Thursday, September 3, 2026
Thursday, September 3, 2026

ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ರಿಲಯನ್ಸ್ ಸ್ಮಾರ್ಟ್ ಬಜಾರ್: ಜನಾರ್ದನ್ ಕೊಡವೂರು

ಸ್ಥಳೀಯ ಆಹಾರ ಸಂಸ್ಕೃತಿಗೆ ಪ್ರೋತ್ಸಾಹ ನೀಡಿದ ರಿಲಯನ್ಸ್ ಸ್ಮಾರ್ಟ್ ಬಜಾರ್: ಜನಾರ್ದನ್ ಕೊಡವೂರು

Date:

ಉಡುಪಿ, ಆ. 8: ಸ್ಥಳೀಯ ಆಹಾರ ಸಂಸ್ಕೃತಿಯನ್ನು ಉಳಿಸಿ ಬೆಳೆಸುವ ಉದ್ದೇಶದಿಂದ ರಿಲಯನ್ಸ್ ಸ್ಮಾರ್ಟ್ ಬಜಾರ್ ವತಿಯಿಂದ ಆಯೋಜಿಸಲಾದ ‘ಆಟಿಡೊಂಜಿ ದಿನ’ ಕಾರ್ಯಕ್ರಮ ಶ್ಲಾಘನೀಯವಾಗಿದೆ ಎಂದು ಪತ್ರಕರ್ತ ಜನಾರ್ದನ್ ಕೊಡವೂರು ಅಭಿಪ್ರಾಯಪಟ್ಟರು.

ಗುರುವಾರ ಉಡುಪಿಯ ರಿಲಯನ್ಸ್ ಸ್ಮಾರ್ಟ್ ಬಜಾರ್‌ನಲ್ಲಿ ನಡೆದ ಆಟಿಡೊಂಜಿ ದಿನದ ಬಹುಮಾನ ವಿತರಣಾ ಸಮಾರಂಭದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡಿದ ಅವರು, ನಗರ ಕೇಂದ್ರಿತ ವಾಣಿಜ್ಯ ಸಂಸ್ಥೆಯೊಂದು ತುಳುನಾಡಿನ ಸಾಂಪ್ರದಾಯಿಕ ಆಚರಣೆಗೆ ಆದ್ಯತೆ ನೀಡಿರುವುದು ಸಂತಸದ ವಿಷಯವಾಗಿದೆ ಎಂದರು.

ಒಂದೇ ಸೂರಿನಡಿ ಸ್ಥಳೀಯ 43 ಬಗೆಯ ಸಾಂಪ್ರದಾಯಿಕ ತಿಂಡಿ-ತಿನಿಸುಗಳಿಗೆ ಅವಕಾಶ ಕಲ್ಪಿಸಿರುವುದು ವಿಶೇಷ. ಅಲ್ಲದೆ ಕಾರ್ಯಕ್ರಮದಲ್ಲಿ ಭಾಗವಹಿಸಿದ ಎಲ್ಲ ಸ್ಪರ್ಧಿಗಳಿಗೆ ಸ್ಮರಣಿಕೆ ಹಾಗೂ ಬಹುಮಾನಗಳನ್ನು ನೀಡಿ, ಮಹಿಳೆಯರ ಪ್ರತಿಭೆ ಅನಾವರಣಗೊಳ್ಳಲು ಉತ್ತಮ ವೇದಿಕೆ ಒದಗಿಸಿರುವುದು ಪ್ರಶಂಸನೀಯ ಕಾರ್ಯ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ತೀರ್ಪುಗಾರರಾಗಿ ರಂಜನಿ ವಸಂತ್ ಹಾಗು ಸಹನಾ ಬಲ್ಲಾಳ್ ಸಹಕರಿಸಿದರು. ರಿಲೈನ್ಸ್ ಸ್ಮಾರ್ಟ್ ಬಜಾರ್ ಮುಖ್ಯಸ್ಥ ರಾಘವೇಂದ್ರ ಪ್ರಾಸ್ತಾವಿಕವಾಗಿ ಮಾತನಾಡಿ ಅತಿಥಿಗಳನ್ನು ಸ್ವಾಗತಿಸಿ, ಅಗೋಸ್ಟ್ 12 ರಿಂದ 16ರವರೆಗೆ ‘ಫುಲ್ ಪೈಸಾ ವಸೂಲ್ ಸೇಲ್’ ಪ್ರಾರಂಭವಾಗುವುದು ಎಂದರು. ಜ್ಯೋತಿ ಶೇಟ್ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!