Friday, August 14, 2026
Friday, August 14, 2026

ದೇಶಭಕ್ತಿ ಮೂಡಿಸಿದ ಫ್ಯಾಷನ್ ಪೆರೇಡ್

ದೇಶಭಕ್ತಿ ಮೂಡಿಸಿದ ಫ್ಯಾಷನ್ ಪೆರೇಡ್

Date:

ಕುಂದಾಪುರ, ಆ.13: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಾಣಿಜ್ಯ ವಿಭಾಗದ ಆಶ್ರಯದಲ್ಲಿ ವಸ್ತ್ರಭಾರತಿ 2026 – ಅಂತರ್ ತರಗತಿ ದೇಶಭಕ್ತಿ ಫ್ಯಾಷನ್ ಪೆರೇಡ್ ಕಾರ್ಯಕ್ರಮ ಕಾಲೇಜಿನ ಮೂಕಾಂಬಿಕಾ ಸಭಾಂಗಣದಲ್ಲಿ ನಡೆಯಿತು. ವಿದ್ಯಾರ್ಥಿಗಳಲ್ಲಿ ದೇಶಭಕ್ತಿ, ಸೃಜನಶೀಲತೆ, ಆತ್ಮವಿಶ್ವಾಸ, ತಂಡ ಭಾವನೆ ಹಾಗೂ ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯ ಅರಿವು ಮೂಡಿಸುವ ಉದ್ದೇಶದಿಂದ ಆಯೋಜಿಸಲಾದ ಈ ಕಾರ್ಯಕ್ರಮದಲ್ಲಿ ಕಾಲೇಜಿನ ವಿವಿಧ ತರಗತಿಗಳ 23 ತಂಡಗಳು ಉತ್ಸಾಹದಿಂದ ಭಾಗವಹಿಸಿದವು. ವಿದ್ಯಾರ್ಥಿಗಳ ಉತ್ಸಾಹಭರಿತ ಪ್ರದರ್ಶನವು ಕಾರ್ಯಕ್ರಮದ ಪ್ರಮುಖ ಆಕರ್ಷಣೆಯಾಗಿದ್ದು, ಉಡುಪುಗಳ ಮೂಲಕ ಕೇವಲ ಫ್ಯಾಷನ್ ಪ್ರದರ್ಶನವನ್ನಷ್ಟೇ ಮಾಡದೆ, ಭಾರತದ ವೈವಿಧ್ಯತೆ, ಸಂಸ್ಕೃತಿ, ಪರಂಪರೆ ಮತ್ತು ದೇಶಭಕ್ತಿಯ ಸಂದೇಶವನ್ನು ಪರಿಣಾಮಕಾರಿಯಾಗಿ ಸಾರಿದರು. ಅಲ್ಲದೆ ವಿವಿಧ ರಾಜ್ಯಗಳ ಸಾಂಪ್ರದಾಯಿಕ ಉಡುಪುಗಳು, ಸ್ವಾತಂತ್ರ್ಯ ಹೋರಾಟಗಾರರ ಪ್ರತಿರೂಪಗಳು, ತ್ರಿವರ್ಣ ಧ್ವಜದ ಸ್ಫೂರ್ತಿಯ ವಿನ್ಯಾಸಗಳು ಹಾಗೂ ಪರಿಸರ ಸ್ನೇಹಿ ದೇಶಭಕ್ತಿ ಸಂದೇಶ ಸಾರುವ ಉಡುಪುಗಳ ಮೂಲಕ ತಮ್ಮ ಪ್ರತಿಭೆ ಮತ್ತು ಸೃಜನಶೀಲತೆಯನ್ನು ಅನಾವರಣಗೊಳಿಸಿದರು.

ಕಾಲೇಜಿನ ಪ್ರಾಂಶುಪಾಲರಾದ ಡಾ. ಕೆ. ಉಮೇಶ್ ಶೆಟ್ಟಿ, ಉಪ-ಪ್ರಾಂಶುಪಾಲರಾದ ಡಾ. ಚೇತನ್ ಶೆಟ್ಟಿ ಕೋವಾಡಿ, ವಾಣಿಜ್ಯ ವಿಭಾಗದ ಮುಖ್ಯಸ್ಥರಾದ ವೀಣಾ ವಿ. ಭಟ್, ಕಾರ್ಯಕ್ರಮದ ಸಂಯೋಜಕರಾದ ವಿನಯಾ ವಿ. ಶೆಟ್ಟಿ ಹಾಗೂ ವಿಭಾಗದ ಪ್ರಾಧ್ಯಾಪಕರು ಉಪಸ್ಥಿತರಿದ್ದರು. ತೀರ್ಪುಗಾರರಾಗಿ ಶ್ರೀ ವೆಂಕಟರಮಣ ಪದವಿಪೂರ್ವ ಕಾಲೇಜಿನ ಸಂಸ್ಕೃತ ಉಪನ್ಯಾಸಕಿ ಮಮತಾ ಎಸ್. ರೈ, ಆರ್. ಎನ್. ಶೆಟ್ಟಿ ಪದವಿಪೂರ್ವ ಕಾಲೇಜಿನ ಆಂಗ್ಲ ಭಾಷಾ ಉಪನ್ಯಾಸಕಿ ಸುಮತಿ ಶೆಣೈ ಹಾಗೂ ಕಾಲೇಜಿನ ಪ್ರಾಕ್ತನ ವಿದ್ಯಾರ್ಥಿ ಹಾಗೂ ನ್ಯೂಸ್ ನೆಕ್ಸ್ಟ್ ನಿರೂಪಕರಾದ ದರ್ಶನ್ ಶೆಟ್ಟಿ ನಾರ್ಕಳಿ ಭಾಗವಹಿಸಿದ್ದರು.

ಸ್ಪರ್ಧೆಯ ಅಂತಿಮ ಫಲಿತಾಂಶದಲ್ಲಿ ತೃತೀಯ ಬಿಸಿಎ ಬಿ ತಂಡ ಪ್ರಥಮ ಸ್ಥಾನ, ತೃತೀಯ ಬಿ.ಕಾಂ. ಡಿ ಹಾಗೂ ದ್ವಿತೀಯ ಬಿಬಿಎ ತಂಡಗಳು ದ್ವಿತೀಯ ಸ್ಥಾನವನ್ನು ಪಡೆದುಕೊಂಡರೆ, ದ್ವಿತೀಯ ಬಿ.ಕಾಂ. ಬಿ ತೃತೀಯ ಸ್ಥಾನವನ್ನು ಹಾಗೂ ಪ್ರಥಮ ಬಿಸಿಎ ಎ ವಿಭಾಗ ತಂಡ ತೀರ್ಪುಗಾರರ ವಿಶೇಷ ಮೆಚ್ಚುಗೆ ಬಹುಮಾನ ಪಡೆಯಿತು. ಕಾರ್ಯಕ್ರಮದ ಸಂಯೋಜಕರಾದ ದೀಪಾ ಪೂಜಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾಯ್ದಿರಿಸಿದ ಟಿಕೆಟ್‌ಗಳಲ್ಲಿ ಶೇ. 89 ರಷ್ಟು ಆನ್‌ಲೈನ್‌ನಲ್ಲಿ ಬುಕ್ ಆಗಿವೆ: ರೈಲ್ವೇ ಸಚಿವ ಅಶ್ವಿನಿ ವೈಷ್ಣವ್

ನವದೆಹಲಿ, ಆ.14: 2013-14ರಲ್ಲಿ ಶೇ. 49 ರಷ್ಟು ಟಿಕೆಟ್‌ಗಳು ಆನ್‌ಲೈನ್‌ನಲ್ಲಿ ಬುಕ್...

ಸೆಪ್ಟೆಂಬರ್‌ನಲ್ಲಿ ಭಾರತ ಅಫ್ಘಾನಿಸ್ತಾನ ಟಿ20 ಸರಣಿ

ನವದೆಹಲಿ, ಆ.14: ಮುಂದಿನ ತಿಂಗಳು 13 ರಿಂದ 17 ರವರೆಗೆ ದೆಹಲಿಯ...

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಉಡುಪಿ, ಆ.13: ಬಿ.ಪಿ.ಎಲ್. ಪಡಿತರ ಚೀಟಿ ಪಡೆಯಲು ಪ್ರಸ್ತುತ ಜಾರಿಯಲ್ಲಿರುವ ಕುಟುಂಬದ...

ನಾಯಕತ್ವದ ಬೆಳವಣಿಗೆಗೆ ಭಾಗವಹಿಸುವಿಕೆ ಮುಖ್ಯ: ಡಾ. ದೇವಿದಾಸ್ ನಾಯಕ್

ಉಡುಪಿ, ಆ.13: ನಾಯಕತ್ವವು ಶೂನ್ಯದಿಂದ ಸೃಷ್ಟಿಯಾಗುವುದಿಲ್ಲ. ವಿವಿಧ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಭಾಗವಹಿಸುವುದರಿಂದ...
error: Content is protected !!