ಮಲ್ಪೆ, ಆ.23: ಸರಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ ತೆಂಕನಿಡಿಯೂರು ಇಲ್ಲಿನ ಐಕ್ಯೂಎಸಿ ಹಾಗೂ ರಾಜ್ಯಶಾಸ್ತ್ರ ವಿಭಾಗ ಮತ್ತು ಮಂಗಳೂರು ವಿಶ್ವವಿದ್ಯಾನಿಲಯ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಹಯೋಗದಲ್ಲಿ “ಸ್ವಾಮಿ ವಿವೇಕಾನಂದರು: ಭಾರತದ ಸ್ವಾತಂತ್ರ್ಯ ಚಳುವಳಿಯ ಸ್ಪೂರ್ತಿದಾಯಕ ಶಕ್ತಿ” ಎಂಬ ವಿಶೇಷ ಉಪನ್ಯಾಸ ಕಾರ್ಯಕ್ರಮ ಬಡೆಯಿತು. ರಾಮಕೃಷ್ಣ ಮಿಷನ್ ಕಡಪ, ಇಲ್ಲಿನ ಮುಖ್ಯಸ್ಥರಾದ ಸ್ವಾಮಿ ಅನುಪಮಾನಂದಜಿ ಉಪನ್ಯಾಸ ನೀಡುತ್ತಾ, ಭಾರತ ಸ್ವಾತಂತ್ರ್ಯ ಸಂಗ್ರಾಮಕ್ಕೆ ಸ್ವಾಮಿ ವಿವೇಕಾನಂದರು ಮುಖ್ಯ ಆಧ್ಯಾತ್ಮಿಕ ಮತ್ತು ಸಂಘಟನಾತ್ಮಕ ಸ್ಫೂರ್ತಿಯಾಗಿದ್ದರು, ಗುರಿ ಮುಟ್ಟುವ ತನಕ ನಿಲ್ಲದಿರಿ ಎಂಬ ವಿವೇಕ ವಾಣಿ ರಾಷ್ಟ್ರೀಯವಾದಿಗಳಲ್ಲಿ ನಿರ್ಭೀತ ನಡೆಗೆ ಕಾರಣವಾಯಿತು. ತಿಲಕ್, ಅರವಿಂದ್ ಘೋಷ್, ಮಹಾತ್ಮ ಗಾಂಧಿ, ಭಗತ್ ಸಿಂಗ್ ಮುಂತಾದ ಎಲ್ಲಾ ವರ್ಗಗಳ ಸ್ವಾತಂತ್ರ್ಯ ಹೋರಾಟಗಾರರು ವಿವೇಕಾನಂದರ ಚಿಂತನೆಗಳಿಂದ ಪ್ರೇರಿತರಾಗಿದ್ದರು. ವೈವಿಧ್ಯತೆಯನ್ನು ಘೋಷಿಸಿ ವೈಷಮ್ಯಗಳನ್ನು ದೂರ ಮಾಡಿ ಸಾಮಾಜಿಕ ನ್ಯೂನತೆಗಳನ್ನು ಹೋಗಲಾಡಿಸಿ ಐಕ್ಯತೆಯನ್ನು ಸಾಧಿಸುವ ಮತ್ತು ಸ್ವಾತಂತ್ರ್ಯವನ್ನು ಗಳಿಸುವ ಪ್ರಭುದ್ಧ ರಾಷ್ಟ್ರೀಯವಾದಿಯಾಗಿದ್ದರು ಎಂದರು.
ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ನಿತ್ಯಾನಂದ ವಿ ಗಾಂವ್ಕರ್ ಅವರು ಮಾತನಾಡುತ್ತಾ, ಇಂದಿನ ಯುವಜನತೆ ವಿವೇಕಾನಂದರ ವೈಚಾರಿಕ ಚಿಂತನೆಗಳನ್ನು ಅರ್ಥೈಸಿಕೊಳ್ಳಬೇಕಾದ ಅಗತ್ಯತೆಗಳನ್ನು ತಿಳಿಸಿದರು. ಮಂಗಳೂರು ವಿಶ್ವವಿದ್ಯಾನಿಲಯ ಸ್ವಾಮಿ ವಿವೇಕಾನಂದ ಅಧ್ಯಯನ ಕೇಂದ್ರದ ಸಂಯೋಜಕರಾದ ಡಾ. ಚಂದ್ರು ಹೆಗಡೆ ವಿವೇಕಾನಂದ ಅಧ್ಯಯನ ಕೇಂದ್ರದ ಉದ್ದೇಶಗಳೊಂದಿಗೆ ಕಾರ್ಯಕ್ರಮದ ಔಚಿತ್ಯ ತಿಳಿಸಿ ಸ್ವಾಗತಿಸಿದರು. ಅರ್ಥಶಾಸ್ತ್ರ ಸಹ ಪ್ರಾಧ್ಯಾಪಕಿ ಡಾ.ಜಯಮಂಗಳ, ಗ್ರಂಥಪಾಲಕರಾದ ಕೃಷ್ಣ ಸಾಸ್ತಾನ, ಕನ್ನಡ ಸಹಾಯಕ ಪ್ರಾಧ್ಯಾಪಕರಾದ ಮಾರುತಿ, ಸಂಖ್ಯಾಶಾಸ್ತ್ರ ಪ್ರಾಧ್ಯಾಪಕರಾದ ಉಮೇಶ್ ಪೈ, ರಾಜ್ಯಶಾಸ್ತ್ರ ಉಪನ್ಯಾಸಕರಾದ ಆರತಿ ಜಿ ಇತಿಹಾಸ ಉಪನ್ಯಾಸಕಿ ಹರಿಣಾಕ್ಷಿ ಇನ್ನಿತರು ಉಪಸ್ಥಿತರಿದ್ದರು.
ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಘು ನಾಯ್ಕ್ ವಂದಿಸಿದರು. ಕಾರ್ಯಕ್ರಮ ಆಯೋಜಿಸಿದ ರಾಜ್ಯಶಾಸ್ತ್ರ ಸಹಪ್ರಾಧ್ಯಾಪಕ ಪ್ರಶಾಂತ್ ನೀಲಾವರ ಕಾರ್ಯಕ್ರಮ ನಿರೂಪಿಸಿದರು ಬಿಎ ಪ್ರಥಮ ದ್ವಿತೀಯ ಹಾಗೂ ತೃತೀಯ ಪದವಿ ವಿದ್ಯಾರ್ಥಿಗಳು ಕಾರ್ಯಕ್ರಮದ ಪ್ರಯೋಜನ ಪಡೆದರು.




By
ForthFocus™