Saturday, October 17, 2026
Saturday, October 17, 2026

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

ಬಿ.ಪಿ.ಎಲ್. ಪಡಿತರ ಚೀಟಿ ಆದಾಯ ಮಿತಿ 3 ಲಕ್ಷಕ್ಕೆ ಹೆಚ್ಚಿಸುವಂತೆ ಮುಖ್ಯಮಂತ್ರಿಗಳಿಗೆ ಶಾಸಕ ಯಶ್ಪಾಲ್ ಸುವರ್ಣ ಮನವಿ

Date:

ಉಡುಪಿ, ಆ.13: ಬಿ.ಪಿ.ಎಲ್. ಪಡಿತರ ಚೀಟಿ ಪಡೆಯಲು ಪ್ರಸ್ತುತ ಜಾರಿಯಲ್ಲಿರುವ ಕುಟುಂಬದ ವಾರ್ಷಿಕ ಆದಾಯ ಮಿತಿ ರೂ. 1.20 ಲಕ್ಷವನ್ನು ರೂ. 3.00 ಲಕ್ಷಕ್ಕೆ ಹೆಚ್ಚಿಸುವಂತೆ ಉಡುಪಿ ಶಾಸಕರಾದ ಯಶ್ಪಾಲ್ ಸುವರ್ಣ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರಿಗೆ ಮನವಿ ಮಾಡಿದ್ದಾರೆ.

ಪ್ರಸ್ತುತ ಬಿ.ಪಿ.ಎಲ್. ಪಡಿತರ ಚೀಟಿಗೆ ಅನ್ವಯವಾಗುತ್ತಿರುವ ರೂ. 1.20 ಲಕ್ಷ ವಾರ್ಷಿಕ ಆದಾಯದ ಮಿತಿಯನ್ನು 2017ರಲ್ಲಿ ನಿಗದಿಪಡಿಸಲಾಗಿತ್ತು. ಕಳೆದ 9 ವರ್ಷಗಳಲ್ಲಿ ದಿನನಿತ್ಯದ ಅಗತ್ಯ ವಸ್ತುಗಳ ಬೆಲೆ ಗಣನೀಯವಾಗಿ ಏರಿಕೆಯಾಗಿದೆ. ಆದಾಯ ಮಿತಿಯನ್ನು ಪರಿಷ್ಕರಿಸದ ಕಾರಣ ಅನೇಕ ಬಡ ಹಾಗೂ ಕೆಳಮಧ್ಯಮ ವರ್ಗದ ಕುಟುಂಬಗಳು ಬಿ.ಪಿ.ಎಲ್. ಸೌಲಭ್ಯದಿಂದ ವಂಚಿತರಾಗಿರುತ್ತಾರೆ.

ಬಹುತೇಕ ಬಿ.ಪಿ.ಎಲ್. ಕುಟುಂಬಗಳ ಆದಾಯವು ಅಲ್ಪ ಪ್ರಮಾಣದಲ್ಲಿ ಏರಿಕೆಯಾಗಿದ್ದು, ಇಂದಿನ ಆರ್ಥಿಕ ಪರಿಸ್ಥಿತಿ ಹಾಗೂ ಜೀವನ ನಿರ್ವಹಣೆಗೆ ಹೆಚ್ಚಾದ ವೆಚ್ಚವನ್ನು ಗಮನಿಸಿದರೆ, ರೂ. 1.20 ಲಕ್ಷ ಆದಾಯ ಮಿತಿ ಈಗಿನ ಕಾಲಘಟ್ಟಕ್ಕೆ ಹೊಂದಿಕೆಯಾಗುವುದಿಲ್ಲ. ಆದುದರಿಂದ, ಬಿ.ಪಿ.ಎಲ್. ಪಡಿತರ ಚೀಟಿಗೆ ವಾರ್ಷಿಕ ಆದಾಯ ಮಿತಿಯನ್ನು ರೂ. 3.00 ಲಕ್ಷಕ್ಕೆ ಹೆಚ್ಚಿಸುವ ಮೂಲಕ ನೈಜ ಅರ್ಹ ಕುಟುಂಬಗಳಿಗೆ ಆಹಾರ ಭದ್ರತೆ ಹಾಗೂ ಸರ್ಕಾರದ ವಿವಿಧ ಜನಪರ ಯೋಜನೆಗಳ ಸೌಲಭ್ಯ ದೊರೆಯುವಂತೆ ರಾಜ್ಯ ಸರ್ಕಾರ ತುರ್ತು ಕ್ರಮ ಕೈಗೊಳ್ಳಬೇಕು ಎಂದು ಶಾಸಕ ಯಶ್ಪಾಲ್ ಸುವರ್ಣ ಪತ್ರ ಬರೆದು ಆಗ್ರಹಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಹೆಚ್‌ಐವಿ /ಏಡ್ಸ್ ಅರಿವು ಮೂಡಿಸಲು ಜಿಲ್ಲಾಮಟ್ಟದ ರೆಡ್ ರಿಬ್ಬನ್ ರನ್ ಮ್ಯಾರಥಾನ್

ಉಡುಪಿ, ಅ.17: ಹೆಚ್‌ಐವಿ/ಏಡ್ಸ್ ಕುರಿತು ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವುದು, ಯುವಜನರಲ್ಲಿ ಆರೋಗ್ಯದ...

ಪೊಲೀಸರಂತೆ ಕರ್ತವ್ಯ ನಿರ್ವಹಿಸುವ ಗೃಹರಕ್ಷಕರ ಕಾರ್ಯ ಶ್ಲಾಘನೀಯ: ಹರಿರಾಮ್ ಶಂಕರ್

ಉಡುಪಿ, ಅ.17: ಕಾನೂನು ಸುವ್ಯವಸ್ಥೆ, ಬಂದೋಬಸ್ತ್ ಮತ್ತು ತುರ್ತು ಪರಿಸ್ಥಿತಿಗಳಲ್ಲಿ ಪೊಲೀಸ್...

ಕಾರ್ಮಿಕರು ತಮ್ಮ ಹಕ್ಕುಗಳಿಂದ ವಂಚಿತರಾಗದಂತೆ ನೋಡಿಕೊಳ್ಳಿ: ಟಿ.ಎಂ.ಶಾಹಿದ್ ತೆಕ್ಕಿಲ್

ಉಡುಪಿ, ಅ.17: ಸರಕಾರವು ಕಾರ್ಮಿಕರ ಶ್ರೇಯೋಭಿವೃದ್ಧಿಗೆ ಜಾರಿಗೊಳಿಸಿರುವ ಕಲ್ಯಾಣ ಕಾರ್ಯಕ್ರಮಗಳನ್ನು ಅರ್ಹ...
error: Content is protected !!