Monday, September 28, 2026
Monday, September 28, 2026

ಕುಂದಾಪುರ: ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ

ಕುಂದಾಪುರ: ಸ್ವಾತಂತ್ರ್ಯ ಹೋರಾಟಗಾರರ ಮನೆಗೆ ನಾಮಫಲಕ

Date:

ಕುಂದಾಪುರ, ಆ.15: ಇಲ್ಲಿನ ಡಾ.ಬಿ.ಬಿ ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ಕನ್ನಡ ವಿಭಾಗದ ಆಶ್ರಯದಲ್ಲಿ ಅಧ್ಯಯನ ಭೇಟಿಯ ಭಾಗವಾಗಿ ವಿದ್ಯಾರ್ಥಿಗಳು ಸ್ವರಾಜ್ಯ – 75 ತಂಡ ಮೂಡು ಗಿಳಿಯಾರಿನ ಜನ ಸೇವಾ ಟ್ರಸ್ಟ್, ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಕುಂದಾಪುರ ತಾಲೂಕು ಘಟಕ, ಕೋಟದ ಹಸ್ತ ಚಿತ್ತ ಫೌಂಡೇಶನ್, ಉಸಿರು ಕೋಟ, ಜೈ ಕುಂದಾಪುರ ಸೇವಾ ಟ್ರಸ್ಟ್ ಹಾಗೂ ಅದಿಮ ಕಲಾ ಟ್ರಸ್ಟ್ ಉಡುಪಿ ಇವರ ಸಹಯೋಗದೊಂದಿಗೆ ಆಯೋಜಿಸಿದ ಕೋಟೇಶ್ವರದ ಸರ್ಜನ್ ಆಸ್ಪತ್ರೆಯ ಆವರಣದಲ್ಲಿರುವ ಸ್ವಾತಂತ್ರ್ಯ ಹೋರಾಟಗಾರ ದಿವಂಗತ ಹುಲಿಕಲ್ಲು ನಾಗಭೂಷಣ್ ರಾವ್ ಅವರ ಮನೆಗೆ ನಾಮಫಲಕ ಅಳವಡಿಸುವ ಕಾರ್ಯಕ್ರಮದಲ್ಲಿ ಭಾಗವಹಿಸಿದರು. ಉಡುಪಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ನೀಲಾವರ ಸುರೇಂದ್ರ
ಅಡಿಗ ರಾಷ್ಟ್ರಧ್ವಜಕ್ಕೆ ಗೌರವಾರ್ಪಣೆ ಸಲ್ಲಿಸಿದರು. ಕುಂದಾಪುರ ತಾಲೂಕು ಕನ್ನಡ ಸಾಹಿತ್ಯ ಪರಿಷತ್ ಕಾರ್ಯದರ್ಶಿ ದಿನಕರ್ ಆರ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ನಿವೃತ್ತ ಭೂಸೇನಾ ಯೋಧ ಕರುಣಾಕರ ಗಾಣಿಗ ನಾಮಫಲಕ ಅನಾವರಣ ಮಾಡಿದರು.

ಸಂಪನ್ಮೂಲ ವ್ಯಕ್ತಿ ಗಿರೀಶ್ ಅಂಪಾರು ಒಂದೇ ಮಾತರಂ ಕುರಿತು ಉಪನ್ಯಾಸ ನೀಡಿದರು. ಈ ಸಂದರ್ಭ ಬಿ.ಬಿ. ಹೆಗ್ಡೆ ಕಾಲೇಜಿನ ಉಪ ಪ್ರಾಂಶುಪಾಲ ಚೇತನ್ ಶೆಟ್ಟಿ ಕೋವಾಡಿ, ಜಿಲ್ಲಾ ಸಾಹಿತ್ಯ ಪರಿಷತ್ ಕಾರ್ಯದರ್ಶಿ ನರೇಂದ್ರ ಕುಮಾರ್ ಕೋಟ, ಸರ್ಜನ್ ಆಸ್ಪತ್ರೆಯ ವೈದ್ಯಾಧಿಕಾರಿಗಳಾದ ಡಾ. ರವಿಶಂಕರ್ ರಾವ್ ಮತ್ತು ಡಾ. ಎಚ್ ಎನ್ ವನಿತಾ ಲಕ್ಷ್ಮಿ, ರೇಡಿಯೋ ಕುಂದಾಪುರದ ಜ್ಯೋತಿ ಸಾಲಿಗ್ರಾಮ ಹಾಗೂ ಬಿ.ಬಿ ಹೆಗ್ಡೆ ಕಾಲೇಜಿನ ಕನ್ನಡ ವಿಭಾಗದ ಸಹಾಯಕ ಪ್ರಾಧ್ಯಾಪಕರಾದ ರೇಷ್ಮಾ ಶೆಟ್ಟಿ, ಪ್ರವೀಣಾ ಎಂ ಪೂಜಾರಿ, ಕಾರ್ಯಕ್ರಮ ಸಂಯೋಜಕಿ ರಶ್ಮಿತಾ ಶೆಟ್ಟಿ ಉಪಸ್ಥಿತರಿದ್ದರು. ಸ್ವರಾಜ್ಯ 75ರ ಸಂಯೋಜಕ ಪ್ರದೀಪ್ ಬಸ್ರೂರ್ ಪ್ರಸ್ತಾವಿಸಿ, ಸ್ವಾಗತ ಕೋರಿದರು. ವಿದ್ಯಾರ್ಥಿನಿ ಅನುಶ್ರೀ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!