Sunday, August 16, 2026
Sunday, August 16, 2026

ಉಡುಪಿ ಜ್ಞಾನಸುಧಾ: 80ನೇ ಸ್ವಾತಂತ್ರ್ಯ ದಿನಾಚರಣೆ

ಉಡುಪಿ ಜ್ಞಾನಸುಧಾ: 80ನೇ ಸ್ವಾತಂತ್ರ್ಯ ದಿನಾಚರಣೆ

Date:

ಉಡುಪಿ, ಆ.15: ಉಡುಪಿ ಜ್ಞಾನಸುಧಾದಲ್ಲಿ 80ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಸಂಭ್ರಮದಿಂದ ಆಚರಿಸಲಾಯಿತು. ಮುಖ್ಯ ಅತಿಥಿಗಳಾಗಿ ಆಗಮಿಸಿ, ಧ್ವಜಾರೋಹಣ ಕಾರ್ಯಕ್ರಮವನ್ನು ನೆರವೇರಿಸಿದ ಲೆಫ್ಟಿನೆಂಟ್ ಕರ್ನಲ್ ಜಗದೀಶ್ ಹೆಚ್ (ನಿವೃತ್ತ) ಇವರು ಜೀವನದಲ್ಲಿ ಯಶಸ್ಸು ಲಭಿಸಬೇಕಾದರೆ ಗುರಿಯನ್ನು ಮೊದಲೇ ನಿರ್ಧರಿಸಿಕೊಂಡು ವಿಶ್ವಾಸದಿಂದ ಮುಂದವರಿಯಬೇಕು. ಪ್ರತಿ ಹೆಜ್ಜೆಯಲ್ಲೂ ಜೊತೆಯಾದ ಸರ್ವರಿಗೂ ಕೃತಜ್ಞತೆ ಸಲ್ಲಿಸುವ ಮನೋಭಾವ ನಮ್ಮಲ್ಲಿರಬೇಕು. ಭಾರತೀಯ ಸೇನೆಯಲ್ಲಿರುವ ಉದ್ಯೋಗಾವಕಾಶಗಳು, ವಿವಿಧ ರೀತಿಯ ಪರೀಕ್ಷೆಗಳು, ಸೇನೆಯಲ್ಲಿ ಸೇವೆ ಸಲ್ಲಿಸುವುದು ವ್ಯಕ್ತಿ ಗೌರವವನ್ನು ಹೆಚ್ಚಿಸುವುದರ ಜೊತೆಗೆ ವೃತ್ತಿ ಭದ್ರತೆಯನ್ನು ಒದಗಿಸುತ್ತದೆ ಎಂದು ವಿದ್ಯಾರ್ಥಿಗಳಿಗೆ ಹೇಳಿದರು.

ಲೆಫ್ಟಿನೆಂಟ್ ಕರ್ನಲ್ ಜಗದೀಶ್ ಹೆಚ್ (ನಿವೃತ್ತ) ಇವರ ಸುದೀರ್ಘ ಕಾಲದ ಸೇವೆಯನ್ನು ಗುರುತಿಸಿ ಸಂಸ್ಥೆಯ ಪರವಾಗಿ ಸನ್ಮಾನಿಸಲಾಯಿತು. ಕಾರ್ಯಕ್ರಮದಲ್ಲಿ ಉಡುಪಿ ಜ್ಞಾನಸುಧಾ ಪ.ಪೂ. ಕಾಲೇಜಿನ ಪ್ರಾಂಶುಪಾಲರಾದ ಶ್ರೀನಿಧಿ ಭಾಗವತ್, ಬೋಧಕ, ಬೋಧಕೇತರ ವರ್ಗದವರು ಉಪಸ್ಥಿತರಿದ್ದರು. ಉಪನ್ಯಾಸಕಿ ಸ್ವರೂಪ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ ರಾಜ್ಯಗಳು ಅದರ ಭದ್ರ ಬುನಾದಿಯ ಕಂಬಗಳಿದ್ದಂತೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.15: 80ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಬೆಂಗಳೂರಿನ ಫೀಲ್ಡ್ ಮಾರ್ಷಲ್...

ಪರೀಕ್ಷೆ ಬರೆಯಲಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಆನ್‌ಲೈನ್ ತರಬೇತಿ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಆ.15: ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ...

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ಸ್ವಾತಂತ್ರ್ಯೋತ್ಸವ ಆಚರಣೆ

ಕಾರ್ಕಳ, ಆ.15: ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು....
error: Content is protected !!