Monday, August 17, 2026
Monday, August 17, 2026

ವಿವೇಕದ ಬೆಳಕಿನಲ್ಲಿ ಸ್ವಾತಂತ್ರ್ಯವನ್ನು ಕಾದುಕೊಳ್ಳೋಣ: ಡಾ. ಜಯಪ್ರಕಾಶ್ ಶೆಟ್ಟಿ

ವಿವೇಕದ ಬೆಳಕಿನಲ್ಲಿ ಸ್ವಾತಂತ್ರ್ಯವನ್ನು ಕಾದುಕೊಳ್ಳೋಣ: ಡಾ. ಜಯಪ್ರಕಾಶ್ ಶೆಟ್ಟಿ

Date:

ಹಿರಿಯಡಕ, ಆ.15: ಹಿಂಸೆ ಮತ್ತು ಅಸತ್ಯದ ವಿರುದ್ಧ ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ಅಹಿಂಸೆ ಮತ್ತು ಸತ್ಯಾಗ್ರಹದ ಪರಿಣಾಮಕಾರಿ ಆಯುಧವನ್ನು ಬಳಸಿ ಸ್ವಾತಂತ್ರ್ಯವನ್ನು ಗಳಿಸಿದ ಈ ದೇಶ ಬಾಬಾಸಾಹೇಬ್‌ ಅಂಬೇಡ್ಕರ್‌ ಕಟ್ಟಿಕೊಟ್ಟ ವಿವೇಕದ ಮಹಾದೀಪವಾದ ಸಂವಿಧಾನದ ಬೆಳಕಿನಲ್ಲಿಯೇ ಮುನ್ನಡೆಯುವಂತೆ ನಮ್ಮ ಸ್ವಾತಂತ್ರ್ಯವನ್ನು ನಾವು ಎಚ್ಚರದಿಂದ ಕಾದುಕೊಳ್ಳಬೇಕಾಗಿದೆ ಎಂದು ಪ್ರಾಂಶುಪಾಲ ಡಾ. ಜಯಪ್ರಕಾಶ್ ಶೆಟ್ಟಿ ಹೆಚ್‌. ಹೇಳಿದರು.

ಅವರು ಹಿರಿಯಡಕದ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ನಡೆಸಿ ವಿದ್ಯಾರ್ಥಿಗಳಿಗೆ ಸ್ವಾತಂತ್ರ್ಯದ ಸಂದೇಶ ನೀಡಿದರು. ರಾ.ಸೇ.ಯೋ. ಯೋಜನಾಧಿಕಾರಿ ನಂದೀಶ್‌ ಕುಮಾರ್‌ ಕೆ ಸಿ, ಕಾರ್ಯಕ್ರಮವನ್ನು ಸಂಯೋಜಿಸಿ ನಿರೂಪಿಸಿದರು. ಕಾಲೇಜಿನ ಎಲ್ಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ಹಾಗೂ ವಿದ್ಯಾರ್ಥಿಗಳು ಪಾಲ್ಗೊಂಡರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ ರಾಜ್ಯಗಳು ಅದರ ಭದ್ರ ಬುನಾದಿಯ ಕಂಬಗಳಿದ್ದಂತೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.15: 80ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಬೆಂಗಳೂರಿನ ಫೀಲ್ಡ್ ಮಾರ್ಷಲ್...

ಪರೀಕ್ಷೆ ಬರೆಯಲಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಆನ್‌ಲೈನ್ ತರಬೇತಿ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಆ.15: ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ...
error: Content is protected !!