Thursday, August 20, 2026
Thursday, August 20, 2026

ಬಾರಕೂರು: ‘ಶೈಕ್ಷಣಿಕ ಸಾಧನೆಗೆ ಕಗ್ಗದ ಪ್ರೇರಣೆ’ ವಿಶೇಷ ಉಪನ್ಯಾಸ ಕಾರ್ಯಕ್ರಮ

ಬಾರಕೂರು: ‘ಶೈಕ್ಷಣಿಕ ಸಾಧನೆಗೆ ಕಗ್ಗದ ಪ್ರೇರಣೆ’ ವಿಶೇಷ ಉಪನ್ಯಾಸ ಕಾರ್ಯಕ್ರಮ

Date:

ಬಾರ್ಕೂರು, ಆ.19: ಶ್ರೀಮತಿ ರುಕ್ಮಿಣಿ ಶೆಡ್ತಿ ಸ್ಮಾರಕ ನ್ಯಾಷನಲ್ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಕನ್ನಡ ವಿಭಾಗ ಹಾಗೂ ಆಂತರಿಕ ಗುಣಮಟ್ಟ ಭರವಸೆ ಕೋಶದ ಸಹಯೋಗದಲ್ಲಿ ‘ಶೈಕ್ಷಣಿಕ ಸಾಧನೆಗೆ ಕಗ್ಗದ ಪ್ರೇರಣೆ’ ವಿಷಯದ ಕುರಿತು ವಿಶೇಷ ಉಪನ್ಯಾಸ ಕಾರ್ಯಕ್ರಮ ಎ. ವಿ. ಸಭಾಂಗಣದಲ್ಲಿ ಮಂಗಳವಾರ ನಡೆಯಿತು. ಕಾರ್ಕಳ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಪ್ರಭಾಕರ ಶೆಟ್ಟಿ ಕೊಂಡಳ್ಳಿ ಅವರು ಮುಖ್ಯ ಉಪನ್ಯಾಸಕರಾಗಿ ಆಗಮಿಸಿ, ಡಿ.ವಿ.ಜಿ. ಅವರ ಮಂಕುತಿಮ್ಮನ ಕಗ್ಗದ ಮೌಲ್ಯಗಳು ಹಾಗೂ ವಿದ್ಯಾರ್ಥಿಗಳ ಶೈಕ್ಷಣಿಕ ಸಾಧನೆಗೆ ಕಗ್ಗವು ಹೇಗೆ ಪ್ರೇರಣೆಯಾಗಬಲ್ಲದು ಎಂಬುದರ ಕುರಿತು ಉಪನ್ಯಾಸ ನೀಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಭಾಸ್ಕರ ಶೆಟ್ಟಿ ಎಸ್. ವಹಿಸಿದ್ದರು. ಸತತ ಅಭ್ಯಾಸ ಮತ್ತು ವಿನಯವು ಅಧ್ಯಯನದ ಸೌಂದರ್ಯವನ್ನು ಹೆಚ್ಚಿಸುತ್ತವೆ ಎಂದು ಹೇಳಿದರು. ಕನ್ನಡ ವಿಭಾಗದ ಮುಖ್ಯಸ್ಥರಾದ ಶೈಲಜಾ, ಸಹಾಯಕ ಪ್ರಾಧ್ಯಾಪಕರಾದ ಡಾ. ಪಲ್ಲವಿ ಎನ್., ಕಾಲೇಜಿನ ಉಪನ್ಯಾಸಕ ವೃಂದ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆ. 20: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಆ.19: ನಗರದ ಅಂಬಲಪಾಡಿ ಕರಾವಳಿ ಬೈಪಾಸ್ ಬಳಿಯ ರೀಗಲ್ ಎಂಟ್ರಿ...

ಗೃಹ ಜ್ಯೋತಿ ಫಲಾನುಭವಿಗಳು ಮರುಪರಿಶೀಲನೆ ಪ್ರಕ್ರಿಯೆ ಪೂರ್ಣಗೊಳಿಸಿ: ರಮೇಶ್ ಕಾಂಚನ್

ಉಡುಪಿ, ಆ.19: ಗೃಹ ಜ್ಯೋತಿ ಯೋಜನೆಯ ಫಲಾನುಭವಿಗಳ ಮನೆಗಳ ಮರುಪರಿಶೀಲನೆಗೆ ರಾಜ್ಯ...

ಪ್ಲಾನೆಟ್ ಮಾರ್ಸ್ ಫೌಂಡೇಶನ್‌: 80ನೇ ಸ್ವಾತಂತ್ರ್ಯೋತ್ಸವ ಆಚರಣೆ

ಉಡುಪಿ, ಆ.19: ಪ್ಲಾನೆಟ್ ಮಾರ್ಸ್ ಫೌಂಡೇಶನ್‌ನಲ್ಲಿ 80ನೇ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ...

ನೂತನ ದಾಖಲೆ ನಿರ್ಮಿಸಿದ ರಿಷಭ್ ಪಂತ್- ಟೆಸ್ಟ್ ಕ್ರಿಕೆಟ್‌ನಲ್ಲಿ 100 ಸಿಕ್ಸರ್‌ಗಳನ್ನು ಬಾರಿಸಿದ ಮೊದಲ ಭಾರತೀಯ ಎಂಬ ಹೆಗ್ಗಳಿಕೆ

ಸ್ಪೋರ್ಟ್ಸ್ ಬುಲೆಟಿನ್, ಆ.18: ಶ್ರೀಲಂಕಾ ವಿರುದ್ಧದ ಮೊದಲ ಪಂದ್ಯದ ನಾಲ್ಕನೇ ದಿನದಂದು...
error: Content is protected !!