Sunday, October 25, 2026
Sunday, October 25, 2026

ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಸರಣಿ ಉಪನ್ಯಾಸ ಮಾಲಿಕೆ ಉದ್ಘಾಟನೆ

ಬಿ. ಬಿ. ಹೆಗ್ಡೆ ಕಾಲೇಜು: ಜೀವನ ಮೌಲ್ಯ ಸರಣಿ ಉಪನ್ಯಾಸ ಮಾಲಿಕೆ ಉದ್ಘಾಟನೆ

Date:

ಕುಂದಾಪುರ, ಆ.23: ವಿದ್ಯಾರ್ಥಿ ದೆಸೆಯಲ್ಲಿ ದೇಹ, ಬುದ್ದಿ, ಭಾವನೆ, ಆತ್ಮಕ್ಕೆ ಶಿಕ್ಷಣ ಸಿಗಬೇಕು. ಆ ಶಿಕ್ಷಣ ವೇದ ವಿಜ್ಞಾನ, ಕೃಷಿ, ಕಲಾಕೌಶಲ, ಯೋಗ ಎನ್ನುವುದನ್ನು ಕಲಿಸಬೇಕು ಮತ್ತು ಮೌಲ್ಯಗಳು ಪರಂಪರಾಗತವಾಗಿ ಹಸ್ತಾಂತರವಾಗುವುದರೊಂದಿಗೆ ಮೌಲ್ಯವರ್ಧನೆಗೊಳ್ಳುವ ಮೂಲಕ ಜನಮಾನಸದಲ್ಲಿ ಉಳಿಯುವಂತಾಗಬೇಕಾದರೆ ಶಿಕ್ಷಣ ಸಂಸ್ಥೆಗಳಲ್ಲಿ ಇಂತಹ ಪಠ್ಯಪೂರಕ ಕಾರ್ಯಗಳಾಗಬೇಕು ಎಂದು ನಂದಗೋಕುಲ ಶಿಶುಮಂದಿರದ ವ್ಯವಸ್ಥಾಪಕರಾದ ಕಟ್ಕೇರಿ ಪ್ರೇಮಾನಂದ್ ಶೆಟ್ಟಿ ಹೇಳಿದರು. ಅವರು ಇಲ್ಲಿನ ಡಾ. ಬಿ. ಬಿ. ಹೆಗ್ಡೆ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿ ಕ್ಷೇಮಪಾಲನಾ ಸಮಿತಿ ಆಯೋಜಿಸಿದ ಜೀವನ ಮೌಲ್ಯ ಸರಣಿ ಉಪನ್ಯಾಸ ಮಾಲಿಕೆಯನ್ನು ಉದ್ಘಾಟಿಸಿ ಮಾತನಾಡಿದರು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ಡಾ. ಕೆ. ಉಮೇಶ್ ಶೆಟ್ಟಿ ಅಧ್ಯಕ್ಷತೆ ವಹಿಸಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾ ಅಧಿಕಾರಿಗಳಾದ ರಕ್ಷಿತ್ ರಾವ್ ಗುಜ್ಜಾಡಿ, ರೇಷ್ಮಾ ಶೆಟ್ಟಿ ಉಪಸ್ಥಿತರಿದ್ದರು. ವಿದ್ಯಾರ್ಥಿಗಳಾದ ರಾಹುಲ್ ಅಮೀನ್ ಸ್ವಾಗತಿಸಿ, ನಾಗೇಂದ್ರ ವಂದಿಸಿ, ಅನನ್ಯ ಅಡಿಗ ನಿರೂಪಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನ.1: ಗುಜ್ಜಾಡಿ ನಾಯಕವಾಡಿಯಲ್ಲಿ ಉಚಿತ ಆರೋಗ್ಯ ತಪಾಸಣೆ ಶಿಬಿರ

ಗುಜ್ಜಾಡಿ, ಅ.25: ಕರ್ನಾಟಕ ಸರಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ಆಯುಷ್...

ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾದರೆ ಸೂಕ್ತ ಕ್ರಮ: ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್

ಬೆಂಗಳೂರು, ಅ.25: ಬೆಂಗಳೂರಿನ ಐಟಿ ಕಂಪನಿಗಳಲ್ಲಿ ಕನ್ನಡಿಗರಿಗೆ ಉದ್ಯೋಗಾವಕಾಶಗಳಲ್ಲಿ ಅನ್ಯಾಯವಾಗುತ್ತಿದೆ ಎಂಬ...

ನ.1: ಕಾಪು ಶ್ರೀ ಸುಧೀಂದ್ರ ಆಯುರ್ ಕ್ಲಿನಿಕ್ ನಲ್ಲಿ ಉಚಿತ ಆರೋಗ್ಯ ತಪಾಸಣಾ ಶಿಬಿರ

ಕಾಪು, ಅ.25: ಕಾಪು ಪರಿಸರದ ಜನತೆಗೆ ಆರೋಗ್ಯ ಸೇವೆ ಸಲ್ಲಿಸುತ್ತಿರುವ ಶ್ರೀ...
error: Content is protected !!