ಉಡುಪಿ: ಪೋಕ್ಸೋ ಕಾಯ್ದೆ ಕುರಿತು ಉಡುಪಿ ಜಿಲ್ಲಾ ಪೊಲೀಸ್ ಅಧಿಕಾರಿಗಳಿಗೆ ತರಬೇತಿ ಮತ್ತು ಮಾಹಿತಿ ಕಾರ್ಯಾಗಾರ ಉಡುಪಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ನಡೆಯಿತು.
ಸಂಪನ್ಮೂಲ ವ್ಯಕ್ತಿಯಾಗಿ ಜಿಲ್ಲಾ ಪಂಚಾಯತ್ ಎನ್. ಆರ್. ಎಲ್. ಎಂ. ಜಿಲ್ಲಾ ಕಾರ್ಯಕ್ರಮ ವ್ಯವಸ್ಥಾಪಕ ಪ್ರಭಾಕರ ಆಚಾರ್ ಮಾಹಿತಿ ನೀಡಿ ಪೋಕ್ಸೋ ಕಾಯ್ದೆಯನ್ನು ಅನುಷ್ಠಾನಕ್ಕೆ ತರುವಲ್ಲಿ ಮತ್ತು ಅಪರಾಧ ಪತ್ತೆ ಹಚ್ಚುವಲ್ಲಿ ರಾಜ್ಯದಲ್ಲಿ ಉಡುಪಿ ಜಿಲ್ಲೆ ಮುಂಚೂಣಿಯಲ್ಲಿದೆ.
ಅತೀ ಹೆಚ್ಚು ಹೊರ ಜಿಲ್ಲೆಯಿಂದ ಉಡುಪಿಯಲ್ಲಿ ನೆಲೆಸಿದವರಿಂದ ಇಂತಹ ಅಪರಾಧ ನಡೆದಿದೆ ಹೊರತು ಜಿಲ್ಲೆಯ ಜನರು ವಿರಳ.
ಇಲ್ಲಿನ ಪೊಲೀಸ್ ಅಧಿಕಾರಿಗಳು ಮಕ್ಕಳ ಸ್ನೇಹಿಯಾಗಿ ಕೆಲಸ ಮಾಡಿದ ಕಾರಣ ಅಪರಾಧ ಕಡಿಮೆಯಾಗಲು ಸಾಧ್ಯವಾಗಿದೆ.
ಮಕ್ಕಳು ಮುಂದಿನ ಭವಿಷ್ಯವಾದ ಕಾರಣ ಪೊಲೀಸ್ ಅಧಿಕಾರಿಗಳು ಎಂತಹ ಒತ್ತಡದ ಕೆಲಸ ಇದ್ದರೂ ಕೂಡ ನೊಂದ ಮಕ್ಕಳಿಗೆ ನ್ಯಾಯ ನೀಡಬೇಕು ಎಂದರು.
ಸಂತ್ರಸ್ತ ಮಕ್ಕಳ ಪುನರ್ವಸತಿ ಆರೋಗ್ಯ ಶಿಕ್ಷಣ ನೀಡಬೇಕಾಗಿರುವುದರಿಂದ ಪ್ರಕರಣ ಬಂದ ತಕ್ಷಣ ವರದಿಯನ್ನು ಮಕ್ಕಳ ಕಲ್ಯಾಣ ಸಮಿತಿಗೆ ನೀಡಬೇಕು.
ಪೋಕ್ಸೋ ತಿದ್ದುಪಡಿ ಕಾಯ್ದೆ ಬಗ್ಗೆ ಮಾಹಿತಿ ನೀಡುವ ಮೂಲಕ ಪೋಕ್ಸೋ ಅಪರಾಧಿಗೆ ಶಿಕ್ಷೆ ಹೇಗೆ ಇದೆಯೋ ಹಾಗೇ ಮಕ್ಕಳಿಗೆ ಲೈಂಗಿಕ ದೌರ್ಜನ್ಯ ಆದ ಬಗ್ಗೆ ಮಾಹಿತಿ ಗೊತ್ತಿದ್ದೂ ವರದಿ ಮಾಡದ ಅಧಿಕಾರಿಗಳಿಗೂ ಕಾನೂನಿನಲ್ಲಿ ಶಿಕ್ಷೆ ಇದೆ ಎಂದರು .
ಜಿಲ್ಲೆಯ 23 ಪೊಲೀಸ್ ಠಾಣೆಯ ಅಧಿಕಾರಿಗಳು ತರಬೇತಿಯಲ್ಲಿದ್ದು ಪೋಕ್ಸೋ ಕಾಯ್ದೆ ವಿಷಯದಲ್ಲಿ ಚರ್ಚೆ ನಡೆದು ಪ್ರಭಾಕರ ಆಚಾರ್ ಸೂಕ್ತ ಮಾಹಿತಿ ಮತ್ತು ಕಾನೂನಾತ್ಮಕ ವ್ಯವಸ್ಥೆಯ ಕುರಿತು ಮಾಹಿತಿ ನೀಡಿದರು.
ಹೆಚ್ಚುವರಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಸಿದ್ದಲಿಂಗಪ್ಪ, ಉಡುಪಿ ಪೊಲೀಸ್ ಉಪಾಧೀಕ್ಷ ಸುಧಾಕರ್ ನಾಯ್ಕ್ ಉಪಸ್ಥಿತರಿದ್ದರು.
ಬ್ರಹ್ಮಾವರ ಪೊಲೀಸ್ ಉಪ ನಿರೀಕ್ಷಕಿ ಮುಕ್ತಾ ಕಾರ್ಯಕ್ರಮ ನಿರೂಪಿಸಿದರು.