Thursday, September 24, 2026
Thursday, September 24, 2026

ಜ್ಯೋತಿ ಸಾಲಿಗ್ರಾಮ ಇವರಿಗೆ ಪಂಚವರ್ಣದ ‘ಆಸಾಡಿ ಒಡ್ರ್ ಪುರಸ್ಕಾರ’

ಜ್ಯೋತಿ ಸಾಲಿಗ್ರಾಮ ಇವರಿಗೆ ಪಂಚವರ್ಣದ ‘ಆಸಾಡಿ ಒಡ್ರ್ ಪುರಸ್ಕಾರ’

Date:

ಕೋಟ, ಆ.10: ಪ್ರತಿಯೊಬ್ಬರೂ ತಮ್ಮ ನೆಲಮೂಲದ ಭಾಷೆಯನ್ನು ಹೃದಯದ ಭಾಷೆಯನ್ನಾಗಿ ಮಾಡಿಕೊಂಡಾಗ ಮನಸ್ಸಿನ ಮಾತುಗಳಿಗೆ ನ್ಯಾಯಯುತ ಮೌಲ್ಯಗಳು ದೊರೆಯುತ್ತವೆ. ಅದೇ ರೀತಿ ಕುಂದಾಪ್ರ ಕನ್ನಡ ಭಾಷೆ ಗ್ರಾಮೀಣ ಭಾಗದ ಒಂದು ಸುಂದರ ಭಾಷೆಯಾಗಿ ಜಗತ್ತಿನಾದ್ಯಂತ ಮಿಂಚುತ್ತಿದೆ. ಕುಂದಾಪ್ರ ಕನ್ನಡ ಅದೊಂದು ವಿಶಿಷ್ಟ ಗ್ರಾಮೀಣ ಸೊಗಡನ್ನು ಹೊಂದಿರುವ ಭಾಷೆ ಎಂದು ಕುಂದಗನ್ನಡದ ರಾಯಭಾರಿ ಮನು ಹಂದಾಡಿ ಹೇಳಿದರು.

ಮಣೂರು ರಾಜಲಕ್ಷ್ಮೀ ಸಭಾಂಗಣದಲ್ಲಿ ಭಾನುವಾರ ಪಂಚವರ್ಣ ಮಹಿಳಾ ಮಂಡಲದ ನೇತೃತ್ವದಲ್ಲಿ ಮಾತೃಸಂಸ್ಥೆ ಪಂಚವರ್ಣ ಯುವಕ ಮಂಡಲದ ಮಾರ್ಗದರ್ಶನದಲ್ಲಿ ಸ್ನೇಹಕೂಟ ಮಣೂರು ಇವರ ಸಹಕಾರದೊಂದಿಗೆ 5ನೇ ವರ್ಷದ ಕುಂದಾಪ್ರ ಭಾಷೆ ಬದ್ಕಿನ ಆಸಾಡಿ ಒಡ್ರ್ ಕಾರ್ಯಕ್ರಮದಲ್ಲಿ ಕುಂದಾಪ್ರ ಭಾಷಾ ಸೊಗಡಿನ ಬಗ್ಗೆ ಅವರು ಮಾತನಾಡಿದರು.

ಕಾರ್ಯಕ್ರಮವನ್ನು ಗೀತಾನಂದ ಫೌಂಡೇಶನ್ ನಿರ್ದೇಶಕಿ ಗೀತಾ ಎ ಕುಂದರ್ ಹಾಗೂ ಗೀತಾನಂದ ಫೌಂಡೇಶನ್ ಪ್ರವರ್ತಕ ಆನಂದ್ ಸಿ ಕುಂದರ್ ಉದ್ಘಾಟಿಸಿದರು.

ಇದೇ ವೇಳೆ ಕುಂದಾಪ್ರ ರೇಡಿಯೋ ನಿರ್ವಾಹಕಿ ಜ್ಯೋತಿ ಸಾಲಿಗ್ರಾಮ ಇವರಿಗೆ ಆಸಾಡಿ ಒಡ್ರ್ ಸಾಧಕ ಪುರಸ್ಕಾರವನ್ನು ಶ್ರೀ ಕೃಷ್ಣ ಪ್ರಸಾದ್ ಫೌಂಡೇಶನ್ ನಿರ್ದೇಶಕರಾದ ಸೋನಾಲಿ ಸಂಪತ್ ಕುಮಾರ್ ಶೆಟ್ಟಿ ಪ್ರದಾನ ಮಾಡಿದರು. ಐದನೇ ವರ್ಷದ ಅಂಗವಾಗಿ ವಿಶೇಷವಾಗಿ ಗ್ರಾಮ್ಯ ಸಾಧಕರಾದ ಗೀತಾ ಎ ಕುಂದರ್, ಶಾಂತಾ ಐತಾಳ್, ಸುಬ್ಬಯ್ಯ ಪೂಜಾರಿ, ಕೊಲ್ಲು ಪೂಜಾರಿ ಬನ್ನಾಡಿ, ನಾರಾಯಣ ಪೂಜಾರಿ ಇವರುಗಳನ್ನು ಸನ್ಮಾನಿಸಲಾಯಿತು. ಆಸಾಡಿ ಒಡ್ರ್ ಕ್ರೀಡಾಕೂಟದಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ನೀಡಲಾಯಿತು. ಅನಾರೋಗ್ಯ ಪೀಡಿತ ವ್ಯಕ್ತಿಗೆ ರೂ. 25 ಸಾವಿರ ನೆರವನ್ನು ನೀಡಲಾಯಿತು.

ಸಭಾಧ್ಯಕ್ಷತೆಯನ್ನು ಪಂಚವರ್ಣ ಮಹಿಳಾ ಮಂಡಲದ ಅಧ್ಯಕ್ಷೆ ಲಲಿತಾ ಪೂಜಾರಿ ವಹಿಸಿದ್ದರು. ಸಮಾಜ ಸೇವಕಿ ಮಲ್ಲಿಕಾ ತಾರಾನಾಥ್ ಹೊಳ್ಳ ಪರಿಕರವನ್ನು, ತಿಂಡಿ ತಿನಿಸುಗಳನ್ನು ಪಂಚವರ್ಣದ ಸ್ಥಾಪಕಾಧ್ಯಕ್ಷ ಶೇವಧಿ ಸುರೇಶ್ ಗಾಣಿಗ ಅನಾವರಣಗೊಳಿಸಿದರು.
ಸಾಂಸ್ಕೃತಿಕ ಕಾರ್ಯಕ್ರಮವನ್ನು ಸಂಸ್ಥೆಯ ಗೌರವ ಸಲಹೆಗಾರರಾದ ಪ್ರೇಮಾ ಶೆಟ್ಟಿ ಉದ್ಘಾಟಿಸಿದರು.

ಮುಖ್ಯ ಅಭ್ಯಾಗತರಾಗಿ ಮಣೂರು ಮಹಾಲಿಂಗೇಶ್ವರ ದೇವಸ್ಥಾನ ಅಧ್ಯಕ್ಷ ಸತೀಶ್ ಹೆಚ್ ಕುಂದರ್, ಸ್ನೇಹಕೂಟ ಮಣೂರು ಅಧ್ಯಕ್ಷೆ ಭಾರತಿ ವಿ ಮಯ್ಯ, ಪಂಚವರ್ಣ ಯುವಕ ಮಂಡಲದ ಅಧ್ಯಕ್ಷ ಮನೋಹರ್ ಪೂಜಾರಿ ಉಪಸ್ಥಿತರಿದ್ದರು. ವೀಣಾ ಪ್ರಕಾಶ್ ಪ್ರಾಸ್ತಾವಿಕವಾಗಿ ಮಾತನಾಡಿದರು. ಕಾರ್ಯದರ್ಶಿ ವಸಂತಿ ಹಂದಟ್ಟು ಸ್ವಾಗತಿಸಿದರು. ಸನ್ಮಾನ ಪತ್ರವನ್ನು ಸುಜಾತ ಬಾಯರಿ ವಾಚಿಸಿದರು. ಬಹುಮಾನ ಪಟ್ಟಿಯನ್ನು ಗೀತಾ ಶಿವರಾಂ ವಾಚಿಸಿದರು. ಕಾರ್ಯಕ್ರಮವನ್ನು ಶಿಕ್ಷಕ ನರೇಂದ್ರ ಕುಮಾರ್ ಕೋಟ ಹಾಗೂ ಕಲಾವತಿ ಅಶೋಕ್ ನಿರೂಪಿಸಿದರು. ಜತೆ ಕಾರ್ಯದರ್ಶಿ ಶಕೀಲ ನಾಗರಾಜ್ ವಂದಿಸಿದರು. ರವೀಂದ್ರ ಕೋಟ ಸಂಯೋಜಿಸಿದರು. ಸ್ನೇಹಕೂಟ ಮಣೂರು ಇವರಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರಗಿತು.

ಗಮನ ಸೆಳೆದ ಗ್ರಾಮ್ಯ ಪರಿಕರ, ತಿಂಡಿ ತಿನಿಸುಗಳು: ಕಾರ್ಯಕ್ರಮದಲ್ಲಿ ಗ್ರಾಮೀಣ ಬಗೆ ಬಗೆಯ ಪರಿಕರಗಳು, ತಿಂಡಿ ತಿನಿಸುಗಳು ವಿಶೇಷವಾಗಿ ಗಮನ ಸೆಳೆದವು. ಮಣೂರು ಜಯರಾಮ ಶೆಟ್ಟಿ ಗಮನ ಸೆಳೆದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!