ಉಡುಪಿ, ಆ.6: ತೋನ್ಸೆ ಗ್ರಾಮ ಪಂಚಾಯತ್ ಕಚೇರಿಗೆ ಶಾಸಕ ಯಶ್ಪಾಲ್ ಸುವರ್ಣ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಸಾರ್ವಜನಿಕರ ಅಹವಾಲು ಸ್ವೀಕರಿಸಿ ಗ್ರಾಮದ ಸಮಸ್ಯೆ ಹಾಗೂ ಬೇಡಿಕೆಗಳ ಬಗ್ಗೆ ಸಮಾಲೋಚನೆ ನಡೆಸಿದರು. ಸಭೆಯಲ್ಲಿ ಉಡುಪಿ ತಾಲೂಕು ಪಂಚಾಯಿತಿಯ ಕಾರ್ಯನಿರ್ವಹಣಾಧಿಕಾರಿಗಳಾದ ವಿಜಯ, ಮಲ್ಪೆ ವೃತ್ತದ ಪೋಲಿಸ್ ನಿರೀಕ್ಷಕರಾದ ರಾಮಚಂದ್ರ ನಾಯಕ್, ಕೆಮ್ಮಣ್ಣು ಗ್ರಾಮ ಪಂಚಾಯತ್ ಆಡಳಿತಾಧಿಕಾರಿಯಾದ ಅನುಷಾ, ಉಡುಪಿ ನಗರ ಪ್ರಾಧಿಕಾರದ ನಗರ ಯೋಜನಾ ಸದಸ್ಯರಾದ ಸಚಿನ್, ಮಲ್ಪೆ ಠಾಣೆಯ ಉಪನಿರೀಕ್ಷಕರಾದ ಅನಿಲ್ ಕುಮಾರ್, ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು, ಗ್ರಾಮ ಪಂಚಾಯತಿಯ ನಿಕಟಪೂರ್ವ ಸದಸ್ಯರುಗಳು ಮತ್ತು ಗ್ರಾಮಸ್ಥರು ಹಾಜರಿದ್ದರು.
ತೋನ್ಸೆ (ಕೆಮ್ಮಣ್ಣು) ಗ್ರಾಮ ಪಂಚಾಯತ್: ಸಾರ್ವಜನಿಕರ ಅಹವಾಲು ಸ್ವೀಕಾರ
ತೋನ್ಸೆ (ಕೆಮ್ಮಣ್ಣು) ಗ್ರಾಮ ಪಂಚಾಯತ್: ಸಾರ್ವಜನಿಕರ ಅಹವಾಲು ಸ್ವೀಕಾರ
Date:




By
ForthFocus™