Sunday, October 18, 2026
Sunday, October 18, 2026

ನಾಯಕತ್ವದ ಬೆಳವಣಿಗೆಗೆ ಭಾಗವಹಿಸುವಿಕೆ ಮುಖ್ಯ: ಡಾ. ದೇವಿದಾಸ್ ನಾಯಕ್

ನಾಯಕತ್ವದ ಬೆಳವಣಿಗೆಗೆ ಭಾಗವಹಿಸುವಿಕೆ ಮುಖ್ಯ: ಡಾ. ದೇವಿದಾಸ್ ನಾಯಕ್

Date:

ಉಡುಪಿ, ಆ.13: ನಾಯಕತ್ವವು ಶೂನ್ಯದಿಂದ ಸೃಷ್ಟಿಯಾಗುವುದಿಲ್ಲ. ವಿವಿಧ ಚಟುವಟಿಕೆಗಳಲ್ಲಿ ಕ್ರಿಯಾಶೀಲವಾಗಿ ಭಾಗವಹಿಸುವುದರಿಂದ ನಾಯಕತ್ವದ ಬೆಳವಣಿಗೆ ಸಾಧ್ಯವಾಗುತ್ತದೆ. ಈ ದೃಷ್ಟಿಯಿಂದ ವಿದ್ಯಾರ್ಥಿ ಸಮೂಹಕ್ಕೆ ಮಾರ್ಗದರ್ಶನದ ಅಗತ್ಯವಿದೆ ಎಂದು ಮಹಾತ್ಮಾಗಾಂಧಿ ಸ್ಮಾರಕ ಸಂಧ್ಯಾ ಕಾಲೇಜಿನ ಪ್ರಾಂಶುಪಾಲ ಡಾ. ದೇವಿದಾಸ ನಾಯಕ್ ಹೇಳಿದರು. ಅವರು ಮಂಗಳವಾರ ಭಾರತೀಯ ರೆಡ್ ಕ್ರಾಸ್ ಉಡುಪಿ ಜಿಲ್ಲೆ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ರೆಡ್‌ಕ್ರಾಸ್ ಘಟಕಗಳ ಸಂಯುಕ್ತ ಆಶ್ರಯದಲ್ಲಿ ರೆಡ್‌ಕ್ರಾಸ್ ಭವನದಲ್ಲಿ ನಡೆದ ಮಂಗಳೂರು ವಿಶ್ವವಿದ್ಯಾನಿಲಯ ವ್ಯಾಪ್ತಿಯ ಉಡುಪಿ ಜಿಲ್ಲೆಯ ರೆಡ್‌ಕ್ರಾಸ್ ಘಟಕ ನಾಯಕರ ತರಬೇತಿ ಶಿಬಿರವನ್ನು ಉದ್ಘಾಟಿಸಿ ಮಾತಾನಾಡುತ್ತಿದ್ದರು. ರೆಡ್‌ಕ್ರಾಸ್ ರಾಜ್ಯ ಸಭಾಪತಿ ಬಸರೂರು ರಾಜೀವ ಶೆಟ್ಟಿಯವರು ಮುಖ್ಯ ಅತಿಥಿಗಳಾಗಿ ಭಾಗವಹಿಸಿ ಮಾತನಾಡಿ, ಯುವ ರೆಡ್‌ಕ್ರಾಸ್ ಘಟಕಗಳು ರೆಡ್ ಕ್ರಾಸ್ಸಿನ ನಿಜವಾದ ಶಕ್ತಿ ಎಂದರು. ರೆಡ್‌ಕ್ರಾಸ್ ಜಿಲ್ಲಾ ಸಭಾಪತಿ ಡಾ. ಅಶೋಕ್ ಕುಮಾರ್ ವೈ.ಜಿ. ಅಧ್ಯಕ್ಷತೆ ವಹಿಸಿದ್ದರು.

ಸರಕಾರಿ ಪ್ರಥಮ ದರ್ಜೆ ಕಾಲೇಜು ತೆಂಕನಿಡಿಯೂರಿನ ರೆಡ್‌ಕ್ರಾಸ್ ಅಧಿಕಾರಿ ಪ್ರಶಾಂತ ನೀಲಾವರ ಸಂಪನ್ಮೂಲ ವ್ಯಕ್ತಿಯಾಗಿ ತರಬೇತಿ ನೀಡಿದರು. ಆಡಳಿತ ಮಂಡಳಿಯ ಸದಸ್ಯ ವಿ.ಜಿ. ಶೆಟ್ಟಿ ಹಾಗೂ ಮತ್ತಿತರರು ಭಾಗವಹಿಸಿದ್ದರು. ರೆಡ್‌ಕ್ರಾಸ್ ಜಿಲ್ಲಾ ಕಾರ್ಯದರ್ಶಿ ಡಾ. ಗಣನಾಥ ಎಕ್ಕಾರು ಪ್ರಸ್ತಾವನೆಯೊಂದಿಗೆ ಸ್ವಾಗತಿಸಿದರು. ರೆಡ್ ಕ್ರಾಸ್ ಸದಸ್ಯ ದಯಾನಂದ ಡಿ. ಕಾರ್ಯಕ್ರಮ ನಿರೂಪಿಸಿ, ಆಡಳಿತ ಮಂಡಳಿಯ ಸದಸ್ಯ ಚಂದ್ರಶೇಖರ್ ಟಿ. ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!