Friday, August 14, 2026
Friday, August 14, 2026

ಚೇಂಪಿ: ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

ಚೇಂಪಿ: ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ

Date:

ಕೋಟ, ಆ.13: ಕೋಟ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದ ಸಾಲಿಗ್ರಾಮ ಇವರ ಆಶ್ರಯದಲ್ಲಿ ವಿಶ್ವಜ್ಯೋತಿ ಮಹಿಳಾ ಬಳಗ ಸಾಲಿಗ್ರಾಮ ಇವರ ವತಿಯಿಂದ ಆಷಾಢದಲ್ಲಿ ಒಂದು ದಿನ ಕಾರ್ಯಕ್ರಮ ಸಾಲಿಗ್ರಾಮದ ವಿಶ್ವಕರ್ಮ ಸಾಂಸ್ಕೃತಿಕ ಸಭಾಭವನದಲ್ಲಿ ನಡೆಯಿತು. ಮಹಿಳಾ ಬಳಗದ ಸದಸ್ಯರು ವಿವಿಧ ಬಗೆಯ ಆಷಾಢದ ತಿನಿಸುಗಳನ್ನು ವೇದಿಕೆಯಲ್ಲಿ ಪ್ರದರ್ಶನದ ಮೂಲಕ ಆಷಾಢ ಮಾಸದ ವಿಶೇಷವನ್ನು ತಿಳಿಸಿದರು. ಸಭಾ ಕಾರ್ಯಕ್ರಮದಲ್ಲಿ ವಿಶ್ವಜ್ಯೋತಿ ಮಹಿಳಾ ಬಳಗದ ಅಧ್ಯಕ್ಷೆ ರಮ್ಯ ರಮೇಶ್ ಆಚಾರ್ ಅಧ್ಯಕ್ಷತೆ ವಹಿಸಿದ್ದರು.

ವೇದಿಕೆಯಲ್ಲಿ ಶ್ರೀ ವಿರಾಡ್ವಿಶ್ವ ಬ್ರಾಹ್ಮಣ ಸಮಾಜೋದ್ಧಾರಕ ಸಂಘದ ಅಧ್ಯಕ್ಷ ಸುಬ್ರಾಯ ಆಚಾರ್ಯ ಮಣೂರು, ಗೌರವಾಧ್ಯಕ್ಷ ಜನಾರ್ಧನ ಆಚಾರ್ಯ ಚೇಂಪಿ, ಜಯರಾಮ್ ಆಚಾರ್ಯ ಸಾಲಿಗ್ರಾಮ, ವಿಶ್ವಕರ್ಮ ಕಲಾವೃಂದದ ಅಧ್ಯಕ್ಷ ವೆಂಕಟೇಶ್ ಆಚಾರ್ಯ ಸಾಲಿಗ್ರಾಮ, ವಿಶ್ವಜ್ಯೋತಿ ಮಹಿಳಾ ಬಳಗದ ಗೌರವಾಧ್ಯಕ್ಷೆ ಸವಿತಾ ಚಂದ್ರಶೇಖರ್ ಆಚಾರ್ ಉಪಸ್ಥಿತರಿದ್ದರು. ಚಂದ್ರಶೇಖರ್ ಆಚಾರ್ಯ ಕೋಟ ಪ್ರಾಸ್ತಾವಿಕ ಮಾತುಗಳನ್ನಾಡಿದರು. ವಿಶ್ವಜ್ಯೋತಿ ಮಹಿಳಾ ಬಳಗದ ಕೋಶಾಧಿಕಾರಿ ಸುಶೀಲ ಸತೀಶ್ ಆಚಾರ್ಯ ಕಾರ್ಯಕ್ರಮ ನಿರೂಪಿಸಿ, ಸರಿತಾ ಚಂದ್ರ ಆಚಾರ್ಯ ಕಾರ್ಕಡ ಸ್ವಾಗತಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಯ್ದಿರಿಸಿದ ಟಿಕೆಟ್‌ಗಳಲ್ಲಿ ಶೇ. 89 ರಷ್ಟು ಆನ್‌ಲೈನ್‌ನಲ್ಲಿ ಬುಕ್ ಆಗಿವೆ: ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ, ಆ.14: 2013-14ರಲ್ಲಿ ಶೇ. 49 ರಷ್ಟು ಟಿಕೆಟ್‌ಗಳು ಆನ್‌ಲೈನ್‌ನಲ್ಲಿ ಬುಕ್...

ಸೆಪ್ಟೆಂಬರ್‌ನಲ್ಲಿ ಭಾರತ ಅಫ್ಘಾನಿಸ್ತಾನ ಟಿ20 ಸರಣಿ

ನವದೆಹಲಿ, ಆ.14: ಮುಂದಿನ ತಿಂಗಳು 13 ರಿಂದ 17 ರವರೆಗೆ ದೆಹಲಿಯ...

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ, ಆ.13: ಬಿ.ಪಿ.ಎಲ್. ಪಡಿತರ ಚೀಟಿ ಪಡೆಯಲು ಪ್ರಸ್ತುತ ಜಾರಿಯಲ್ಲಿರುವ ಕುಟುಂಬದ...

ನಾಯಕತ್ವದ ಬೆಳವಣಿಗೆಗೆ ಭಾಗವಹಿಸುವಿಕೆ ಮುಖ್ಯ: ಡಾ. ದೇವಿದಾಸ್ ನಾಯಕ್

ಉಡುಪಿ, ಆ.13: ನಾಯಕತ್ವವು ಶೂನ್ಯದಿಂದ ಸೃಷ್ಟಿಯಾಗುವುದಿಲ್ಲ. ವಿವಿಧ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಭಾಗವಹಿಸುವುದರಿಂದ...
error: Content is protected !!