ಉಡುಪಿ, ಆ.23: ಜಿಲ್ಲೆಯ ಬ್ರಹ್ಮಾವರ ತಾಲೂಕು ಕೋಡಿ ಕನ್ಯಾನ ಜೆಟ್ಟಿ ಎದುರಿನ ಹೊಳೆಯಲ್ಲಿ ಸಮುದ್ರದ ಅಳಿವೆವರೆಗೆ ಹೂಳೆತ್ತುವ ಕಾಮಗಾರಿಯಲ್ಲಿ ಹೂಳೆತ್ತಿ ಸಂಗ್ರಹಿಸಿರುವ ಮರಳು ಮಿಶ್ರಿತ ಹೂಳನ್ನು ತೆರವುಗೊಳಿಸುವ ಕಾಮಗಾರಿ ಸ್ಥಳದಲ್ಲಿರುವ 21 ಅಕೇಶಿಯಾ, 8 ಮ್ಯಾಂಜಿಯಂ ಹಾಗೂ 35 ಗಾಳಿ ಜಾತಿಯ ಮರಗಳು ಸೇರಿದಂತೆ ಒಟ್ಟು 64 ಗಿಡ – ಮರಗಳನ್ನು ಕಡಿಯಲು ಉದ್ದೇಶಿಸಿದ್ದು, ಕರ್ನಾಟಕ ವೃಕ್ಷ ಸಂರಕ್ಷಣಾ ಕಾಯ್ದೆ ಪ್ರಕರಣದಡಿ 50 ಕ್ಕಿಂತ ಹೆಚ್ಚಿನ ಮರಗಳು ಕಡಿಯಬೇಕಾದಲ್ಲಿ ಸಾರ್ವಜನಿಕರ ಅಹವಾಲನ್ನು ಸ್ವೀಕರಿಸಿ, ಕ್ರಮ ಕೈಗೊಳ್ಳಬೇಕಾಗಿರುವ ಹಿನ್ನೆಲೆ, ಸೆಪ್ಟಂಬರ್ 2 ರಂದು ಮಧ್ಯಾಹ್ನ 3 ಗಂಟೆಗೆ ಉಡುಪಿ ವಲಯ ಕಚೇರಿಯ ಸಭಾಂಗಣದಲ್ಲಿ ಸಾರ್ವಜನಿಕ ಅಹವಾಲು ಸಭೆಯನ್ನು ಆಯೋಜಿಸಲಾಗಿದೆ. ಸಾರ್ವಜನಿಕರಿಂದ ಮರಗಳ ಕಡಿಯುವ ಬಗ್ಗೆ ಆಕ್ಷೇಪಣೆಗಳಿದ್ದಲ್ಲಿ ಖುದ್ದಾಗಿ ಸಭೆಯಲ್ಲಿ ಹಾಜರಾಗಿ ಅಥವಾ ಸದ್ರಿ ದಿನಾಂಕದ ಒಳಗಾಗಿ ವೃಕ್ಷ ಅಧಿಕಾರಿ ಹಾಗೂ ಉಪ ಅರಣ್ಯ ಸಂರಕ್ಷಣಾಧಿಕಾರಿ, ಕುಂದಾಪುರ ವಿಭಾಗ, ಕುಂದಾಪುರ – 576201 ಇವರಿಗೆ ಲಿಖಿತ ರೂಪದಲ್ಲಿ ಅಥವಾ ಇ-ಮೇಲ್ kpurforest@yahoo.com ಮೂಲಕವೂ ಆಕ್ಷೇಪಣೆಗಳನ್ನು ಸಲ್ಲಿಸಬಹುದಾಗಿದೆ ಎಂದು ಕುಂದಾಪುರ ವಿಭಾಗದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿಗಳ ಕಚೇರಿ ಪ್ರಕಟಣೆ ತಿಳಿಸಿದೆ.
ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ
ಮರಗಳ ತೆರವು: ಸಾರ್ವಜನಿಕ ಅಹವಾಲು ಸಭೆ
Date:




By
ForthFocus™