Thursday, September 24, 2026
Thursday, September 24, 2026

ವಿದ್ಯಾರ್ಜನೆ ಸಂದರ್ಭದಲ್ಲಿ ಸಾಮರಸ್ಯ ಮುಖ್ಯ: ಗೋಪಾಲಕೃಷ್ಣ ಜಿ. ಬಿ

ವಿದ್ಯಾರ್ಜನೆ ಸಂದರ್ಭದಲ್ಲಿ ಸಾಮರಸ್ಯ ಮುಖ್ಯ: ಗೋಪಾಲಕೃಷ್ಣ ಜಿ. ಬಿ

Date:

ಕುಂದಾಪುರ, ಆ.11: ಶೈಕ್ಷಣಿಕ ವಾತಾವರಣದಲ್ಲಿ ವಿದ್ಯಾರ್ಜನೆ ಮಾಡುವ ಸಂದರ್ಭದಲ್ಲಿ ಸಾಮರಸ್ಯ ಬಹಳ ಮುಖ್ಯ. ಪ್ರಥಮ ವರ್ಷದ ಪದವಿಗೆ ಸೇರಿದ ನಿಮಗೆ ಭವಿಷ್ಯದಲ್ಲಿ ಜೀವನಕ್ಕೆ ಅಗತ್ಯವಾದ ಮೌಲ್ಯಗಳನ್ನು ಅಳವಡಿಸಿಕೊಳ್ಳಿ. ಬದುಕಿನ ಕೊನೆಯವರೆಗೆ ಬರುವ ಶಿಕ್ಷಣವನ್ನು ಕಲಿತು ಬದುಕಿರಿ ಎಂದು ಕೊಲ್ಲೂರಿನ ಶ್ರೀ ಮೂಕಾಂಬಿಕಾ ದೇವಳ ಪದವಿಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಗೋಪಾಲಕೃಷ್ಣ ಜಿ. ಬಿ. ಹೇಳಿದರು.

ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯು ಪ್ರಥಮ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ ‘ಫ್ರೆಶರ್ಸ್ ಡೇ’ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿಯ ಕಾರ್ಯದರ್ಶಿ ವಿಕಾಸ್ ಶೆಟ್ಟಿ ಸ್ವಾಗತಿಸಿ, ಎಸ್ಕ್ಯೂಎಸಿ ಪ್ರತಿನಿಧಿ ಖುಷಿ ಶೆಟ್ಟಿ ವಂದಿಸಿ, ಸಾಂಸ್ಕೃತಿಕ ಕಾರ್ಯದರ್ಶಿ ಅಭಿಷೇಕ್ ಪ್ರಾರ್ಥಿಸಿ, ಸಿಂಚನ ನಿರೂಪಿಸಿದರು. ಸಾಂಸ್ಕೃತಿಕ ಕಾರ್ಯಕ್ರಮನ್ನು ಶರಣ್ಯ ಶೆಟ್ಟಿ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!