Sunday, October 4, 2026
Sunday, October 4, 2026

ಆ. 21: ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ: ರಕ್ತದಾನ ಶಿಬಿರ; ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ

ಆ. 21: ಜ್ಞಾನಸುಧಾ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಹುಟ್ಟುಹಬ್ಬ: ರಕ್ತದಾನ ಶಿಬಿರ; ವಿಶೇಷ ಮಕ್ಕಳ ಶಾಲಾ ಅಧ್ಯಾಪಕರಿಗೆ ಸನ್ಮಾನ

Date:

ಕಾರ್ಕಳ, ಆ.20: ಅಜೆಕಾರ್ ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ ವತಿಯಿಂದ ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳ ಸಂಸ್ಥಾಪಕ ದಿ. ಗೋಪ ಶೆಟ್ಟಿಯವರ 105ನೇ ಜನ್ಮದಿನದ ಅಂಗವಾಗಿ ಆ. 21ರಂದು ಕಾರ್ಕಳ ಗಣಿತನಗರ ಜ್ಞಾನಸುಧಾ ಕಾಲೇಜಿನ ಆವರಣದಲ್ಲಿ ರಕ್ತದಾನ ಶಿಬಿರ ಹಾಗೂ ಸನ್ಮಾನ ಕಾರ್ಯಕ್ರಮ ನಡೆಯಲಿದೆ. ಜ್ಞಾನಸುಧಾ ಶಿಕ್ಷಣ ಸಂಸ್ಥೆಗಳು ಹಾಗೂ ಹಳೆ ವಿದ್ಯಾರ್ಥಿ ಸಂಘದ ಸಹಯೋಗದೊಂದಿಗೆ ನಡೆಯುವ ರಕ್ತದಾನ ಶಿಬಿರವನ್ನು ಕೆ.ಎಂ.ಸಿ ಬ್ಲಡ್ ಬ್ಯಾಂಕ್ ಮುಖ್ಯಸ್ಥ ಪ್ರೊಫೆಸರ್ ಡಾ. ಗಣೇಶ್ ಮೋಹನ್ ಉದ್ಘಾಟಿಸಲಿದ್ದಾರೆ.

ಸನ್ಮಾನ: ಮಧ್ಯಾಹ್ನ 3 ಗಂಟೆಗೆ ನಡೆಯುವ ಕಾರ್ಯಕ್ರಮದಲ್ಲಿ ಕಾರ್ಕಳ ತಾಲೂಕಿನ ವಿಶೇಷ ಮಕ್ಕಳ ಶಾಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ ಅಧ್ಯಾಪಕರನ್ನು ಸನ್ಮಾನಿಸಲಾಗುವುದು ಹಾಗೂ ಆ ಸಂಸ್ಥೆಗಳಿಗೆ ಕಿರು ಧನ ಸಹಾಯವನ್ನು ನೀಡಲಾಗುವುದು. ಅಜೆಕಾರು ಪದ್ಮಗೋಪಾಲ್ ಎಜ್ಯುಕೇಶನ್ ಟ್ರಸ್ಟ್ನ ಆಡಳಿತ ಮಂಡಳಿ ಸದಸ್ಯ ತಾಜ್ ಗ್ಲಾಸ್ ಮಾಲಕ ಗಣಪತಿ ಪೈ ಅವರು ಕಾರ್ಯಕ್ರಮದ ಅಧ್ಯಕ್ಷತೆ ವಹಿಸಲಿದ್ದು, ಕಾರ್ಕಳ ಡಾ. ಟಿ. ಎಂ. ಎ. ಪೈ ರೋಟರಿ ಆಸ್ಪತ್ರೆಯ ಮುಖ್ಯ ವೈದ್ಯಾಧಿಕಾರಿ ಡಾ. ಸಂಜಯ್ ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ ಎಂದು ಆಯೋಜಕರು ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ತೆಂಕನಿಡಿಯೂರು ಕಾಲೇಜು: ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಅಭಿವಿನ್ಯಾಸ ಕಾರ್ಯಕ್ರಮ

ತೆಂಕನಿಡಿಯೂರು, ಅ.3: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ...

ವಿಧಿಕ್ತ–2026 ಉದ್ಘಾಟನೆ

ಕುಂದಾಪುರ, ಅ.3: ಡಾ. ಬಿ. ಬಿ. ಹೆಗ್ಡೆ ಕಾಲೇಜಿನ ವಾಣಿಜ್ಯ ವಿಭಾಗದ...

ಕ್ರಿಯೇಟಿವ್ ಕಾಲೇಜು: ಗಾಂಧಿ ಜಯಂತಿ ಸಂಭ್ರಮ

ಕಾರ್ಕಳ, ಅ.3: ಕ್ರಿಯೇಟಿವ್ ಪದವಿ ಕಾಲೇಜಿನಲ್ಲಿ ಮಹಾತ್ಮ ಗಾಂಧಿ ಜಯಂತಿ ಹಾಗೂ...
error: Content is protected !!