Thursday, September 3, 2026
Thursday, September 3, 2026

ಅಧಿವಕ್ತ ಪರಿಷತ್: ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುವಂದನೆ

ಅಧಿವಕ್ತ ಪರಿಷತ್: ಹಿರಿಯ ವಕೀಲ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುವಂದನೆ

Date:

ಉಡುಪಿ, ಆ.9: ಗುರುಪೂರ್ಣಿಮೆಯ ಪ್ರಯುಕ್ತ ಅಧಿವಕ್ತ ಪರಿಷತ್ ಉಡುಪಿ ಜಿಲ್ಲಾ ಘಟಕದ ವತಿಯಿಂದ ಧಾರ್ಮಿಕ, ಸಾಮಾಜಿಕ ಹಾಗೂ ರಾಜಕೀಯ ಕ್ಷೇತ್ರಗಳಲ್ಲಿ ಅಮೋಘ ಸೇವೆ ಸಲ್ಲಿಸಿರುವ ಹಿರಿಯ ವಕೀಲರಾದ ಮಟ್ಟಾರು ರತ್ನಾಕರ ಹೆಗ್ಡೆ ಅವರಿಗೆ ಗುರುವಂದನೆ ಸಲ್ಲಿಸಿ, ಅಭಿನಂದಿಸಲಾಯಿತು.

ಕಾನೂನು ಕ್ಷೇತ್ರದಲ್ಲಿ ತಮ್ಮ ಅಪಾರ ಅನುಭವ ಹಾಗೂ ಜ್ಞಾನದಿಂದ ಶಿಷ್ಯ ವರ್ಗದವರಿಗೆ ಅಮೂಲ್ಯ ಮಾರ್ಗದರ್ಶನ ನೀಡಿರುವ ಮಟ್ಟಾರು ರತ್ನಾಕರ ಹೆಗ್ಡೆಯವರ ಸೇವೆಯನ್ನು ಈ ಸಂದರ್ಭದಲ್ಲಿ ಸ್ಮರಿಸಲಾಯಿತು. ಸಮಾಜದ ವಿವಿಧ ಕ್ಷೇತ್ರಗಳಿಗೆ ಅವರು ನೀಡಿರುವ ಕೊಡುಗೆ ಹಾಗೂ ವಕೀಲ ಸಮುದಾಯಕ್ಕೆ ನೀಡಿದ ಮಾರ್ಗದರ್ಶನವನ್ನು ಪ್ರಶಂಸಿಸಲಾಯಿತು.

ಅಧಿವಕ್ತ ಪರಿಷತ್‌ನ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸದಸ್ಯೆ ಹಾಗೂ ಉಡುಪಿ ಜಿಲ್ಲಾ ಉಸ್ತುವಾರಿ ಶ್ವೇತಾ ಜೈನ್ ಅವರು ಉಡುಪಿಗೆ ಭೇಟಿ ನೀಡಿ, ಹಿರಿಯ ವಕೀಲರಾದ ಮಟ್ಟಾರು ರತ್ನಾಕರ ಹೆಗ್ಡೆಯವರಿಗೆ ಗುರುವಂದನೆ ಸಲ್ಲಿಸಿದರು.

ಅಧಿವಕ್ತ ಪರಿಷತ್ ಉಡುಪಿ ಜಿಲ್ಲಾ ಅಧ್ಯಕ್ಷ ಸಂತೋಷ್ ಹೆಬ್ಬಾರ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ಆರೂರು ಸುಕೇಶ್ ಶೆಟ್ಟಿ, ಸದಸ್ಯರಾದ ಶಶಿರಾಜ್ ಪೈಯಾರ್, ರಾಜೇಶ್ ಎ.ಆರ್., ಗಿರೀಶ್ ಎಸ್.ಪಿ., ನಿತೇಶ್ ಶೆಟ್ಟಿ ಮಟ್ಟಾರ್, ಜಯಂತ್ ರಾವ್, ಸುಚಿತಾ ಅರುಣ್ ಶೆಟ್ಟಿ, ರವೀಂದ್ರ ಬೈಲೂರು, ನಿತೀಶ್ ಶೆಟ್ಟಿ ಮಟ್ಟಾರ್ ಹಾಗೂ ಯತಿರಾಜ್, ಕಾನೂನು ವಿದ್ಯಾರ್ಥಿ ರಕ್ಷಿತ್ ಬೆಳಪು ಹಾಗೂ ಬಿಜೆಪಿ ಓಬಿಸಿ ಮೋರ್ಚಾ ಕಾಪು ಮಂಡಲ ಅಧ್ಯಕ್ಷ ಸಂತೋಷ್ ಮೂಡುಬೆಳ್ಳೆ ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!