Sunday, November 15, 2026
Sunday, November 15, 2026

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೂತನ ಎನ್ ಸಿಸಿ ಕೆಡೆಟ್ ಗಳ ಪರಿಚಯ ಕಾರ್ಯಕ್ರಮ

ಕಾರ್ಕಳದ ಕ್ರಿಯೇಟಿವ್ ಪದವಿಪೂರ್ವ ಕಾಲೇಜಿನಲ್ಲಿ ನೂತನ ಎನ್ ಸಿಸಿ ಕೆಡೆಟ್ ಗಳ ಪರಿಚಯ ಕಾರ್ಯಕ್ರಮ

Date:

ಕಾರ್ಕಳ, ಆ.25: ಕ್ರಿಯೇಟಿವ್ ಕಾಲೇಜು, ಕಾರ್ಕಳದಲ್ಲಿ ನೂತನವಾಗಿ ಸೇರ್ಪಡೆಯಾದ ಎನ್‌ಸಿಸಿ ಕೆಡೆಟ್‌ಗಳಿಗಾಗಿ ಎನ್‌ಸಿಸಿ ಪರಿಚಯ ಕಾರ್ಯಕ್ರಮ ನಡೆಯಿತು. ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ವಹಿಸಿದ್ದರು. 6 ಕರ್ನಾಟಕ ನೌಕಾದಳ ಎನ್‌ಸಿಸಿ ಘಟಕ, ಉಡುಪಿಯ ಕಮಾಂಡಿಂಗ್ ಆಫೀಸರ್ ಕಮಾಂಡರ್ ಅಶ್ವಿನ್ ಎಂ. ರಾವ್ ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದರು. ಅತಿಥಿಗಳನ್ನು ಅಸೋಸಿಯೇಟ್ ಎನ್‌ಸಿಸಿ ಅಧಿಕಾರಿ ಸಬ್ ಲೆಫ್ಟಿನೆಂಟ್ ಮಹೇಶ್ ಆರ್. ಶೆಣೈ ಕೆ. ವೇದಿಕೆಗೆ ಬರಮಾಡಿಕೊಂಡರು. ಕಾರ್ಯಕ್ರಮದಲ್ಲಿ ಪಿಐ ಸ್ಟಾಫ್ ನೃಪತ್‌ರಾಜ್ ಸಿಂಗ್ ಉಪಸ್ಥಿತರಿದ್ದರು. ಪ್ರಾರ್ಥನೆ ಹಾಗೂ ದೀಪ ಪ್ರಜ್ವಲನೆಯೊಂದಿಗೆ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಯಿತು. ಬಳಿಕ ಮುಖ್ಯ ಅತಿಥಿಗಳು ಎನ್‌ಸಿಸಿಯ ಉದ್ದೇಶ, ಶಿಸ್ತು, ನಾಯಕತ್ವ, ದೇಶಭಕ್ತಿ ಹಾಗೂ ಎನ್‌ಸಿಸಿ ಮೂಲಕ ದೊರೆಯುವ ವಿವಿಧ ತರಬೇತಿ ಮತ್ತು ವೃತ್ತಿ ಅವಕಾಶಗಳ ಕುರಿತು ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ನೀಡಿದರು. ಅಧ್ಯಕ್ಷೀಯ ಭಾಷಣದಲ್ಲಿ ಪ್ರಾಂಶುಪಾಲರಾದ ವಿದ್ವಾನ್ ಗಣಪತಿ ಭಟ್ ಅವರು ವಿದ್ಯಾರ್ಥಿಗಳು ಎನ್‌ಸಿಸಿಯ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಉತ್ತಮ ವ್ಯಕ್ತಿತ್ವವನ್ನು ಬೆಳೆಸಿಕೊಂಡು ರಾಷ್ಟ್ರಸೇವೆಗೆ ತಮ್ಮನ್ನು ಸಮರ್ಪಿಸಿಕೊಳ್ಳುವಂತೆ ಕರೆ ನೀಡಿದರು. ಕಾರ್ಯಕ್ರಮದ ಅಂತ್ಯದಲ್ಲಿ ಮುಖ್ಯ ಅತಿಥಿಗಳನ್ನು ಸ್ಮರಣಿಕೆಯನ್ನು ನೀಡಿ ಗೌರವಿಸಲಾಯಿತು. ವಂದನಾರ್ಪಣೆ ಹಾಗೂ ರಾಷ್ಟ್ರಗೀತೆಯೊಂದಿಗೆ ಕಾರ್ಯಕ್ರಮವು ಸಮಾಪ್ತಿಯಾಯಿತು.

Share post:

ಜನಪ್ರಿಯ ಸುದ್ದಿ

ಇಂತಹ ಇನ್ನಷ್ಟು ಸುದ್ದಿಗಳು
ಸಂಬಂಧಿತ ಸುದ್ದಿ

ನೆಟ್ ಬಾಲ್ ಪಂದ್ಯಾಟದಲ್ಲಿ ಸರಸ್ವತಿ ವಿದ್ಯಾಲಯಕ್ಕೆ ಅವಳಿ ಪ್ರಶಸ್ತಿ

ಉಡುಪಿ, ನ.14: ಶಾಲಾ ಶಿಕ್ಷಣ ಇಲಾಖೆ ಉಡುಪಿ ಜಿಲ್ಲೆ ಮತ್ತು ಮೂಕಾಂಬಿಕಾ...

ಶಿಕ್ಷಣ-ಕ್ರೀಡೆ-ಸಾಂಸ್ಕೃತಿಕ-ಶಿಸ್ತು ಒಳಗೊಂಡ ಪರಿಪೂರ್ಣ ಸಂಸ್ಥೆ ಜ್ಞಾನಸುಧಾ: ಸೀತಾನದಿ ವಿಠಲ ಶೆಟ್ಟಿ

ಗಣಿತನಗರ, ನ.14: ವ್ಯಕ್ತಿ ಸದೃಢನಾಗಿರಲು ಕ್ರೀಡೆಯು ಬಹುಮುಖ್ಯ ಪಾತ್ರವಹಿಸುತ್ತದೆ. ದೈಹಿಕ ಶಕ್ತಿಯೇ...

ರಾಜ್ಯದ ಅಭಿವೃದ್ಧಿಗೆ ತುಳುನಾಡಿನ ಕೊಡುಗೆ ಮಹತ್ತರ: ಜಿಲ್ಲಾಧಿಕಾರಿ ಸ್ವರೂಪ ಟಿ.ಕೆ

ಉಡುಪಿ, ನ.14: ಜನರನ್ನು ತಲುಪಲು ಆ ಪ್ರದೇಶದ ಭಾಷೆಯ ಕಲಿಕೆ ಅತೀ...

ಪಶು ಔಷಧಿ ವಿಕ್ರಯ ಕೇಂದ್ರಗಳ ಪ್ರಾರಂಭಕ್ಕೆ ಅರ್ಜಿ ಆಹ್ವಾನ

ಉಡುಪಿ, ನ.14: ಕೇಂದ್ರ ಸರ್ಕಾರದ ಆಂಊಆ ಇಲಾಖೆಯ ವತಿಯಿಂದ ಪಶುಪಾಲಕರಿಗೆ ಕೈಗೆಟುಕುವ...
error: Content is protected !!