುದು. ಪಡಿತರ ಚೀಟಿದಾರರು ಎರಡು ತಿಂಗಳ ಧಾನ್ಯವನ್ನು ಪಡೆಯಲು ತಾಂತ್ರಿಕ ದಾಖಲೀಕರಣಕ್ಕಾಗಿ 2 ಬಾರಿ ಪ್ರತ್ಯೇಕವಾಗಿ ಬಯೋ ಮೆಟ್ರಿಕ್ ನೀಡುವುದು ಕಡ್ಡಾಯವಾಗಿರುತ್ತದೆ. ಈ ಸಂಬಂಧ ಅಂತ್ಯೋದಯ ಪ್ರತಿ ಪಡಿತರ ಚೀಟಿಗೆ 35 ಕೆ.ಜಿ + 35 ಕೆ.ಜಿ ಒಟ್ಟು 70 ಕೆ.ಜಿ ಅಕ್ಕಿ ಮತ್ತು ಆದ್ಯತಾ (ಬಿ,.ಪಿ.ಎಲ್) ಪಡಿತರ ಚೀಟಿಯ ಕೇಂದ್ರ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 5 ಕೆ.ಜಿ + 5 ಕೆ.ಜಿ ಒಟ್ಟು 10 ಕೆ.ಜಿ ಅಕ್ಕಿಯನ್ನು ಮತ್ತು ಆದ್ಯತಾ (ಬಿ.ಪಿ.ಎಲ್) ಪಡಿತರ ಚೀಟಿಯ ರಾಜ್ಯ ಪಡಿತರ ಚೀಟಿ ಪ್ರತಿ ಸದಸ್ಯರಿಗೆ 5 ಕೆ.ಜಿ + 5 ಕೆ.ಜಿ ಒಟ್ಟು 10 ಕೆ.ಜಿ ಅಕ್ಕಿಯು ವಿತರಣೆಯಾಗಲಿದೆ ಎಂದು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪನಿರ್ದೇಶಕರ ಕಚೇರಿ ಪ್ರಕಟಣೆ ತಿಳಿಸಿದೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಯೋಗ ಸ್ಪರ್ಧೆಯಲ್ಲಿ ಪ್ರೇರಣಾ ಸಾನ್ವಿ ಸಾಧನೆ

ಉಡುಪಿ, ಆ.8: ಬ್ರಹ್ಮಾವರದಲ್ಲಿ ನಡೆದ ತಾಲ್ಲೂಕು ಮಟ್ಟದ ಯೋಗಾಸನ ಸ್ಪರ್ಧೆಯಲ್ಲಿ ಆರ್ಟಿಸ್ಟಿಕ್...

ಶ್ರೀ ಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ ಅಧ್ಯಕ್ಷ ಅಲೋಕ್ ಕುಮಾರ್ ಭೇಟಿ

ಉಡುಪಿ, ಆ.8: ಶ್ರೀ ಕೃಷ್ಣ ಮಠಕ್ಕೆ ವಿಶ್ವ ಹಿಂದೂ ಪರಿಷದ್ ಅಂತರಾಷ್ಟ್ರೀಯ...

ಇಂಧನದ ಗುಣಮಟ್ಟ ಪತ್ತೆಗೆ ‘ಎಐ’ ಆಧಾರಿತ ತ್ವರಿತ ಮೇಲ್ವಿಚಾರಣಾ ವ್ಯವಸ್ಥೆ: ಜಿಹೆಚ್‌ಸಿಎಲ್ ಲಿ. ಜತೆ ಮಾಹೆ ಒಪ್ಪಂದ

  ಮಣಿಪಾಲ, ಆ.8: ಮಣಿಪಾಲ್‌ ಅಕಾಡೆಮಿ ಆಫ್‌ ಹೈಯರ್‌ ಎಜುಕೇಶನ್‌ (ಮಾಹೆ) ವಿಶ್ವವಿದ್ಯಾಲಯ...
error: Content is protected !!