Sunday, August 16, 2026
Sunday, August 16, 2026

ಮಸಾಲೆ ಪುಡಿ ಗುಣಮಟ್ಟವಿದ್ದಲ್ಲಿ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚು: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

ಮಸಾಲೆ ಪುಡಿ ಗುಣಮಟ್ಟವಿದ್ದಲ್ಲಿ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚು: ಜಿಲ್ಲಾ ಉಸ್ತುವಾರಿ ಸಚಿವ ರಿಜ್ವಾನ್ ಅರ್ಷದ್

Date:

ಉಡುಪಿ, ಆ.15: ಕರ್ನಾಟಕ ಸರಕಾರದ ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ರಿಜ್ವಾನ್ ಅರ್ಷದ್ ಅವರು ಶನಿವಾರ ದೊಡ್ಡಣಗುಡ್ಡೆ ಶಿವಳ್ಳಿ ತೋಟಗಾರಿಕಾ ಕ್ಷೇತ್ರದಲ್ಲಿ ಜಿಲ್ಲಾ ಪಂಚಾಯತ್ ವತಿಯಿಂದ ಉಡುಪಿ ಸಂಜೀವಿನಿ ಮಹಿಳಾ ಕಿಸಾನ್ ಪ್ರೊಡ್ಯೂಸರ್ ಕಂಪನಿಯ ಇಲ್ಲು ಫುಡ್ಸ್ ಮಸಾಲಾ ಪುಡಿ ತಯಾರಿಕಾ ಘಟಕವನ್ನು ಉದ್ಘಾಟಿಸಿದರು. ಇದೇ ಸಂದರ್ಭದಲ್ಲಿ ಮಾತನಾಡಿದ ಅವರು, ಆಹಾರ ಪದಾರ್ಥಗಳು ಗುಣಮಟ್ಟದಲ್ಲಿ ಚೆನ್ನಾಗಿದ್ದಾಗ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಿರುವುದು ಸಾಮಾನ್ಯ. ಸಂಜೀವಿನಿ ಮಹಿಳಾ ಕಿಸಾನ್ ಪ್ರೊಡ್ಯೂಸರ್ ಕಂಪನಿಯು ಇಲ್ಲು ಫುಡ್ಸ್ ಮಸಾಲಾ ಪುಡಿ ತಯಾರಿಕಾ ಘಟಕವನ್ನು ಪ್ರಾರಂಭಿಸಿರುವುದು ಒಂದು ಒಳ್ಳೆಯ ಉದ್ಯಮವಾಗಿದೆ. ಮಸಾಲೆ ಪುಡಿಯು ಉತ್ತಮ ಗುಣಮಟ್ಟವನ್ನು ಕಾಯ್ದುಕೊಂಡು ಮಾರುಕಟ್ಟೆಯ ವಿಸ್ತರಣೆಗೆ ಒತ್ತು ನೀಡುವುದರ ಜೊತೆಗೆ ಯಶಸ್ವಿಗೊಳಿಸಬೇಕೆಂದು ಕಿವಿ ಮಾತು ಹೇಳಿದರು.

ಕಂಪನಿಗಳ ಕಾಯ್ದೆಯಡಿ ಅಧಿಕೃತವಾಗಿ ನೋಂದಾಯಿಸಲ್ಪಟ್ಟಿರುವ ಈ ಕಂಪನಿಯು ಮಹಿಳಾ ನೇತೃತ್ವದ ಕೃಷಿ ಮತ್ತು ಗ್ರಾಮೀಣ ಉದ್ಯಮಗಳನ್ನು ಬಲಪಡಿಸುವ ಉದ್ದೇಶ ಹೊಂದಿದೆ. ಉಡುಪಿ ತಾಲೂಕಿನ 16 ಗ್ರಾಮ ಪಂಚಾಯಿತಿಗಳ 1000 ಮಹಿಳಾ ರೈತರು ಷೇರು ಬಂಡವಾಳ ಹೂಡಿಕೆ ಮಾಡಿದ್ದಾರೆ. ಕೃಷಿ, ಪಶುಸಂಗೋಪನೆ ಮತ್ತು ಪೂರಕ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡಿರುವ ಸಣ್ಣ ಮತ್ತು ಅತಿ ಸಣ್ಣ ಮಹಿಳಾ ಉತ್ಪಾದಕರು ಈ ಕಂಪನಿಯ ಸಾಮೂಹಿಕ ಒಡೆತನ ಹೊಂದಿದ್ದಾರೆ ಎಂದರು. ರೈತ ಮಹಿಳೆಯರಿಗೆ ಸ್ವ-ಉದ್ಯೋಗ ಚಟುವಟಿಕೆಗೆ ಅವಕಾಶ ಕಲ್ಪಿಸುವುದರೊಂದಿಗೆ ಸ್ಥಳೀಯ ಕೃಷಿ ಉತ್ಪನ್ನಗಳಿಗೆ ಸೂಕ್ತ ಮೌಲ್ಯವರ್ಧನೆ ಒದಗಿಸಲಿದ್ದು, ಮಹಿಳೆಯರ ಜೀವನೋಪಾಯ ವೃದ್ಧಿಗೆ ಈ ಕಂಪನಿಯು ನೆರವಾಗಲಿದೆ ಎಂದರು.

ಮಂಗಳೂರು ಕರಾವಳಿ ಅಭಿವೃದ್ಧಿ ಮಂಡಳಿಯ ಅಧ್ಯಕ್ಷ ಎಂ.ಎ ಗಫೂರ್, ನಗರಾಭಿವೃಧ್ದಿ ಪ್ರಾಧಿಕಾರದ ಅಧ್ಯಕ್ಷ ದಿನಕರ ಹೇರೂರು, ಉಡುಪಿ ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಅಶೋಕ್ ಕುಮಾರ್ ಕೊಡವೂರು, ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ., ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರತೀಕ್ ಬಾಯಲ್, ಜಿಲ್ಲಾ ಪೊಲೀಸ್ ಅಧೀಕ್ಷಕ ಹರಿರಾಮ್ ಶಂಕರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಭಾರತವನ್ನು ಒಂದು ಭವ್ಯ ದೇಗುಲಕ್ಕೆ ಹೋಲಿಸಿದರೆ ರಾಜ್ಯಗಳು ಅದರ ಭದ್ರ ಬುನಾದಿಯ ಕಂಬಗಳಿದ್ದಂತೆ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು, ಆ.15: 80ನೇ ಸ್ವಾತಂತ್ರ್ಯೋತ್ಸವದ ಶುಭ ಸಂದರ್ಭದಲ್ಲಿ ಬೆಂಗಳೂರಿನ ಫೀಲ್ಡ್ ಮಾರ್ಷಲ್...

ಪರೀಕ್ಷೆ ಬರೆಯಲಿರುವ ಬಡ ಮತ್ತು ಮಧ್ಯಮ ವರ್ಗದ ವಿದ್ಯಾರ್ಥಿಗಳಿಗೆ ಉಚಿತ ಆನ್‌ಲೈನ್ ತರಬೇತಿ: ಪ್ರಧಾನಿ ನರೇಂದ್ರ ಮೋದಿ

ನವದೆಹಲಿ, ಆ.15: ದೆಹಲಿಯ ಐತಿಹಾಸಿಕ ಕೆಂಪು ಕೋಟೆಯಿಂದ ಪ್ರಧಾನಿ ನರೇಂದ್ರ ಮೋದಿ...

ಕ್ರಿಯೇಟಿವ್ ಪದವಿಪೂರ್ವ ಕಾಲೇಜು: ಸ್ವಾತಂತ್ರ್ಯೋತ್ಸವ ಆಚರಣೆ

ಕಾರ್ಕಳ, ಆ.15: ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು....

ದೇಶಪ್ರೇಮ ಮೈಗೂಡಿಸಿ, ಕೌಟುಂಬಿಕ ಮೌಲ್ಯಗಳಿಗೂ ಗೌರವಿಸುವ ಮನೋಭಾವ ಬೆಳೆಸಬೇಕು: ಬೈಕಾಡಿ ಸುಪ್ರಸಾದ್‌ ಶೆಟ್ಟಿ

ಮಣಿಪಾಲ, ಆ.15: ಮಣಿಪಾಲ ಜ್ಞಾನಸುಧಾ ಪದವಿಪೂರ್ವ ಕಾಲೇಜು ಮತ್ತು ಆಂಗ್ಲ ಮಾಧ್ಯಮ...
error: Content is protected !!