Saturday, September 26, 2026
Saturday, September 26, 2026

ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿ: ರಮೇಶ್ ಕಾಂಚನ್

ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿ: ರಮೇಶ್ ಕಾಂಚನ್

Date:

ಉಡುಪಿ, ಆ.19: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ ರಾಜ್ಯ ಸರ್ಕಾರ ಜೂನ್ ತಿಂಗಳ ಅಂತ್ಯದಲ್ಲಿ ಆದೇಶ ಹೊರಡಿಸಿದ್ದು, ಇಂಧನ ಇಲಾಖೆ ಹಾಗೂ ವಿದ್ಯುತ್ ಸರಬರಾಜು ಕಂಪೆನಿಗಳು ಈ ಆದೇಶದ ಅನುಷ್ಠಾನದ ಭಾಗವಾಗಿ ಜುಲೈ 1ರಿಂದ ಗೃಹ ಜ್ಯೋತಿ ಫಲಾನುಭವಿಗಳ ಮನೆಗಳ ಮರುಪರಿಶೀಲನೆ ಪ್ರಕ್ರಿಯೆಯನ್ನು ಆರಂಭಿಸಿವೆ. ಈ ಪ್ರಕ್ರಿಯೆ ಆಗಸ್ಟ್ 31ರವರೆಗೆ ನಡೆಯಲಿದೆ. ಈಗಾಗಲೇ ಉಡುಪಿ ತಾಲೂಕಿನಲ್ಲಿ ಮರುಪರಿಶೀಲನೆ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದೆ. ಬಾಕಿ ಉಳಿದಿರುವ ಗೃಹ ಜ್ಯೋತಿ ಫಲಾನುಭವಿಗಳು ಕೂಡಲೇ ಮರುಪರಿಶೀಲನೆಗೆ ಅಗತ್ಯವಿರುವ ದಾಖಲೆಗಳನ್ನು ಸಿದ್ಧಪಡಿಸಿಕೊಂಡು, ಹತ್ತಿರದ ಮೆಸ್ಕಾಂ ಕಚೇರಿಯನ್ನು ಸಂಪರ್ಕಿಸಿ ಮರುಪರಿಶೀಲನೆ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಕೊಳ್ಳುವಂತೆ ಉಡುಪಿ ತಾಲೂಕು ಗ್ಯಾರಂಟಿ ಅನುಷ್ಠಾನ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಪ್ರಕಟನೆಯ ಮೂಲಕ ಮನವಿ ಮಾಡಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಕಾರಂತರು ಕರ್ನಾಟಕದ ವೈಚಾರಿಕ ಪ್ರಜ್ಞೆಯ ಪ್ರತಿನಿಧಿ: ಸಚಿವ ಶಿವರಾಜ ಎಸ್ ತಂಗಡಗಿ

ಉಡುಪಿ, ಸೆ.25: ಡಾ. ಶಿವರಾಮ ಕಾರಂತರು ಅಂತರಾಷ್ಟ್ರೀಯ ಮಟ್ಟದಲ್ಲಿ ನಮ್ಮ ದೇಶಕ್ಕೆ...

ಮಣಿಪಾಲ ಜ್ಞಾನಸುಧಾ: ಜಿಲ್ಲಾಮಟ್ಟದ ಫುಟ್ಬಾಲ್‌ ಪಂದ್ಯಾಟ

ಮಣಿಪಾಲ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...

ಬಾಸ್ಕೆಟ್ ಬಾಲ್: ಕಾರ್ಕಳ ಜ್ಞಾನಸುಧಾದ ಸಮರ್ಥ್ ಕೆ.ಯು ರಾಜ್ಯಮಟ್ಟಕ್ಕೆ ಆಯ್ಕೆ

ಕಾರ್ಕಳ, ಸೆ.25: ಶಾಲಾ ಶಿಕ್ಷಣ ಇಲಾಖೆ (ಪ.ಪೂ.ಕಾಲೇಜು) ಹಾಗೂ ಗಣಿತನಗರದ ಕಾರ್ಕಳ...

ಯುವಕರು ವಿದ್ಯಾವಂತರಾಗುವುದರ ಜೊತೆಗೆ ಹೃದಯವಂತರಾಗಬೇಕು

ತೆಂಕನಿಡಿಯೂರು, ಸೆ.25: ಇಂದಿನ ಹೊಸ ತಲೆಮಾರಿನ ಯುವಕ-ಯುವತಿಯರು ವಿದ್ಯಾವಂತರಾಗುವುದರ ಜೊತೆಗೆ ಪ್ರೀತಿ,...
error: Content is protected !!