Sunday, September 27, 2026
Sunday, September 27, 2026

ಹಿರಿಯಡಕ: ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ

ಹಿರಿಯಡಕ: ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆ

Date:

ಹಿರಿಯಡಕ, ಆ.20: ಸಾಮಾಜಿಕ ನ್ಯಾಯ ಮತ್ತು ಸಾಮಾಜಿಕ ಸಮಾನತೆಯ ಪ್ರಜಾಸತ್ತಾತ್ಮಕ ಹೊಣೆಗಾರಿಕೆಗಳನ್ನು ಪ್ರಾಮಾಣಿಕವಾಗಿ ನಿರ್ವಹಿಸಿ ತಬ್ಬಲಿ ಜಾತಿಗಳ ಸಾಮಾಜಿಕ ಮತ್ತು ಆರ್ಥಿಕ ಮುಂಚಲನೆಯನ್ನು ಸಾಧ್ಯವಾಗಿಸಿ ಕರ್ನಾಟಕವನ್ನು ಕತ್ತಲೆಯಿಂದ ಪಾರುಮಾಡಿದ ಧೀಮಂತ ಮುಖ್ಯಮಂತ್ರಿ ದಿವಂಗತ ದೇವರಾಜು ಅರಸು ಅವರನ್ನು ಈ ನಾಡಿನ ಅವಕಾಶ ವಂಚಿತ ಸಮುದಾಯಗಳೆಲ್ಲವೂ ಮರೆಯದೇ ನೆನಪಿಟ್ಟುಕೊಳ್ಳಬೇಕು ಎಂದು ಹಿರಿಯಡಕ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ಸಮಾಜಶಾಸ್ತ್ರ ವಿಭಾಗ ಮುಖ್ಯಸ್ಥೆ ಮೀನಾಕ್ಷಿ ನಾಯ್ಕ ಹೇಳಿದರು. ಅವರು ಹಿರಿಯಡಕ ಸರ್ಕಾರಿ ಪ್ರಥಮದರ್ಜೆ ಕಾಲೇಜಿನಲ್ಲಿ ಐಕ್ಯುಎಸಿ ಅಡಿಯಲ್ಲಿ ಕನ್ನಡ, ಸಮಾಜಶಾಸ್ತ್ರ ವಿಭಾಗಗಳು ರಾ.ಸೇ.ಯೋ. ಘಟಕದ ಜೊತೆಗೆ ಆಯೋಜಿಸಿದ ದಿವಂಗತ ದೇವರಾಜು ಅರಸು ಅವರ 111ನೇ ಜನ್ಮ ದಿನಾಚರಣೆಯಲ್ಲಿ ವಿಶೇಷ ಉಪನ್ಯಾಸ ನೀಡಿ ಮಾತನಾಡಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಪ್ರಾಂಶುಪಾಲ ಡಾ. ಜಯಪ್ರಕಾಶ್‌ ಶೆಟ್ಟಿ ಹೆಚ್‌ ಅವರು ದೇವರಾಜ ಅರಸು ತನ್ನ ಇಡೀ ಆಳ್ವಿಕೆಯನ್ನು ಸಮೂಹದಬುದ್ಧಿಯ ವಿಕಾಸಕ್ಕೆ ಬಳಸಿದರಲ್ಲದೆ, ಬುದ್ಧಿಯ ದ್ವೇಷಕ್ಕೆ ಬಳಸಲಿಲ್ಲ ಎಂದರು.

ಕನ್ನಡ ವಿಭಾಗ ಮುಖ್ಯಸ್ಥೆ ಡಾ. ಸೌಮ್ಯಲತಾ ಪಿ., ಐಕ್ಯುಎಸಿ ಸಂಚಾಲಕ ಡಾ. ಲಿತಿನ್‌ ಬಿ ಎಂ., ವಾಣಿಜ್ಯಶಾಸ್ತ್ರ ವಿಭಾಗ ಮುಖ್ಯಸ್ಥ ಡಾ. ರಾಧಾಕೃಷ್ಣ ನಾಯಕ್, ರಾಷ್ಟ್ರೀಯ ಸೇವಾ ಕಾರ್ಯಕ್ರಮಾಧಿಕಾರಿ ನಂದೀಶ್‌ ಕುಮಾರ್‌ ಕೆ ಸಿ., ಆಂಗ್ಲಭಾಷಾ ವಿಭಾಗದ ನಿಶ್ಚಿತ ಎಸ್‌ ಹೋಬಳಿದಾರ್‌,‌ ರಾಜ್ಯಶಾಸ್ತ್ರ ವಿಭಾಗದ ಅಪರ್ಣ ಕೆ ಯು ಉಪಸ್ಥಿತರಿದ್ದರು. ಅಭೀಷ ಸ್ವಾಗತಿಸಿ, ಅಕ್ಷಯಾ ವಂದಿಸಿ, ಪ್ರಿಯಾ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಟಾಟಾ ಏರಿಸ್ ಬಿಡುಗಡೆ: ಮಾರುತಿ ಡಿಜೈರ್‌ಗೆ ಹೊಸ ಪ್ರತಿಸ್ಪರ್ಧಿಯಾಗಲಿದೆಯೇ ಈ ಕಾರು?

ನವದೆಹಲಿ, ಸೆ.26: ಟಾಟಾ ಮೋಟಾರ್ಸ್ ಭಾರತದಲ್ಲಿ 'ಏರಿಸ್' ಅನ್ನು ರೂ. 5.29...

ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನಕ್ಕಾಗಿ ಭಾರತದ ಪ್ರಯತ್ನಕ್ಕೆ ಪೋರ್ಚುಗಲ್ ಮತ್ತು ಮಾರಿಷಸ್ ಬೆಂಬಲ

ನವದೆಹಲಿ, ಸೆ.26: ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ಶಾಶ್ವತ ಸ್ಥಾನ ಪಡೆಯುವ ಭಾರತದ...

ಏಷ್ಯನ್ ಗೇಮ್ಸ್‌ ಕಬಡ್ಡಿ: ಭಾರತಕ್ಕೆ ಅವಳಿ ಚಿನ್ನ

ಯು.ಬಿ.ಎನ್.ಡಿ., ಸೆ.26: ಜಪಾನ್‌ನಲ್ಲಿ ನಡೆಯುತ್ತಿರುವ ಐಚಿ-ನಗೋಯಾ ಏಷ್ಯನ್ ಗೇಮ್ಸ್ 2026ರಲ್ಲಿ ಭಾರತದ...

ಎಸ್.ಐ.ಆರ್ ಆದೇಶ ಸರ್ವಾನುಮತದಿಂದ ಅನುಮೋದನೆ: ಚುನಾವಣಾ ಆಯೋಗ

ನವದೆಹಲಿ, ಸೆ.26: ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಎಸ್.ಐ.ಆರ್ ಆದೇಶ...
error: Content is protected !!