Tuesday, October 20, 2026
Tuesday, October 20, 2026

ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿಯಾಗಬೇಕಾಗಿದೆ: ಡಾ. ಮಾನಸ

ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿಯಾಗಬೇಕಾಗಿದೆ: ಡಾ. ಮಾನಸ

Date:

ಉಡುಪಿ, ಆ.18: ಮನೆಯಲ್ಲಿ ಪೂಜಾ ಮನೆ ಇದ್ದ ಹಾಗೆ ಪ್ರತಿ ಮನೆಯಲ್ಲಿಯೂ ಕೂಡ ಒಂದು ಸಣ್ಣ ಗ್ರಂಥಾಲಯ ಇರಬೇಕು. ಪುಸ್ತಕದ ಸಂಸ್ಕೃತಿ ಮಸ್ತಕದ ಸಂಸ್ಕೃತಿ ಆಗಬೇಕಾಗಿದೆ ಎಂದು ಕನ್ನಡ ಪುಸ್ತಕ ಪ್ರಾಧಿಕಾರ ಬೆಂಗಳೂರು ಅಧ್ಯಕ್ಷರಾದ ಡಾ. ಮಾನಸ ಹೇಳಿದರು. ಅವರು ಪುಸ್ತಕ ಪ್ರಾಧಿಕಾರದ ಮನೆಗೊಂದು ಗ್ರಂಥಾಲಯ ಅಭಿಯಾನದ ಅನುಷ್ಠಾನ ಸಮಿತಿ ವತಿಯಿಂದ ನಡೆದ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಕೊಡವೂರಿನ ಭಾಮಾ ನಿಲಯದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಬದುಕುವ ಕಲೆ ಪುಸ್ತಕ ಹೇಳಿಕೊಡುತ್ತದೆ ಪುಸ್ತಕವನ್ನು ಪ್ರೀತಿಸಿದಾಗ ಬದುಕು ಮತ್ತಷ್ಟು ಸುಂದರವಾಗುತ್ತದೆ, ಈ ನಿಟ್ಟಿನಲ್ಲಿ ಮನೆಗೊಂದು ಗ್ರಂಥಾಲಯ ಕಾರ್ಯಕ್ರಮ ನಡೆಸಲಾಗುತ್ತಿದೆ
ಎಂದರು.

ಕಾಲೇಜು ವಿದ್ಯಾರ್ಥಿಗಳಿಗೆ ತಿಂಗಳ ತಿರುಳು ಕಾರ್ಯಕ್ರಮದ ಮೂಲಕ ಅನೇಕ ಸಾಹಿತಿಗಳ ಪುಸ್ತಕ ಪರಿಚಯ ಮಾಡಿಕೊಡಲಾಗುತ್ತಿದೆ ಎಂದು ಹೇಳಿದರು. ಭಕ್ತಿಯ ಭವನ ಭಯದ ಭವನವಾಗದೆ, ಜ್ಞಾನದ ಭವನವಾಗಬೇಕು ಎಂದರು. ಮುಖ್ಯ ಅತಿಥಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ , ಪೂರ್ಣಿಮಾ ಮಾತನಾಡಿ, ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕ ಅನೇಕ ವೈವಿಧ್ಯಪೂರ್ಣ ಕಾರ್ಯಕ್ರಮಗಳಿಂದ ರಾಜ್ಯದ ಜನರ ಮನೆ ಮಾತಾಗಿದೆ. ಇಂತಹ ಅತ್ಯುತ್ತಮ ಕಾರ್ಯ ನಡೆಸಿದ ಎಲ್ಲ ಪದಾಧಿಕಾರಿಗಳಿಗೆ ಅಭಿನಂದನೆ ಸಲ್ಲಿಸಿದರು. ಈ ಸಂದರ್ಭದಲ್ಲಿ ಅತಿಥಿಗಳನ್ನು ಗೌರವಿಸಲಾಯಿತು.

ಕನ್ನಡ ಪುಸ್ತಕ ಪ್ರಾಧಿಕಾರದ ವತಿಯಿಂದ ಪತ್ರಕರ್ತ ಜನಾದ೯ನ್ ಕೊಡವೂರು ಹಾಗು ಲೇಖಕಿ ಪೂರ್ಣಿಮಾ ಜನಾರ್ದನ್ ದಂಪತಿಗಳಿಗೆ ಪ್ರಮಾಣ ಪತ್ರದೊಂದಿಗೆ ಗೌರವಿಸಲಾಯಿತು. ಗಾಂಧಿ ಆಸ್ಪತ್ರೆಯ ಸಂಸ್ಥಾಪಕ ಎಂ. ಹರೀಶ್ಚಂದ್ರ, ಡಾ. ರಾಜಲಕ್ಷ್ಮೀ, ಮೋಹನ್ ಉಡುಪ ಉಪಸ್ಥಿತರಿದ್ದರು.

ಕನ್ನಡ ಸಾಹಿತ್ಯ ಪರಿಷತ್ತು ಉಡುಪಿ ತಾಲೂಕು ಘಟಕದ ಅಧ್ಯಕ್ಷ ಮತ್ತು ಮನೆಗೊಂದು ಗ್ರಂಥಾಲಯ ಅಭಿಯಾನದ ಜಿಲ್ಲಾ ಸಹ ಸಂಚಾಲಕ ರವಿರಾಜ್ ಹೆಚ್ ಪಿ ಪ್ರಸ್ತಾವನೆಗೈದರು. ಜನಾರ್ದನ್ ಕೊಡವೂರು ಸ್ವಾಗತಿಸಿ, ಅಭಿಯಾನದ ಜಿಲ್ಲಾ ಸದಸ್ಯ ರಾಘವೇಂದ್ರ ಪ್ರಭು ಕರ್ವಾಲು ನಿರೂಪಿಸಿದರು. ದೀಪ ಚಂದ್ರಕಾಂತ್ ಪ್ರಾರ್ಥಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನವರಾತ್ರಿ ಮಹೋತ್ಸವ

ಪೀಠಿಕೆ ಭಾರತೀಯ ಸಾಂಸ್ಕೃತಿಕ ಪರಂಪರೆಯಲ್ಲಿ ಶರತ್ಕಾಲದ ಆಶ್ವಯುಜ ಮಾಸದ ಶುಕ್ಲ ಪಕ್ಷದ ಪಾಡ್ಯದಿಂದ...

ಉಡುಪಿ ಜಿಲ್ಲಾ ಕಾಂಗ್ರೆಸ್ ಸಭೆ

ಉಡುಪಿ, ಅ.19: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್...

ಆಯುಷ್ಮಾನ್ ಆರೋಗ್ಯ ಮತ್ತು ಕ್ಷೇಮ ಕೇಂದ್ರದ ಕಟ್ಟಡದ ಗುದ್ದಲಿ ಪೂಜೆ

ಕಾಪು, ಅ.19: ಕಾಪು ವಿಧಾನಸಭಾ ಕ್ಷೇತ್ರದ ಉದ್ಯಾವರ ಗ್ರಾಮ ಪಂಚಾಯತ್ ವ್ಯಾಪ್ತಿಯ...

ಚಿತ್ರಕಲಾ ಸ್ಪರ್ಧೆಗಳು ಮಕ್ಕಳ ಸುಪ್ತ ಸೃಜನಶೀಲತೆ ಅನಾವರಣಕ್ಕೆ ವೇದಿಕೆಯಾಗಲಿ: ಯಶ್ಪಾಲ್ ಸುವರ್ಣ

ಉಡುಪಿ, ಅ.19: ಉಚ್ಚಿಲ ದಸರಾ ಮಹೋತ್ಸವದ ಅಂಗವಾಗಿ ಮಹಾಲಕ್ಷ್ಮೀ ಕೋ ಆಪರೇಟಿವ್...
error: Content is protected !!