Friday, September 25, 2026
Friday, September 25, 2026

ರೂ. 2.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನದಿ ಸ್ನಾನ ಘಟ್ಟ ಲೋಕಾರ್ಪಣೆ; ಸ್ವರ್ಣೆಗೆ ಬಾಗಿನ ಸಮರ್ಪಣೆ

ರೂ. 2.25 ಕೋಟಿ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನದಿ ಸ್ನಾನ ಘಟ್ಟ ಲೋಕಾರ್ಪಣೆ; ಸ್ವರ್ಣೆಗೆ ಬಾಗಿನ ಸಮರ್ಪಣೆ

Date:

ಉಡುಪಿ, ಆ.12: ಮೂಡುಪೆರಂಪಳ್ಳಿ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನೂತನ ನದಿ ಸ್ನಾನ ಘಟ್ಟ ಲೋಕಾರ್ಪಣೆಯನ್ನು ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಹಾಗೂ ದೇವಸ್ಥಾನದ ಪ್ರಮುಖರು ಉಡುಪಿಯ ಜೀವನಾಡಿಯಾಗಿರುವ ಸ್ವರ್ಣ ನದಿಗೆ ಬಾಗಿನ ಸಮರ್ಪಣೆ ಮಾಡುವ ಮೂಲಕ ಲೋಕಾರ್ಪಣೆಗೊಳಿಸಲಾಯಿತು.

ಈ ಸಂದರ್ಭದಲ್ಲಿ ಮಾತನಾಡಿದ ಶಾಸಕ ಯಶ್ಪಾಲ್ ಸುವರ್ಣ, ಇತಿಹಾಸ ಪ್ರಸಿದ್ಧ ಶೀಂಬ್ರ ಸಿದ್ಧಿ ವಿನಾಯಕ ದೇವಸ್ಥಾನದ ನದಿ ಸ್ನಾನ ಘಟ್ಟ ಹಲವು ವರ್ಷಗಳಿಂದ ತೀವ್ರ ನದಿ ಕೊರೆತದಿಂದ ಹಾನಿಗೀಡಾಗಿ, ಪ್ರತಿವರ್ಷ ಕೃಷ್ಣಂಗಾರಕ ಚತುರ್ದಶಿಯಂದು ವಿವಿಧ ರಾಜ್ಯಗಳಿಂದ ತೀರ್ಥಸ್ನಾನಕ್ಕೆ ಆಗಮಿಸುವ ಸಾವಿರಾರು ಭಕ್ತರಿಗೆ ಸಮಸ್ಯೆಗಳ ಬಗ್ಗೆ ದೇವಸ್ಥಾನದ ಆಡಳಿತ ಮಂಡಳಿಯ ಮನವಿಯಂತೆ ಸಣ್ಣ ನೀರಾವರಿ ಇಲಾಖೆಯ ಮೂಲಕ 2.25 ಕೋಟಿ ಅನುದಾನ ಒದಗಿಸಿ ಇಂದು ಕೃಷ್ಣಂಗಾರಕ ಚತುರ್ದಶಿಯಂದೇ ಉಡುಪಿಯ ಜೀವನಾಡಿಯಾಗಿ ಕುಡಿಯುವ ನೀರು, ಕೃಷಿ ಚಟುವಟಿಕೆಗೆ ಮೂಲ ಆಸರೆಯಾಗಿರುವ ಸ್ವರ್ಣ ನದಿಗೆ ದೇವಸ್ಥಾನದ ವತಿಯಿಂದ ಬಾಗಿನ ಸಮರ್ಪಣೆ ಮಾಡುವ ಮೂಲಕ ನೂತನ ಸ್ನಾನ ಘಟ್ಟದ ಲೋಕಾರ್ಪಣೆಗೊಳಿಸಲಾಗಿದ್ದು ಮುಂದಿನ ದಿನಗಳಲ್ಲಿಯೂ ದೇವಸ್ಥಾನದ ಮೂಲಸೌಕರ್ಯ ಅಭಿವೃದ್ಧಿಗೆ ವಿಶೇಷ ಸಹಕಾರ ನೀಡುವುದಾಗಿ ಹೇಳಿದರು.

ಉಡುಪಿ ನಗರ ಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಗಣ್ಯರಾದ ಅಜಿತ್ ಪೈ, ರಮೇಶ್ ರಾವ್, ಬಾಲಾಜಿ ರಾಘವೇಂದ್ರ ಆಚಾರ್ಯ, ಯುವ ಬ್ರಾಹ್ಮಣ ಪರಿಷತ್ತಿನ ಚಂದ್ರಕಾಂತ ಕೆ.ಎನ್., ನಾಗರಾಜ ತಂತ್ರಿ, ಹರಿಕೃಷ್ಣ ಶಿವತ್ತಾಯ, ಪ್ರಶಾಂತ ಭಟ್ ಪೆರಂಪಳ್ಳಿ, ಅನಿಟ ಬೆಲಿಂಡಾ ಡಿಸೋಜಾ, ಮಂಜುನಾಥ ಮಣಿಪಾಲ, ಸುಮಾ, ವಿಜಯ ಪೂಜಾರಿ, ಗಣಪತಿ ಭಟ್, ವಾದಿರಾಜ ಆಚಾರ್ಯ, ಬಿಜೆಪಿ ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಶಶಾಂಕ್ ಶಿವತ್ತಾಯ, ಗೋಪಾಲಾಚಾರ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕೃತಕ ಬುದ್ಧಿಮತ್ತೆ (ಎಐ), ಬಾಹ್ಯಾಕಾಶ, ಇಂಧನ ಮತ್ತು ಸಂಸ್ಕೃತಿ ಕುರಿತು ಮಹತ್ವದ ಚರ್ಚೆ ನಡೆಸಿದ ಭಾರತ, ಯುಎಇ ಮತ್ತು ಫ್ರಾನ್ಸ್‌

ಯು.ಬಿ.ಎನ್.ಡಿ., ಸೆ.24: ನ್ಯೂಯಾರ್ಕ್‌ನಲ್ಲಿ ನಡೆದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ 81ನೇ ಅಧಿವೇಶನದ...

ಕುಂದಾಪ್ರ ಕನ್ನಡ: ಭಾಷಾ ವಿಶೇಷತೆ- ವಿಶೇಷ ಉಪನ್ಯಾಸ

ಕುಂದಾಪುರ, ಸೆ.24: ಡಾ. ಬಿ. ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ...

ಉಡುಪಿಯ ಹಲವೆಡೆ ದಿನವಿಡೀ ಉತ್ತಮ ಮಳೆ

ಉಡುಪಿ, ಸೆ.24: ಉಡುಪಿಯ ಹಲವೆಡೆ ಗುರುವಾರ ಉತ್ತಮ ಮಳೆಯಾಗಿದೆ. ಕಾರ್ಕಳ, ಮಣಿಪಾಲ,...
error: Content is protected !!