Thursday, September 24, 2026
Thursday, September 24, 2026

ರೂ. 75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಶೀಂಬ್ರ ದೇವಸ್ಥಾನದ ಸಂಪರ್ಕ ರಸ್ತೆ ಕಾಮಗಾರಿ ಉದ್ಘಾಟನೆ

ರೂ. 75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಶೀಂಬ್ರ ದೇವಸ್ಥಾನದ ಸಂಪರ್ಕ ರಸ್ತೆ ಕಾಮಗಾರಿ ಉದ್ಘಾಟನೆ

Date:

ಉಡುಪಿ, ಆ.14: ಮೂಡುಪೆರಂಪಳ್ಳಿ ವಾರ್ಡಿನ ಶೀಂಬ್ರ ಸಿದ್ಧಿವಿನಾಯಕ ದೇವಸ್ಥಾನಕ್ಕೆ ಸುಮಾರು 75 ಲಕ್ಷ ವೆಚ್ಚದಲ್ಲಿ ಅಭಿವೃದ್ಧಿಪಡಿಸಿದ ಕಾಂಕ್ರೀಟ್ ರಸ್ತೆ ಕಾಮಗಾರಿಯ ಉದ್ಘಾಟನೆಯನ್ನು ಶಾಸಕ ಯಶ್ಪಾಲ್ ಸುವರ್ಣ ನೆರವೇರಿಸಿದರು. ಬಳಿಕ ಮಾತನಾಡಿದ ಅವರು, ಇತಿಹಾಸ ಪ್ರಸಿದ್ಧ ಶೀಂಬ್ರ ದೇವಸ್ಥಾನ ಉಡುಪಿಯ ಪ್ರಮುಖ ದೇವಸ್ಥಾನಗಳಲ್ಲಿ ಒಂದಾಗಿದ್ದು, ಕೃಷ್ಣಂಗಾರಕ ಚತುರ್ದಶಿಯಂದು ದೇಶದ ವಿವಿಧ ಭಾಗಗಳಿಂದ ತೀರ್ಥ ಸ್ನಾನಕ್ಕೆ ಆಗಮಿಸುವ ಈ ಪುಣ್ಯ ಕ್ಷೇತ್ರಕ್ಕೆ ಉತ್ತಮ ಸಂಪರ್ಕ ರಸ್ತೆ ನಿರ್ಮಿಸುವ ನಿಟ್ಟಿನಲ್ಲಿ ಸುಮಾರು 75 ಲಕ್ಷ ವೆಚ್ಚದಲ್ಲಿ ರಸ್ತೆ ನಿರ್ಮಾಣಗೊಂಡಿದ್ದು ದೇವಸ್ಥಾನಕ್ಕೆ ಆಗಮಿಸುವ ಭಕ್ತರಿಗೆ ಅನುಕೂಲವಾಗಲಿದೆ ಎಂದರು.

ಉಡುಪಿ ನಗರಸಭೆ ಮಾಜಿ ಅಧ್ಯಕ್ಷರಾದ ಪ್ರಭಾಕರ ಪೂಜಾರಿ, ಅಜಿತ್ ಪೈ, ರಮೇಶ್ ರಾವ್, ಬಾಲಾಜಿ ರಾಘವೇಂದ್ರ ಆಚಾರ್ಯ, ಯುವ ಬ್ರಾಹ್ಮಣ ಪರಿಷತ್ತಿನ ಚಂದ್ರಕಾಂತ ಕೆ.ಎನ್., ನಾಗರಾಜ ತಂತ್ರಿ, ಹರಿಕೃಷ್ಣ ಶಿವತ್ತಾಯ, ಪ್ರಶಾಂತ ಭಟ್ ಪೆರಂಪಳ್ಳಿ, ಅನಿಟ ಬೆಲಿಂಡಾ ಡಿಸೋಜಾ, ಮಂಜುನಾಥ ಮಣಿಪಾಲ, ಡೆನಿಸ್ ಮಸ್ಕರೇನ್ಹಸ್, ಸುಮಾ, ವಿಜಯ ಪೂಜಾರಿ, ಗಣಪತಿ ಭಟ್, ವಾದಿರಾಜ ಆಚಾರ್ಯ, ಬಿಜೆಪಿ ಜಿಲ್ಲಾ ವಕ್ತಾರ ಮಧುಕರ ಮುದ್ರಾಡಿ, ಶಶಾಂಕ್ ಶಿವತ್ತಾಯ, ಗೋಪಾಲಾಚಾರ್ ಮುಂತಾದವರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕುಂದಾಪುರದ ಇಂಪನಾ ಆರ್. ಅವರಿಗೆ ರಾಜ್ಯಮಟ್ಟದ ಅಬಾಕಸ್ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ

ಕುಂದಾಪುರ, ಸೆ.22: ಐಡಿಯಲ್ ಪ್ಲೇ ಅಬಾಕಸ್ ಇಂಡಿಯಾ ಪ್ರೈವೇಟ್ ಲಿಮಿಟೆಡ್ ಸಂಸ್ಥೆಯ...

ರಾಷ್ಟ್ರಕವಿ ಗೋವಿಂದ ಪೈ ಸಂಶೋಧನಾ ಕೇಂದ್ರಕ್ಕೆ ಶೈಕ್ಷಣಿಕ ಭೇಟಿ

ಕುಂದಾಪುರ, ಸೆ.22: ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜು,...

ಎನ್ಎಸ್ಎಸ್ ಸ್ವಯಂಸೇವಕರಿಂದ ತ್ರಾಸಿ ಬೀಚ್ ಕ್ಲೀನಿಂಗ್

ಕುಂದಾಪುರ, ಸೆ.22: ಅಂತಾರಾಷ್ಟ್ರೀಯ ಕೊಸ್ಟಲ್ ಕ್ಲೀನ್ ಆಫ್ ಡೇ ಆಚರಣೆ ಪ್ರಯುಕ್ತ...
error: Content is protected !!