Thursday, September 3, 2026
Thursday, September 3, 2026

ಬಂಟರ ಸಂಘ ಹಾವಂಜೆ: ನೂತನ ಪದಾಧಿಕಾರಿಗಳ ಪದಗ್ರಹಣ; ‘ಆಟಿಡೊಂಜಿ ದಿನ’

ಬಂಟರ ಸಂಘ ಹಾವಂಜೆ: ನೂತನ ಪದಾಧಿಕಾರಿಗಳ ಪದಗ್ರಹಣ; ‘ಆಟಿಡೊಂಜಿ ದಿನ’

Date:

ಹಾವಂಜೆ, ಆ.12: ಬಂಟರ ಸಂಘ (ರಿ.), ಹಾವಂಜೆ ಇದರ ನೂತನ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಮತ್ತು ‘ಆಟಿಡೊಂಜಿ ದಿನ’ ಕಾರ್ಯಕ್ರಮ ಹಾವಂಜೆಯಲ್ಲಿ ಸಂಘದ ಅಧ್ಯಕ್ಷ ಎಚ್. ಸೀತಾರಾಮ ಶೆಟ್ಟಿ ಉಜಂಗಾರು ಅವರ ಅಧ್ಯಕ್ಷತೆಯಲ್ಲಿ ನಡೆಯಿತು.

ಸಂಘದ ನೂತನ ಅಧ್ಯಕ್ಷರಾಗಿ ಪ್ರಶಾಂತ್ ಶೆಟ್ಟಿ ಕೊಳಲಗಿರಿ ಅವರು ಅಧಿಕಾರ ಸ್ವೀಕರಿಸಿದರು. ವಿವಿಧ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಪದಗ್ರಹಣ ಮಾಡಿದರು.

ಸದಾಶಿವ ಹೆಗ್ಡೆ ಅವರು ಕಾರ್ಯಕ್ರಮವನ್ನು ಉದ್ಘಾಟಿಸಿದರು. ಪ್ರಭಾಕರ ಶೆಟ್ಟಿ ಕೊಂಡಳ್ಳಿ ಅವರು ದಿಕ್ಸೂಚಿ ಭಾಷಣ ಮಾಡಿದರು. ಸುಗ್ಗಿ ಸುಧಾಕರ ಶೆಟ್ಟಿ ಮಾತನಾಡಿ, ಬಂಟ ಸಮಾಜದಲ್ಲಿ ಒಗ್ಗಟ್ಟು ಮೂಡಿಸುವಲ್ಲಿ ಇಂತಹ ಕಾರ್ಯಕ್ರಮಗಳು ಪೂರಕವಾಗಿವೆ. ಸಂಘವು ಸ್ವಂತ ನಿವೇಶನ ಹಾಗೂ ಕಟ್ಟಡ ಹೊಂದುವ ನಿಟ್ಟಿನಲ್ಲಿ ವೈಯಕ್ತಿಕವಾಗಿ ರೂ. 5 ಲಕ್ಷ ಧನಸಹಾಯ ನೀಡುವುದಾಗಿ ಘೋಷಿಸಿದರು. ಜಯಕರ ಶೆಟ್ಟಿ ಇಂದ್ರಾಳಿ ಅವರು ಶುಭ ಹಾರೈಸಿದರು.

ಸಮ್ಮಾನ, ಪ್ರತಿಭಾ ಪುರಸ್ಕಾರ: ಕಾರ್ಯಕ್ರಮದಲ್ಲಿ ಡಾ. ಶಶಿಕಿರಣ್ ಶೆಟ್ಟಿ, ಡಾ. ಸಂದೇಶ್ ಶೆಟ್ಟಿ, ಡಾ. ದಿಷಿತ ಶೆಟ್ಟಿ, ಸಿ.ಎ. ಆಕಾಶ್ ಶೆಟ್ಟಿ, ಸಿ.ಎ. ಪೂರ್ವಿ ಶೆಟ್ಟಿ, ಸಿ.ಎ. ಶ್ರಾವ್ಯ ಶೆಟ್ಟಿ, ಸುರೇಶ್ ಶೆಟ್ಟಿ ಬಾಣಬೆಟ್ಟು, ಲಾಸ್ಯ ಹಾಗೂ ತ್ರಿಷಾ ಅವರನ್ನು ಸನ್ಮಾನಿಸಲಾಯಿತು. ಸಂಘದ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ನೀಡಿ ಗೌರವಿಸಲಾಯಿತು. ದಿನಕರ ಶೆಟ್ಟಿ ಹೆರ್ಗ, ಅಶೋಕ್ ಕುಮಾರ್ ಶೆಟ್ಟಿ ಮೈರ್ಮಾಡಿ, ಉದಯ ಶೆಟ್ಟಿ ಮುನಿಯಾಲು ಹಾಗೂ ನಾರಾಯಣ ಶೆಟ್ಟಿ ಕಂಬಳಿಬೆಟ್ಟು ಉಪಸ್ಥಿತರಿದ್ದರು.

ತುಳುನಾಡಿನ ಸಂಸ್ಕೃತಿ ಪರಿಚಯಿಸಿದ ‘ಆಟಿಡೊಂಜಿ ದಿನ’: ಕಾರ್ಯಕ್ರಮದ ಅಂಗವಾಗಿ ‘ಆಟಿಡೊಂಜಿ ದಿನ’ವನ್ನು ವಿಶೇಷವಾಗಿ ಆಚರಿಸಲಾಯಿತು. ತುಳುನಾಡಿನ ಸಾಂಪ್ರದಾಯಿಕ ಆಟಿ ತಿಂಗಳ ಸಂಸ್ಕೃತಿ, ಆಹಾರ ಪದ್ಧತಿ ಹಾಗೂ ಜೀವನಶೈಲಿಯನ್ನು ಪರಿಚಯಿಸುವ ಉದ್ದೇಶದಿಂದ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಆಟಿ ತಿಂಗಳ ವಿಶೇಷತೆ, ಹಿಂದಿನ ಕಾಲದ ಆಚರಣೆಗಳು ಹಾಗೂ ಸಂಪ್ರದಾಯಗಳ ಕುರಿತು ಮಾಹಿತಿ ನೀಡಲಾಯಿತು.

ಆಟಿ ತಿಂಗಳಿಗೆ ಸಂಬಂಧಿಸಿದ ವಿವಿಧ ಸಾಂಪ್ರದಾಯಿಕ ಆಹಾರ ಪದಾರ್ಥಗಳನ್ನು ಸಂಘದ ಮಹಿಳಾ ಸದಸ್ಯರು ತಯಾರಿಸಿ ಪ್ರದರ್ಶಿಸುವ ಮೂಲಕ ಯುವ ಪೀಳಿಗೆಗೆ ತುಳುನಾಡಿನ ಸಂಸ್ಕೃತಿ, ಪರಂಪರೆ ಹಾಗೂ ಆಹಾರ ವೈವಿಧ್ಯತೆಯನ್ನು ಪರಿಚಯಿಸುವ ಪ್ರಯತ್ನ ನಡೆಯಿತು. ಬಂಟರ ಸಂಘದ ಹಿರಿಯರು, ಪದಾಧಿಕಾರಿಗಳು, ಸದಸ್ಯರು, ಮಹಿಳಾ ವಿಭಾಗದ ಸದಸ್ಯರು, ಯುವ ವಿಭಾಗದ ಸದಸ್ಯರು ಹಾಗೂ ಸಮಾಜದ ವಿವಿಧ ಕ್ಷೇತ್ರಗಳ ಗಣ್ಯರು ಭಾಗವಹಿಸಿದ್ದರು.

ಸಂಘದ ಕಾರ್ಯದರ್ಶಿ ವಿಶಾಕ್ ಶೆಟ್ಟಿ ಸ್ವಾಗತಿಸಿದರು. ಭಾಸ್ಕರ ಶೆಟ್ಟಿ ಮುಗ್ಗೇರಿ ಪ್ರಾಸ್ತಾವಿಕ ಮಾತುಗಳನ್ನಾಡಿದರು. ಪ್ರಶಾಂತ್ ಶೆಟ್ಟಿ, ಸೂರಜ್ ಶೆಟ್ಟಿ ಹಾಗೂ ರಿಷಾಲಿ ಹೆಗ್ಡೆ ಕಾರ್ಯಕ್ರಮ ನಿರೂಪಿಸಿದರು. ನಿಯೋಜಿತ ಕಾರ್ಯದರ್ಶಿ ವಿಕಾಸ್ ಶೆಟ್ಟಿ ವಂದಿಸಿದರು. ಸಂಘದ ಪದಾಧಿಕಾರಿಗಳು ಹಾಗೂ ಕಾರ್ಯಕಾರಿ ಸಮಿತಿ ಸದಸ್ಯರು ಕಾರ್ಯಕ್ರಮದ ಯಶಸ್ಸಿಗೆ ಸಹಕರಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಬನ್ನಂಜೆಯಲ್ಲಿ ಪಾಳುಬಿದ್ದಿರುವ ಗಾಂಧಿ ಭವನ; ಅನೈತಿಕ ಚಟುವಟಿಕೆಗಳ ಅಡ್ಡೆ; ರಕ್ಷಣೆಗೆ ಆಗ್ರಹ

ಉಡುಪಿ, ಸೆ.2: ಬನ್ನಂಜೆಯ ಡಾ. ಜಿ. ಶಂಕರ್ ರಸ್ತೆಯಲ್ಲಿ ಬರುವ, ಜಿಲ್ಲಾ...

ಸರ್ಕಾರಿ ಪದವಿಪೂರ್ವ ಕಾಲೇಜು ಕುಂದಾಪುರದ ವಿದ್ಯಾರ್ಥಿಗಳು ಜಿಲ್ಲಾಮಟ್ಟಕ್ಕೆ ಆಯ್ಕೆ

ಉಡುಪಿ, ಸೆ.2: ಹಾಲಾಡಿ ಪದವಿಪೂರ್ವ ಕಾಲೇಜಿನಲ್ಲಿ ನಡೆದ ತಾಲೂಕು ಮಟ್ಟದ ಖೋ...

ಸೆ. 6: ಕೇರಳ ಸಮಾಜಂ (ರಿ) ವತಿಯಿಂದ ದ್ವಿತೀಯ ವರ್ಷದ  ಅದ್ದೂರಿ ಓಣಂ ಸಂಭ್ರಮಾಚರಣೆ

ಉಡುಪಿ, ಸೆ.2: ಕೇರಳ‌ ಸಮಾಜಂ ಉಡುಪಿ (ರಿ) ವತಿಯಿಂದ ದ್ವಿತೀಯ ವರ್ಷದ...

ಪ್ರಧಾನಮಂತ್ರಿ ಆವಾಸ್ ಯೋಜನೆ: ಅರ್ಜಿ ಸಲ್ಲಿಕೆ ಅವಧಿ ವಿಸ್ತರಣೆ

ಉಡುಪಿ, ಸೆ.1: ಪ್ರಧಾನಮಂತ್ರಿ ಆವಾಸ್ ಯೋಜನೆ(ಗ್ರಾಮೀಣ) ಅಡಿಯ ಸಮೀಕ್ಷೆ-2018 ರ ಶಾಶ್ವತ...
error: Content is protected !!