Thursday, September 24, 2026
Thursday, September 24, 2026

ವಾರಾಹಿ ಯೋಜನೆ ಬಗ್ಗೆ ಕೇಂದ್ರ ಅರಣ್ಯ ಇಲಾಖೆಗೆ ಸಂಸದ ಕೋಟ ಭೇಟಿ

ವಾರಾಹಿ ಯೋಜನೆ ಬಗ್ಗೆ ಕೇಂದ್ರ ಅರಣ್ಯ ಇಲಾಖೆಗೆ ಸಂಸದ ಕೋಟ ಭೇಟಿ

Date:

ಉಡುಪಿ, ಆ.10: ನೆನೆಗುದಿಗೆ ಬಿದ್ದಿರುವ ಉಡುಪಿ ಜಿಲ್ಲೆಯ ವಾರಾಹಿ ಯೋಜನೆಗೆ 17.49 ಹೆಕ್ಟರ್ ಅರಣ್ಯ ಭೂಮಿ ಬಳಸಿಕೊಳ್ಳಲು ಅನುಮತಿ ನೀಡುವಂತೆ ಕೋರಿಕೆ ಸಲ್ಲಿಸಲು ಕೇಂದ್ರ ಅರಣ್ಯ ಸಚಿವಾಲಯಕ್ಕೆ ಸಂಸದ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿ ಇಲಾಖೆಯ ಅರಣ್ಯ ಮಹಾನಿರೀಕ್ಷಕ ರಘುಪ್ರಸಾದ್ ರವರನ್ನು ಭೇಟಿ ಮಾಡಿ ಈ ಯೋಜನೆಯ ಬಹುತೇಕ ಕಾಮಗಾರಿಗಳು ಮುಗಿದಿದ್ದು, ಮೀಸಲು ಅರಣ್ಯ ಪ್ರದೇಶದ 12.95 ಕಿ.ಮೀ ಉದ್ದದ ಕಾಲುವೆ ನಿರ್ಮಾಣದ ಕೆಲಸ ಮಾತ್ರ ಬಾಕಿ ಉಳಿದಿದ್ದು ಈ ಕಾಮಗಾರಿಗೆ 17.49 ಹೆಕ್ಟರ್ ಅರಣ್ಯ ಭೂಮಿಯ ಅವಶ್ಯಕತೆ ಇದೆ. ಈ ಯೋಜನೆ ಪೂರ್ಣಗೊಂಡರೆ ಉಡುಪಿ ಚಿಕ್ಕಮಗಳೂರು ಲೋಕಸಭಾ ಕ್ಷೇತ್ರದ ಕುಂದಾಪುರ ಮತ್ತು ಬ್ರಹ್ಮಾವರ ತಾಲೂಕಿನ 2723 ಹೆಕ್ಟೇರ್ ಪ್ರದೇಶಕ್ಕೆ ನೀರಾವರಿ ಸೌಲಭ್ಯ ದೊರಕಲಿದೆ. ಅಲ್ಲದೆ, ಜಿಲ್ಲೆಯ ಜನರಿಗೆ ಕುಡಿಯುವ ನೀರು ಪೂರೈಕೆಯಾಗಲಿದೆ ಎಂದು ಸಂಸದ ಕೋಟ ವಿವರಿಸಿದರು.

ಕೇಂದ್ರ ಅರಣ್ಯ ಇಲಾಖೆಯ ಮಹಾನಿರೀಕ್ಷಕ ರಘುಪ್ರಸಾದ್ ಪ್ರತಿಕ್ರಿಯಿಸಿ ಕಳೆದ 4 ವರ್ಷಗಳಿಂದ ಈ ಕಡತ ವಿಲೇಯಲ್ಲಿದ್ದು ತಕ್ಷಣ ರಾಜ್ಯ ಸರ್ಕಾರದಿಂದ ವರದಿ ತರಿಸಿಕೊಂಡು ಅನುಮೋದನೆ ನೀಡುವ ಬಗ್ಗೆ ಕ್ರಮ ಕೈಗೊಳ್ಳುವುದಾಗಿ ತಿಳಿಸಿದ್ದಾರೆ ಎಂದು ಸಂಸದ ಕೋಟ ಶ್ರೀನಿವಾಸ ಪೂಜಾರಿ ಮಾಹಿತಿ ನೀಡಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!