Tuesday, August 25, 2026
Tuesday, August 25, 2026

ತೆಂಕನಿಡಿಯೂರು ಕಾಲೇಜು: ‘ಹೊಸ ದಿಗಂತ’- ಪ್ರಥಮ ವರ್ಷದ ವಿದ್ಯಾರ್ಥಿಗಳ ದಿಕ್ಸೂಚಿ ಕಾರ್ಯಕ್ರಮ ಉದ್ಘಾಟನೆ

ತೆಂಕನಿಡಿಯೂರು ಕಾಲೇಜು: ‘ಹೊಸ ದಿಗಂತ’- ಪ್ರಥಮ ವರ್ಷದ ವಿದ್ಯಾರ್ಥಿಗಳ ದಿಕ್ಸೂಚಿ ಕಾರ್ಯಕ್ರಮ ಉದ್ಘಾಟನೆ

Date:

ತೆಂಕನಿಡಿಯೂರು, ಆ.24: ತೆಂಕನಿಡಿಯೂರಿನ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರದ ಆಂತರಿಕ ಗುಣಮಟ್ಟ ಭರವಸೆ ಕೋಶ ಹಾಗೂ ಉದ್ಯೋಗ ಮಾಹಿತಿ ಮತ್ತು ಮಾರ್ಗದರ್ಶನ ಕೋಶದ ಜಂಟಿ ಆಶ್ರಯದಲ್ಲಿ ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ‘ಹೊಸ ದಿಗಂತ – ಪದವಿ ಶಿಕ್ಷಣಕ್ಕೆ ಆತ್ಮವಿಶ್ವಾಸದ ಆರಂಭ’ ಎಂಬ ದಿಕ್ಸೂಚಿ ಕಾರ್ಯಕ್ರಮ ಕಾಲೇಜಿನ ಎವಿ ಸಭಾಂಗಣದಲ್ಲಿ ನಡೆಯಿತು. ಕಾಲೇಜಿನ ಪ್ರಾಂಶುಪಾಲರಾದ ಪ್ರೊ. ನಿತ್ಯಾನಂದ ವಿ. ಗಾಂವ್ಕರ್ ಅವರು ದೀಪ ಬೆಳಗಿಸುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು, ಪದವಿ ಶಿಕ್ಷಣವು ವಿದ್ಯಾರ್ಥಿಗಳ ಭವಿಷ್ಯವನ್ನು ರೂಪಿಸುವ ಪ್ರಮುಖ ಹಂತವಾಗಿದೆ. ಶೈಕ್ಷಣಿಕ ಜ್ಞಾನದ ಜೊತೆಗೆ ರೀಸನಿಂಗ್ ಮತ್ತು ಆಪ್ಟಿಟ್ಯೂಡ್, ಸಂವಹನ, ಡಿಜಿಟಲ್ ಸಿದ್ಧತೆ, ವೃತ್ತಿ ಆಯ್ಕೆಗಳು, ಜೀವನ ಕೌಶಲ್ಯಗಳನ್ನು ಬೆಳೆಸಿಕೊಂಡು ಆತ್ಮವಿಶ್ವಾಸದಿಂದ ಭವಿಷ್ಯವನ್ನು ಎದುರಿಸಬೇಕು ಎಂದು ಹೊಸದಾಗಿ ಸೇರ್ಪಡೆಯಾದ ವಿದ್ಯಾರ್ಥಿಗಳಿಗೆ ಕರೆ ನೀಡಿದರು.

ಕಾಲೇಜಿನ ವಿವಿಧ ವಿಭಾಗಗಳ ಮುಖ್ಯಸ್ಥರು ಉಪಸ್ಥಿತರಿದ್ದು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಐಕ್ಯೂಎಸಿ ಸಂಯೋಜಕರಾದ ಡಾ. ವಿಷ್ಣುಮೂರ್ತಿ ಪ್ರಭು, ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಡಾ. ರಘು ನಾಯ್ಕ್, ಯೂತ್ ರೆಡ್ ಕ್ರಾಸ್ ಘಟಕದ ಸಂಯೋಜನಾಧಿಕಾರಿ ಪ್ರಶಾಂತ್ ನೀಲಾವರ, ಸಂಖ್ಯಾಶಾಸ್ತ್ರ ವಿಷಯದ ಸಹ ಪ್ರಾಧ್ಯಾಪಕರಾದ ಉಮೇಶ್ ಪೈ, ಮುಂತಾದವರು ಹಾಜರಿದ್ದರು. ಉದ್ಯೋಗ ಮಾಹಿತಿ ಅಧಿಕಾರಿ ಮರ್ವಿನ್ ಡಿಸೋಜ ಕಾರ್ಯಕ್ರಮ ನಡೆಸಿಕೊಟ್ಟರು. ಪ್ರಥಮ ವರ್ಷದ ವಿವಿಧ ಪದವಿ ತರಗತಿಗಳ ವಿದ್ಯಾರ್ಥಿಗಳು, ಉಪನ್ಯಾಸಕರು ಹಾಗೂ ಬೋಧಕೇತರ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ಆ. 27: ಉಡುಪಿಯಲ್ಲಿ ನೇರ ಸಂದರ್ಶನ

ಉಡುಪಿ, ಆ.24: ನಗರದ ಡಿ.ಬಿ.ಎಸ್ ಬ್ಯಾಂಕ್, ಧರಣಿ ಆರ್ಕೇಡ್, ಕಲ್ಸಂಕ, ಗುಂಡಿಬೈಲು...

ದೇಶದ ಪ್ರಗತಿಯಲ್ಲಿ ಕೃಷಿ, ಹೈನುಗಾರಿಕೆಯ ಪಾತ್ರ ಪ್ರಮುಖವಾಗಿದೆ: ಉಮೇಶ್ ಕುಂದರ್

ಕೋಟ, ಆ.24: ದೇಶದ ಸುಭಿಕ್ಷೆಗೆ ಕೃಷಿ ಮತ್ತು ಹೈನುಗಾರಿಕೆ ಮೂಲ ಕಾರಣವಾಗಿದೆ...

ಕ್ರೀಡಾ ಕ್ಷೇತ್ರದಲ್ಲಿ ಜ್ಞಾನಸುಧಾ ವಿದ್ಯಾರ್ಥಿಗಳ ಅಮೋಘ ಸಾಧನೆ

ಗಣಿತನಗರ, ಆ.24: ಶಾಲಾ ಶಿಕ್ಷಣ ಇಲಾಖೆ (ಪದವಿಪೂರ್ವ) ಉಡುಪಿ ಜಿಲ್ಲೆ ಹಾಗೂ...
error: Content is protected !!