Tuesday, August 25, 2026
Tuesday, August 25, 2026

ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಿ.ಎಲ್.ಎ-2ಗಳ ಸಭೆ

ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಿ.ಎಲ್.ಎ-2ಗಳ ಸಭೆ

Date:

ಉಡುಪಿ, ಆ.23: ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾದ ರಮೇಶ್ ಕಾಂಚನ್ ಅವರ ನೇತೃತ್ವದಲ್ಲಿ ಉಡುಪಿ ಬ್ಲಾಕ್ ಕಾಂಗ್ರೆಸ್ ವ್ಯಾಪ್ತಿಯ ಬಿ.ಎಲ್.ಎ-2ಗಳ ಸಭೆ ಬ್ರಹ್ಮಗಿರಿಯ ಕಾಂಗ್ರೆಸ್ ಭವನದಲ್ಲಿ ನಡೆಯಿತು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಬಿ.ಎಲ್.ಎ-2ಗಳಿಂದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆಯ ಪ್ರಥಮ ಹಂತದ ಮಾಹಿತಿಯನ್ನು ಪಡೆಯಲು ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ, ಮಂಗಳೂರು ಮಹಾನಗರ ಪಾಲಿಕೆಯ ಮಾಜಿ ಸದಸ್ಯರಾದ ಎ. ಸಿ ವಿನಯರಾಜ್ ಅವರು ಆಗಮಿಸಿ ಅಂಕಿ ಅಂಶಗಳನ್ನು ಪಡೆದು ಮುಂದಿನ ಹಂತದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ ಪ್ರಕ್ರಿಯೆಯಲ್ಲಿ ಬಿ.ಎಲ್.ಎ-2ಗಳ ಕರ್ತವ್ಯದ ಬಗ್ಗೆ ಮಾಹಿತಿ ಹಾಗೂ ಮಾರ್ಗದರ್ಶನ ನೀಡಿ ಎಲ್ಲಾ ಬಿ.ಎಲ್.ಎ-2ಗಳು ಸಕ್ರಿಯವಾಗಿ ತಮ್ಮ ಕರ್ತವ್ಯವನ್ನು ನಿರ್ವಹಿಸುವಂತೆ ತಿಳಿಸಿದರು.

ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಅಧ್ಯಕ್ಷ ರಮೇಶ್ ಕಾಂಚನ್ ಅವರು ಯುವಕರನ್ನು ಸಂಘಟನೆಯ ಮೂಲಕ ಸದೃಢಗೊಳಿಸುವ ನಿಟ್ಟಿನಲ್ಲಿ ಕರ್ನಾಟಕ ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿರುವ ಭಾರತ್ ಜೋಡೋ ಯುವಕರ ಸಂಘಟನೆಯ ನೋಂದಣಿ ಪ್ರಕ್ರಿಯೆ ಈಗಾಗಲೇ ಪ್ರಾರಂಭವಾಗಿದ್ದು ಎಲ್ಲಾ ಬೂತ್‌ನ ಪಕ್ಷದ ನಾಯಕರು ಹಾಗೂ ಕಾರ್ಯಕರ್ತರು 16ರಿಂದ 35ರ ವಯೋಮಿತಿಯ ಯುವಕ‌ ಯುವತಿಯರನ್ನು ನೋಂದಾಯಿಸಲು ಮುತುವರ್ಜಿ ವಹಿಸಬೇಕೆಂದು ಕರೆ ನೀಡಿದರು.

ಪಕ್ಷದ ನಾಯಕರಾದ ಸುರೇಶ್ ಶೆಟ್ಟಿ ಬನ್ನಂಜೆ, ಗಣೇಶ್ ನೆರ್ಗಿ, ಸಜ್ಜನ್ ಶೆಟ್ಟಿ, ಸೂರಜ್ ಕರ್ಕೇರ, ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪದಾಧಿಕಾರಿಗಳು, ಬಿ.ಎಲ್.ಎ-2ಗಳು ಉಪಸ್ಥಿತರಿದ್ದರು.
ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ಸತೀಶ್ ಕುಮಾರ್ ಮಂಚಿ ಕಾರ್ಯಕ್ರಮ ನಿರೂಪಿಸಿದರು. ಉಡುಪಿ ಬ್ಲಾಕ್ ಕಾಂಗ್ರೆಸ್ ಸಮಿತಿಯ ಉಪಾಧ್ಯಕ್ಷರಾದ ಸತೀಶ್ ಕೊಡವೂರು ವಂದಿಸಿದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆ. 27: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಆ.24: ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು...

ದೇಶದ ಪ್ರಗತಿಯಲ್ಲಿ ಕೃಷಿ, ಹೈನುಗಾರಿಕೆಯ ಪಾತ್ರ ಪ್ರಮುಖವಾಗಿದೆ: ಉಮೇಶ್ ಕುಂದರ್

ಕೋಟ, ಆ.24: ದೇಶದ ಸುಭಿಕ್ಷೆಗೆ ಕೃಷಿ ಮತ್ತು ಹೈನುಗಾರಿಕೆ ಮೂಲ ಕಾರಣವಾಗಿದೆ...

ತೆಂಕನಿಡಿಯೂರು ಕಾಲೇಜು: ‘ಹೊಸ ದಿಗಂತ’- ಪ್ರಥಮ ವರ್ಷದ ವಿದ್ಯಾರ್ಥಿಗಳ ದಿಕ್ಸೂಚಿ ಕಾರ್ಯಕ್ರಮ ಉದ್ಘಾಟನೆ

ತೆಂಕನಿಡಿಯೂರು, ಆ.24: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ...
error: Content is protected !!